ಪುತ್ತೂರು : ಶ್ರೀ ಮೂಕಾಂಬಿಕಾ ಕಲ್ಚರಲ್ ಅಕಾಡೆಮಿ (ರಿ.) ಪುತ್ತೂರು ಅರ್ಪಿಸುವ ‘ನೃತ್ಯೋತ್ಕ್ರಮಣ’ ರಂಗಪ್ರವೇಶ ಸ್ಮೃತಿ ಸಂಧ್ಯಾ ಭರತನಾಟ್ಯ ಕಾರ್ಯಕ್ರಮವನ್ನು ದಿನಾಂಕ 11 ಜನವರಿ 2026ರಂದು ಸಂಜೆ ಗಂಟೆ 5-00ಕ್ಕೆ ಪುತ್ತೂರಿನ ತೆಂಕಿಲ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದೆ.
ಈ ಕಾರ್ಯಕ್ರಮದಲ್ಲಿ ನೃತ್ಯ ಕಲಾವಿದರು, ಗುರುಗಳಾದ ಡಾ. ವೀಣಾ ಮೂರ್ತಿ ವಿಜಯ್ ಮತ್ತು ವಿದುಷಿ ರಾಜಶ್ರೀ ಉಳ್ಳಾಲ ಹಾಗೂ ದಂತ ವೈದ್ಯರಾದ ಡಾ. ಆಶಾ ಇವರುಗಳು ಅಭ್ಯಾಗತರಾಗಿ ಭಾಗವಹಿಸಲಿದ್ದಾರೆ. ಪುತ್ತೂರಿನ ಸುದ್ದಿ ಬಿಡುಗಡೆ ಪತ್ರಿಕೆಯ ಪತ್ರಕರ್ತ ಲೋಕೇಶ್ ಬನ್ನೂರು ಇವರನ್ನು ಗೌರವಿಸಲಾಗುವುದು. ವಿದ್ವಾನ್ ಬಿ. ದೀಪಕ್ ಕುಮಾರ್ ಇವರ ಭರತನಾಟ್ಯ ಪ್ರದರ್ಶನಕ್ಕೆ ನಟುವಾಂಗ ಮತ್ತು ಹಾಡುಗಾರಿಕೆಯಲ್ಲಿ ವಿದುಷಿ ಪ್ರೀತಿಕಲಾ, ಮೃದಂಗದಲ್ಲಿ ಬೆಂಗಳೂರಿನ ವಿದ್ವಾನ್ ಜಿ. ಗುರುಮೂರ್ತಿ, ಕೊಳಲಿನಲ್ಲಿ ಮಂಗಳೂರಿನ ಕುಮಾರಿ ಮೇಧಾ ಉಡುಪ ಮತ್ತು ಪಿಟೀಲಿನಲ್ಲಿ ಕುಮಾರಿ ತನ್ಮಯಿ ಉಪ್ಪಂಗಳ ಸಹಕರಿಸಲಿದ್ದಾರೆ.

