ಕೋಲಾರ : ಬಿ. ಶಿವಕುಮಾರ್ ಸಾರಥ್ಯದ ಸ್ವರ್ಣಭೂಮಿ ಫೌಂಡೇಷನ್ ಕರ್ನಾಟಕ ಹಾಗೂ ರೋಟರಿ ಕ್ಲಬ್ ಕೋಲಾರ ಇವುಗಳ ಸಂಯುಕ್ತಾಶ್ರಯದಲ್ಲಿ ಕನ್ನಡ ರಾಜ್ಯೋತ್ಸವದ ಅಂಗವಾಗಿ ‘ನುಡಿ ಸಂಭ್ರಮ -2025’ವನ್ನು ದಿನಾಂಕ 02 ನವೆಂಬರ್ 2025ರಂದು ಬೆಳಗ್ಗೆ 10-30 ಗಂಟೆಗೆ ಕೋಲಾರದ ಪತ್ರಕರ್ತರ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.
ಈ ಸಮಾರಂಭದಲ್ಲಿ ನಾಡಿನ ವಿವಿಧ ಕ್ಷೇತ್ರದ ಸಾಧಕರಿಗೆ ‘ಸ್ವರ್ಣಭೂಮಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿ’ ಹಾಗೂ ‘ಬಾಲಚೇತನ ಪ್ರಶಸ್ತಿ’ ಪ್ರದಾನ ಮಾಡಲಾಗುವುದು. ಸಭಾ ಕಾರ್ಯಕ್ರಮದ ಬಳಿಕ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.

