ಮಂಗಳೂರು : ಕನ್ನಡ ಭವನ ದಕ್ಷಿಣ ಕನ್ನಡ ಜಿಲ್ಲಾ ಘಟಕದ ನೇತೃತ್ವದಲ್ಲಿ ‘ಕನ್ನಡದ ನಡಿಗೆ ಶಾಲೆಯ ಕಡೆಗೆ’ ವಿದ್ಯಾರ್ಥಿಗಳಿಗೆ ಏಕದಿನ ಸಾಹಿತ್ಯ ಅಭಿಯಾನವನ್ನು ದಿನಾಂಕ 28 ಜೂನ್ 2026ರಂದು ಬೆಳಗ್ಗೆ 10-30 ಗಂಟೆಗೆ ಮಂಗಳೂರಿನ ತೊಕ್ಕೊಟ್ಟು ಅಂಬಾವನ ಧರ್ಮ ಶಿಕ್ಷಣ ಕೇಂದ್ರದಲ್ಲಿ ಆಯೋಜಿಸಲಾಗಿದೆ.
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕನ್ನಡ ಭವನ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಗೌರವಾ ಧ್ಯಕ್ಷ ರಾದ ಡಾ. ರವೀಂದ್ರ ಜೆಪ್ಪು ಇವರು ವಹಿಸಲಿದ್ದು, ತೊಕ್ಕೊಟ್ಟು ಅಂಬಾವನ ಧರ್ಮ ಶಿಕ್ಷಣ ಕೇಂದ್ರದ ಪ್ರಧಾನ ಸಂಚಾಲಕರಾದ ಡಾ. ಅರುಣ್ ಉಳ್ಳಾಲ್ ಇವರು ಉದ್ಘಾಟನೆ ಮಾಡಲಿದ್ದಾರೆ. ಕನ್ನಡ ಭವನ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಕಾರ್ಯಾಧ್ಯಕ್ಷರಾದ ಉಮೇಶ್ ರಾವ್ ಕುಂಬ್ಳೆ ಇವರು ಪ್ರಸ್ತಾವನೆ ಮಾಡಲಿದ್ದು, ವಿದ್ಯಾರ್ಥಿಗಳಿಂದ ಕವನ ವಾಚನ ಹಾಗೂ ರಸ ಪ್ರಶ್ನೆ ಕಾರ್ಯಕ್ರಮ ನಡೆಯಲಿದೆ.

