ಉಡುಪಿ : ಶಾರದಾ ನೃತ್ಯಾಲಯ (ರಿ.) ಮಾರ್ಪಳ್ಳಿ ಇದರ ರಜತ ಮಹೋತ್ಸವದ ಪ್ರಯುಕ್ತ ಪ್ರಸ್ತುತ ಪಡಿಸುವ ‘ನೃತ್ಯೋಲ್ಲಾಸ’ ನೃತ್ಯ ಕಾರ್ಯಕ್ರಮವು ದಿನಾಂಕ 06 ಮತ್ತು 07 ಡಿಸೆಂಬರ್ 2025ರಂದು ಉಡುಪಿಯ ಐ.ವೈ.ಸಿ. ಇನ್ಫೋಸಿಸ್ ಯಕ್ಷಗಾನ ಕಲಾರಂಗದಲ್ಲಿ ನಡೆಯಲಿದೆ.
ದಿನಾಂಕ 06 ಡಿಸೆಂಬರ್ 2025ರಂದು ಸಂಜೆ 4-45 ಗಂಟೆಗೆ ಸಭಾ ಕಾರ್ಯಕ್ರಮವನ್ನು ಮೈಸೂರಿನ ವಸುಂಧರಾ ಪ್ರದರ್ಶನ ಕಲೆಗಳ ಕೇಂದ್ರದ ನಿರ್ದೇಶಕರಾದ ಡಾ. ವಸುಂಧರಾ ದೊರೆಸ್ವಾಮಿ ಇವರು ಉದ್ಘಾಟನೆ ಮಾಡಲಿದ್ದಾರೆ. ಸಂಜೆ 6-00 ಗಂಟೆಗೆ ಸಂಸ್ಥೆಯ ವಿದ್ಯಾರ್ಥಿಗಳಿಂದ ಮತ್ತು ಹಳೆ ವಿದ್ಯಾರ್ಥಿಗಳಿಂದ ಭರತನಾಟ್ಯ ಪ್ರದರ್ಶನ ನಡೆಯಲಿದೆ.
ದಿನಾಂಕ 07 ಡಿಸೆಂಬರ್ 2025ರಂದು ಸಂಜೆ 4-30 ಗಂಟೆಗೆ ಸಭಾ ಕಾರ್ಯಕ್ರಮವನ್ನು ಹಿರಿಯ ನೃತ್ಯ ಗುರುಗಳಾದ ಶ್ರೀಮತಿ ಪ್ರತಿಭಾ ಎಲ್. ಸಾಮಗ ಇವರು ದೀಪ ಪ್ರಜ್ವಲನೆ ಮಾಡಿ ಉದ್ಘಾಟಿಸಲಿದ್ದು, ಸಂಸ್ಥೆಯ ವಿದ್ಯಾರ್ಥಿಗಳಿಂದ ಸಂಗೀತ ಕಾರ್ಯಕ್ರಮ ಪ್ರಸ್ತುತಗೊಳ್ಳಲಿದೆ. ಸಮಾರೋಪ ಸಮಾರಂಭದ ಬಳಿಕ ಡಾ. ವಸುಂಧರಾ ದೊರೆಸ್ವಾಮಿ ಇವರಿಂದ ‘ಅಮ್ಮ’ (ಉಲಿಯದ ಕತೆ) ಏಕವ್ಯಕ್ತಿ ಪ್ರದರ್ಶನ ನಡೆಯಲಿದೆ.

