ಉಡುಪಿ : ಉಡುಪಿ ಜಿಲ್ಲಾ ಯುವ ಬ್ರಾಹ್ಮಣ ಪರಿಷತ್ ವತಿಯಿಂದ ಜಿಲ್ಲಾಮಟ್ಟದ ಜಾನಪದ ನೃತ್ಯ ಸ್ಪರ್ಧೆ ‘ನೃತ್ಯ ಸಂಭ್ರಮ-2025’, ಉದ್ಯಮ ಮೇಳ ಮತ್ತು ಆಹಾರ ಮೇಳವನ್ನು ದಿನಾಂಕ 18 ಮೇ 2025ರಂದು ಉಡುಪಿ ಗುಂಡಿಬೈಲಿನ ಬ್ರಾಹ್ಮಿ ಸಭಾಭವನದಲ್ಲಿ ಆಯೋಜಿಸಲಾಗಿದೆ.
ಜಾನಪದ ನೃತ್ಯ ಸ್ಪರ್ಧೆಯನ್ನು ಶ್ರೀಕ್ಷೇತ್ರ ಕಟೀಲು ದೇವಸ್ಥಾನದ ಅರ್ಚಕ ಹರಿನಾರಾಯಣ ಆಸ್ರಣ್ಣ, ಉದ್ಯಮ ಮಳಿಗೆಗಳನ್ನು ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ ಹಾಗೂ ಆಹಾರ ಮೇಳವನ್ನು ಪಾಕಶಾಲಾ ವ್ಯವಸ್ಥಾಪಕ ನಿರ್ದೇಶಕ ಕೆ.ಎನ್. ವಾಸುದೇವ ಅಡಿಗ ಇವರುಗ ಉದ್ಘಾಟಿಸಲಿದ್ದಾರೆ. ಸಮಾರೋಪ ಸಮಾರಂಭ ಮತ್ತು ಬಹುಮಾನ ವಿತರಣೆ ಸಂಜೆ 5-30 ಗಂಟೆಗೆ ನಡೆಯಲಿದೆ.
ವಿಪ್ರ ಬಾಂಧವರಿಗಾಗಿ ಉಡುಪಿ ಜಿಲ್ಲಾ ಮಟ್ಟದ ಜಾನಪದ ನೃತ್ಯ ಸ್ಪರ್ಧೆ ಆಯೋಜಿಸಿದ್ದು, 40 ವರ್ಷದೊಳಗಿನ ಹಾಗೂ 40 ವರ್ಷ ಮೇಲ್ಪಟ್ಟ ಎರಡು ವಿಭಾಗಗಳಲ್ಲಿ ಸ್ಪರ್ಧೆ ನಡೆಯಲಿದೆ. ವಿಜೇತರಿಗೆ ಪ್ರಥಮ, ದ್ವಿತೀಯ ಹಾಗೂ ತೃತೀಯ ನಗದು ಸಹಿತ ಆಕರ್ಷಕ ಬಹುಮಾನ ನೀಡಲಾಗುವುದು. ವಿಪ್ರ ಉದ್ಯಮಿಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಉಚಿತ ಮಳಿಗೆಗಳನ್ನು ವ್ಯವಸ್ಥೆ ಮಾಡಲಾಗಿದೆ. ಪರಿಷತ್ತಿನ ವತಿಯಿಂದ ರುಚಿ ಶುಚಿಯಾದ ಆಹಾರ ಖಾದ್ಯಗಳ ಮೇಳವನ್ನು ಆಯೋಜಿಸಲಾಗಿದ್ದು, ಸಾರ್ವಜನಿಕರಿಗೆ ಮುಕ್ತ ಅವಕಾಶ ಕಲ್ಪಿಸಲಾಗಿದೆ.