ಪುತ್ತೂರು : ಶ್ರೀ ಮೂಕಾಂಬಿಕಾ ಕಲ್ಚರಲ್ ಅಕಾಡೆಮಿ (ರಿ.) ಪುತ್ತೂರು ಪ್ರಸ್ತುತ ಪಡಿಸುವ ‘ನೃತ್ಯಾಂತರಂಗ 148’ ಭರತನಾಟ್ಯ ಕಾರ್ಯಕ್ರಮವನ್ನು ದಿನಾಂಕ 06 ಸೆಪ್ಟೆಂಬರ್ 2026ರಂದು ಸಂಜೆ ಗಂಟೆ 5-30ಕ್ಕೆ ಪುತ್ತೂರಿನ ದರ್ಬೆಯ ಶಶಿಶಂಕರ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಬೆಂಗಳೂರಿನ ಭಾವನಾ ಶಂಕರ್ ಇವರು ನೃತ್ಯ ಪ್ರದರ್ಶನ ನೀಡಲಿದ್ದು, ಉಡುಪಿ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯ ಇದರ ಸಹಾಯಕ ಪ್ರೊಫೆಸರ್ ಶ್ರೀಮತಿ ಆಶ್ರಿತಾ ನವೀನ್ ಸರಳಾಯ ಇವರು ಅಭ್ಯಾಗತರಾಗಿ ಭಾಗವಹಿಸಲಿರುವರು.


