ಸುರತ್ಕಲ್ : ಶ್ರೀ ನಾಟ್ಯಾಂಜಲಿ ಕಲಾ ಅಕಾಡೆಮಿ (ರಿ.) ಇದರ ‘ನಲ್ವತ್ತರ ನಲಿವು -14’ ಸರಣಿಯಲ್ಲಿ ಪ್ರಸ್ತುತ ಪಡಿಸುವ ‘ನೃತ್ಯೋಲ್ಲಾಸ ಕಾರ್ಯಕ್ರಮ’ವನ್ನು ದಿನಾಂಕ 10 ಆಗಸ್ಟ್ 2025ರಂದು ಸಂಜೆ ಗಂಟೆ 4-45ಕ್ಕೆ ನಾಟ್ಯಾಂಜಲಿ ಕಲಾ ಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ.
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ನಾಟ್ಯಾಂಜಲಿ ಕಲಾ ಅಕಾಡೆಮಿಯ ಗೌರವಾಧ್ಯಕ್ಷರಾದ ಕರ್ಮಯೋಗಿ ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು ಇವರು ವಹಿಸಲಿದ್ದು, ಶಾಂತಲಾ ನಾಟ್ಯ ಪ್ರಶಸ್ತಿ ಪುರಸ್ಕೃತ ಗುರು ಉಳ್ಳಾಲ ಮೋಹನ ಕುಮಾರ್ ಇವರು ದೇವತಾ ಜ್ಯೋತಿ ಪ್ರಜ್ವಲನೆ ಮಾಡಲಿದ್ದಾರೆ. ಶ್ರೀವಿದ್ಯಾ ಇವರ ಶಿಷ್ಯೆ ಕುಮಾರಿ ರೆಮೋನ ಎವಟ್ ಪಿರೇರಾ ಇವರನ್ನು ಅಭಿನಂದಿಸಲಾಗುವುದು. ಸಭಾ ಕಾರ್ಯಕ್ರಮದ ಬಳಿಕ ಸಂಸ್ಥೆಯ ವಿದ್ಯಾರ್ಥಿಗಳಿಂದ ಭರತನಾಟ್ಯ ಪ್ರದರ್ಶನಗೊಳ್ಳಲಿದೆ.