ಪುತ್ತೂರು : ಶ್ರೀ ಮೂಕಾಂಬಿಕಾ ಕಲ್ಚರಲ್ ಅಕಾಡೆಮಿ (ರಿ.) ಪುತ್ತೂರು ಪ್ರಸ್ತುತ ಪಡಿಸುವ ‘ನೃತ್ಯಾಂತರಂಗ 140’ ವಿಶ್ವ ನೃತ್ಯ ಸಂಭ್ರಮ ಭರತನಾಟ್ಯ ಕಾರ್ಯಕ್ರಮವನ್ನು ದಿನಾಂಕ 29 ಏಪ್ರಿಲ್ 2026ರಂದು ಸಂಜೆ ಗಂಟೆ 5-00ಕ್ಕೆ ಪುತ್ತೂರಿನ ದರ್ಬೆಯ ಶಶಿಶಂಕರ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಸಂಸ್ಥೆಯ ವಿದ್ಯಾರ್ಥಿಗಳು ನೃತ್ಯ ಪ್ರದರ್ಶನ ನೀಡಲಿದ್ದು, ಪುತ್ತೂರಿನ ವಿವೇಕಾನಂದ ಕೇಂದ್ರೀಯ ಶಾಲೆಯ ಶಾಲಾ ಆಡಳಿತ ಸಮಿತಿಯ ಅಧ್ಯಕ್ಷರಾದ ಶ್ರೀಮತಿ ವಸಂತಿ ಕೆದಿಲ ಇವರು ಅಭ್ಯಾಗತರಾಗಿ ಭಾಗವಹಿಸಲಿರುವರು.

