ಮೈಸೂರು: ನಿವೃತ್ತ ಸಿಂಡಿಕೇಟ್ ಬ್ಯಾಂಕ್ ಮ್ಯಾನೇಜರ್ ರಘುಪತಿ ತಾಮ್ಹನ್ ಕರ್ ಅವರ ಮೊದಲ ಕೃತಿ’ ನೋಟಿನ ನಂಟು’ ಇದರ ಲೋಕರ್ಪಣಾ ಸಮಾರಂಭವು ದಿನಾಂಕ 07-07-2024 ರಂದು ಬೆಳಿಗ್ಗೆ 10.30ಕ್ಕೆ ಮೈಸೂರಿನ ಜಿ. ಎಲ್. ಬಿ. ರಸ್ತೆಯಲ್ಲಿರುವ ಇಂಜಿನಿಯರುಗಳ ಸಂಸ್ಥೆಯ ಎಸ್. ಪಿ. ಭಟ್ ಸಭಾಂಗಣದಲ್ಲಿ ನಡೆಯಲಿದೆ ಎಂದು ಕವಿತಾ ಪ್ರಕಾಶನದ ಗಣೇಶ ಅಮೀನಗಡ ತಿಳಿಸಿದ್ದಾರೆ.
ಪ್ರಸಿದ್ಧ ಹಿರಿಯ ಲೇಖಕರಾದ ಡಾ. ಸಿ. ಪಿ. ಕೆ ಇವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಪ್ರಸಿದ್ಧ ವಿದ್ವಾಂಸ ಹಾಗೂ ಲೇಖಕರಾದ ಡಾ. ಕಬ್ಬಿನಾಲೆ ವಸಂತ ಭಾರದ್ವಾಜ್ ಅವರು ಕೃತಿ ಬಿಡುಗಡೆಗೊಳಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕೆನರಾ ಬ್ಯಾಂಕಿನ ಪ್ರಾದೇಶಿಕ ಕಚೇರಿಯ ವಿಭಾಗೀಯ ಪ್ರಬಂಧಕರಾದ ಕೆ. ಗೋಪಾಲ ಹಾಗೂ ಬ್ಯಾಂಕ್ ಉದ್ಯೋಗಿಯಾಗಿರುವ ಲೇಖಕಿ ಡಾ. ಶುಭಶ್ರೀ ಪ್ರಸಾದ್ ಭಾಗವಹಿಸಲಿದ್ದಾರೆ.