ಮಂಗಳೂರು : ಕನ್ನಡ ಭವನ ಮತ್ತು ಗ್ರಂಥಾಲಯ (ರಿ) ಕನ್ನಡ ಭವನ ಪ್ರಕಾಶನ ಕನ್ನಡ ಭವನ ದಕ್ಷಿಣ ಕನ್ನಡ ಜಿಲ್ಲಾ ಘಟಕ ಇದರ ನೇತೃತ್ವದಲ್ಲಿ ವಿದ್ಯಾರ್ಥಿಗಳಿಗಾಗಿ ಏಕದಿನ ಸಾಹಿತ್ಯ ಅಭಿಯಾನ ಕನ್ನಡದ ನಡಿಗೆ ಶಾಲೆಯ ಕಡೆಗೆ ದಿನಾಂಕ 06 ಆಗಸ್ಟ್ 2025ರ ಬುಧವಾರ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಬೋಳಾರ ಇಲ್ಲಿ ಹಮ್ಮಿಕೊಳ್ಳಲಾಯಿತು.
ಶಾಲಾ ವಿದ್ಯಾರ್ಥಿಗಳ ಪ್ರಾರ್ಥನೆಯೊಂದಿಗೆ ಆರಂಭಗೊಂಡ ಈ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾದ ಶ್ರೀಮತಿ ರೇಖಾ ಸುದೇಶ್ ರಾವ್ ಇವರು ಕನ್ನಡ ಶಾಲನ್ನು ಹಾಕಿ, ಅತಿಥಿ ಅಭ್ಯಾಗತರನ್ನು ಸ್ವಾಗತಿಸಿದರು. ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಮಾಲತಿಯವರು ಹಾಗೂ ಶಿಕ್ಷಣಾಧಿಕಾರಿ ಸುಷ್ಮಾ ಕಿಣಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಕನ್ನಡ ಭವನ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಗೌರವಾಧ್ಯಕ್ಷರು ಡಾ. ರವೀಂದ್ರ ಜೆಪ್ಪು ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ವಹಿಸಿದ್ದರು. ಶ್ರೀ ಉಮೇಶ್ ರಾವ್ ಕುಂಬಳೆ ಕಾರ್ಯಧ್ಯಕ್ಷರು ಪ್ರಾಸ್ತಾವಿಕ ನುಡಿಯೊಂದಿಗೆ ಆಂಗ್ಲ ಭಾಷೆಯನ್ನು ಕನ್ನಡಕ್ಕೆ ಪರಿವರ್ತಿಸುವ ರಸಪ್ರಶ್ನೆ ನಡೆಸಿಕೊಟ್ಟರು.
ಶಾಲಾ ಮುಖ್ಯೋಪಾಧ್ಯಾಯನಿ ಶ್ರೀಮತಿ ಮಾಲತಿ ಇವರನ್ನು ಶಾಲು ಹೊದಿಸಿ ಅಭಿನಂದನಾ ಪತ್ರ, ಸ್ಮರಣಿಕೆ, ಪುಸ್ತಕ ನೀಡಿ ಗೌರವಿಸಲಾಯಿತು. ಚುಟುಕು ವಾಚನ, ಚುಟುಕು ಬರಹದ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ಒದಗಿಸಲಾಯಿತು ಹಾಗೂ ಕನ್ನಡ ಸಾಹಿತಿಗಳ ಬಗ್ಗೆ ಪ್ರಶ್ನೆಗಳನ್ನು ಕೇಳಲಾಯಿತು. ಕನ್ನಡವನ್ನು ಬೆಳೆಸಿ ಉಳಿಸುವ ನಿಟ್ಟಿನಲ್ಲಿ, ಅತಿಥಿ ಅಭ್ಯಾಗತರು ಹಿತನುಡಿಗಳನ್ನಾಡಿದರು. ಕಾರ್ಯಕ್ರಮದ ರಸಪ್ರಶ್ನೆ ಸ್ಪರ್ಧೆಯಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ಅಭಿನಂದನ ಪತ್ರ ವಿತರಿಸಲಾಯಿತು. ಮುಖ್ಯ ಶಿಕ್ಷಕಿ ಶ್ರೀಮತಿ ಮಾಲತಿಯವರು ಕನ್ನಡದ ಮೇಲಿರುವ ಅಭಿಮಾನ ವ್ಯಕ್ತಪಡಿಸಿದರು. ಕಾರ್ಯಕ್ರಮದ ನಿರ್ವಹಣೆಯನ್ನು ಸುಧಾ ಕಂಬಾರ್ ನಡೆಸಿಕೊಟ್ಟು, ವಂದನಾರ್ಪಣೆಗೈದರು. ವಿದ್ಯಾರ್ಥಿಗಳಿಗೆ ಸಿಹಿ ಹಂಚುವುದರ ಮುಖೇನ ಕಾರ್ಯಕ್ರಮವು ಸಂಪನ್ನಗೊಂಡಿತು.