ಉಡುಪಿ : ನೃತ್ಯನಿಕೇತನ ಕೊಡವೂರು ಆಯೋಜನೆ ಮಾಡಿದ ದೀಪಾವಳಿಯ ಪ್ರಯುಕ್ತ ಎರಡು ದಿವಸಗಳ ನೃತ್ಯನಿಕೇತನ ಕೊಡವೂರಿನ ಕುಟುಂಬ ಮಿಲನ ಕಾರ್ಯಕ್ರಮ ‘ನೃತ್ಯ ದೀಪೋತ್ಸವ’ವು ದಿನಾಂಕ 02 ನವೆಂಬರ್ 2024ರಂದು ಬಹಳ ಅದ್ಧೂರಿಯಾಗಿ ಉಡುಪಿಯ ಎಂ.ಜಿ.ಎಂ. ಕಾಲೇಜಿನ ಮುದ್ದಣ ಮಂಟಪದಲ್ಲಿ ಆರಂಭಗೊಂಡಿತು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಶ್ರೀಮತಿ ಪೂರ್ಣಿಮಾ, ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಗೌರವಾಧ್ಯಕ್ಷ ವಿಶ್ವನಾಥ್ ಶೆಣೈ, ಹಿರಿಯಡ್ಕ ಸಂಸ್ಕೃತಿ ಸಿರಿ ಟ್ರಸ್ಟಿನ ಮುರಳೀಧರ ಉಪಾಧ್ಯಾಯ ಹಿರಿಯಡ್ಕ, ಎಂ.ಜಿ.ಎಂ. ಕಾಲೇಜಿನ ಪ್ರಾಂಶುಪಾಲರಾದ ಲಕ್ಷ್ಮೀನಾರಾಯಣ ಕಾರಂತ್ ಉಮೇಶ್ ಭಟ್ ಮರ್ಣೆ, ಮಣಿಪಾಲ ಮೀಡಿಯಾ ನೆಟ್ವರ್ಕ್ ನ ಉಪಾಧ್ಯಕ್ಷರಾದ ರಾಮಚಂದ್ರ ಮಿಜಾರ್ ಹೆಚ್.ಪಿ.ಆರ್. ಶಿಕ್ಷಣ ಸಂಸ್ಥೆಯ ಮ್ಯಾನೇಜಿಂಗ್ ಡೈರೆಕ್ಟರ್ ಹರಿಪ್ರಸಾದ್ ರೈ, ಮಂಜುನಾಥ ಭಟ್, ಗಿರೀಶ್ ಬಾಯರಿ ಅತಿಥಿಗಳಾಗಿ ಭಾಗವಹಿಸಿದರು. ವಿಶಿಷ್ಟ ರೀತಿಯಲ್ಲಿ ಕಾರ್ಯಕ್ರಮದ ಉದ್ಘಾಟನೆ ನಡೆಯಿತು. ನಂತರ ಸಂಸ್ಥೆಯ ನೂರ ಐವತ್ತಕ್ಕೂ ಅಧಿಕ ಕಲಾವಿದರಿಂದ ನೃತ್ಯ ಕಾರ್ಯಕ್ರಮ ನಡೆಯಿತು. ಶಿಲ್ಪಾ ಜೋಶಿಯವರು ಕಾರ್ಯಕ್ರಮ ನಿರೂಪಿಸಿ, ವಿದ್ವಾನ್ ಸುಧೀರ್ ರಾವ್ ಕೊಡವೂರು ಸ್ವಾಗತಿಸಿ, ವಂದಿಸಿದರು.