ಪುತ್ತೂರು : ಶ್ರೀ ಮೂಕಾಂಬಿಕಾ ಕಲ್ಚರಲ್ ಅಕಾಡೆಮಿ (ರಿ.) ಪುತ್ತೂರು ಅರ್ಪಿಸುವ ‘ನೃತ್ಯೋಪಸೇವನಂ’ ಭರತನಾಟ್ಯ ಕಾರ್ಯಕ್ರಮವನ್ನು ದಿನಾಂಕ 05 ಏಪ್ರಿಲ್ 2026ರಂದು ಸಂಜೆ ಗಂಟೆ 5-00ಕ್ಕೆ ಪುತ್ತೂರಿನ ತೆಂಕಿಲ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದೆ. ವಿದ್ವಾನ್ ಬಿ. ದೀಪಕ್ ಕುಮಾರ್ ಇವರ ಶಿಷ್ಯೆಯರಾದ ಅಕ್ಷತಾ ಕೆ., ಅಪೂರ್ವ ಗೌರಿ ಡಿ., ವಿಭಾ ಶ್ರೀ ವಿ. ಗೌಡ ಹಾಗೂ ಪ್ರಣಮ್ಯ ಪಾಲೆಚ್ಚಾರ್ ಇವರುಗಳಿಂದ ನೃತ್ಯ ಪ್ರಸ್ತುತಿ ನಡೆಯಲಿದೆ.
ಪುತ್ತೂರಿನ ವಿವೇಕಾನಂದ ಕಾಲೇಜು (ಸ್ವಾಯತ್ತ) ಸ್ನಾತಕೋತ್ತರ ವಿಭಾಗದ ಮುಖ್ಯಸ್ಥರಾದ ಡಾ. ವಿಜಯ ಸರಸ್ವತಿ ಬಿ. ಇವರು ದೀಪ ಪ್ರಜ್ವಲನೆ ಮಾಡಲಿದ್ದು, ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಅಧ್ಯಕ್ಷರಾದ ರಮೇಶ್ಚಂದ್ರ, ಮುಖ್ಯೋಪಾಧ್ಯಾಯರಾದ ಆಶಾ ಬೆಳ್ಳಾರೆ ಮತ್ತು ಶಿಕ್ಷಕಿಯಾದ ವೀಣಾ ಸರಸ್ವತಿ ಇವರುಗಳು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ನೃತ್ಯ ಕಾರ್ಯಕ್ರಮದ ಹಿಮ್ಮೇಳದಲ್ಲಿ ನಟುವಾಂಗ ವಿದ್ವಾನ್ ಬಿ. ದೀಪಕ್ ಕುಮಾರ್, ಹಾಡುಗಾರಿಕೆ ವಿದುಷಿ ಪ್ರೀತಿಕಲಾ, ಮೃದಂಗದಲ್ಲಿ ವಿದ್ವಾನ್ ಪವನ್ ಮಾಧವ್, ಕೊಳಲು ವಿದ್ವಾನ್ ಕೃಷ್ಣ ಗೋಪಾಲ್ ಮತ್ತು ಪಿಟೀಲು ಕುಮಾರಿ ತನ್ಮಯಿ ಉಪ್ಪಂಗಳ ಇವರುಗಳು ಸಹಕರಿಸಲಿದ್ದಾರೆ.

