ಪುತ್ತೂರು : ಶ್ರೀ ಮೂಕಾಂಬಿಕಾ ಕಲ್ಚರಲ್ ಅಕಾಡೆಮಿ (ರಿ.) ಪುತ್ತೂರು ಪ್ರಸ್ತುತ ಪಡಿಸುವ ‘ನೃತ್ಯಾಂತರಂಗ 149’ ಸರಣಿ ಭರತನಾಟ್ಯ ಕಾರ್ಯಕ್ರಮವನ್ನು ದಿನಾಂಕ 24 ಅಕ್ಟೋಬರ್ 2026ರಂದು ಸಂಜೆ ಗಂಟೆ 5-45ಕ್ಕೆ ಪುತ್ತೂರು ದರ್ಬೆಯ ಶಶಿಶಂಕರ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಡಾ. ಮಂಜರಿಚಂದ್ರ ಪುಷ್ಪರಾಜ್ ಇವರ ಶಿಷ್ಯೆ ಕುಮಾರಿ ಸ್ತುತಿ ಪ್ರಭು ಇವರು ನೃತ್ಯ ಪ್ರದರ್ಶನ ನೀಡಲಿದ್ದು, ಸಂಸ್ಥೆಯ ಹಿರಿಯ ವಿದ್ಯಾರ್ಥಿ ಶ್ರೀಮತಿ ಸುಷ್ಮಾ ಮುರಳಿ ಇವರು ಅಭ್ಯಾಗತರಾಗಿ ಭಾಗವಹಿಸಲಿರುವರು.

