ಮಂಗಳೂರು : ಕನ್ನಡ ಭವನ ದಕ್ಷಿಣ ಕನ್ನಡ ಜಿಲ್ಲಾ ಘಟಕದ ವತಿಯಿಂದ ವಿದ್ಯಾರ್ಥಿಗಳಿಗೆ ಏಕದಿನ ಸಾಹಿತ್ಯ ಅಭಿಯಾನದ ಅಂಗವಾಗಿ ಕನ್ನಡದ ನಡಿಗೆ ಶಾಲೆಯ ಕಡೆಗೆ ಅಡಿಯಲ್ಲಿ ದಿನಾಂಕ 11 ಮೇ 2026ರಂದು ಬೆಳಗ್ಗೆ 11-00 ಗಂಟೆಗೆ ಮಂಗಳೂರಿನ ಜೆಪ್ಪು ಮೋರ್ಗನ್ ಗೇಟ್ ರಾಮ ಕ್ಷತ್ರಿಯ ಮಂದಿರದಲ್ಲಿ ಆಯೋಜಿಸಲಾಗಿದೆ.
ಈ ಕಾರ್ಯಕ್ರಮವನ್ನು ಜೆಪ್ಪು ರಾಮ ಕ್ಷತ್ರಿಯ ಸಂಘದ ಅಧ್ಯಕ್ಷರಾದ ಮುರಳೀಧರ್ ಸಿ.ಎಚ್. ಇವರು ಉದ್ಘಾಟನೆ ಮಾಡಲಿದ್ದು, ಕನ್ನಡ ಭವನ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಗೌರವಾಧ್ಯಕ್ಷರಾದ ಡಾ. ರವೀಂದ್ರ ಜೆಪ್ಪು ಇವರು ಅಧ್ಯಕ್ಷತೆ ವಹಿಸಲಿದ್ದಾರೆ. ಶಾಲಾ ವಿದ್ಯಾರ್ಥಿಗಳಿಗೆ ಕವನ ವಾಚನ ಮತ್ತು ರಸ ಪ್ರಶ್ನೆ ಕಾರ್ಯಕ್ರಮ ನಡೆಯಲಿದೆ.

