ಪುತ್ತೂರು : ಶ್ರೀ ಮೂಕಾಂಬಿಕಾ ಕಲ್ಚರಲ್ ಅಕಾಡೆಮಿ (ರಿ.) ಪುತ್ತೂರು ಅರ್ಪಿಸುವ ‘ನೃತ್ಯಾಂತರಂಗ 120’ ನೃತ್ಯ ಕಾರ್ಯಕ್ರಮವನ್ನು ದಿನಾಂಕ 11 ಜನವರಿ 2025ರಂದು ಸಂಜೆ 5-30 ಗಂಟೆಗೆ ಪುತ್ತೂರಿನ ದರ್ಬೆಯ ಶಶಿಶಂಕರ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ಗುರು ಅನ್ನಪೂರ್ಣ ರಿತೇಶ್ ಇವರ ಶಿಷ್ಯೆ ಕುಮಾರಿ ರಿದ್ಧಿ ಹೆಚ್. ಶೆಟ್ಟಿ ಇವರು ನೃತ್ಯ ಪ್ರದರ್ಶನ ನೀಡಲಿದ್ದು, ಪುತ್ತೂರು ಇನ್ನರ್ ವೀಲ್ ಕ್ಲಬ್ ಇದರ ಅಧ್ಯಕ್ಷರಾದ ಶ್ರೀಮತಿ ರಾಜೇಶ್ವರಿ ಆಚಾರ್ ಇವರು ಅಭ್ಯಾಗತರಾಗಿ ಭಾಗವಹಿಸಲಿರುವರು.