Subscribe to Updates

    Get the latest creative news from FooBar about art, design and business.

    What's Hot

    ಮಂಚಿ ಲಯನ್ಸ್ ಸೇವಾ ಮಂದಿರದಲ್ಲಿ ‘ಕಲಾಧಾರಾ 12’ ನೃತ್ಯ ಪ್ರಸ್ತುತಿ

    August 10, 2026

    ‘ಕರಾವಳಿ ಮಹಿಳಾ ಕಥಾ ಸ್ಪರ್ಧೆ’ಯ ಬಹುಮಾನ ವಿತರಣಾ ಸಮಾರಂಭ

    August 10, 2026

    ಕೋಡಿಕಲ್ ಸರಯೂ ಸಭಾಭವನದಲ್ಲಿ ಯಕ್ಷಗಾನ ಪ್ರದರ್ಶನ

    August 10, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ಮೂಡುಬಿದಿರೆಯಲ್ಲಿ ಸಂಸ್ಕೃತ ಭಾಷಾ ಉಪನ್ಯಾಸಕರ ಒಂದು ದಿನದ ಕಾರ್ಯಾಗಾರ
    Literature

    ಮೂಡುಬಿದಿರೆಯಲ್ಲಿ ಸಂಸ್ಕೃತ ಭಾಷಾ ಉಪನ್ಯಾಸಕರ ಒಂದು ದಿನದ ಕಾರ್ಯಾಗಾರ

    August 21, 2025No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮೂಡುಬಿದಿರೆ : ದಕ್ಷಿಣ ಕನ್ನಡ ಜಿಲ್ಲಾ ಪದವಿ ಪೂರ್ವ ಸಂಸ್ಕೃತ ಉಪನ್ಯಾಸಕರ ಸಂಘ, ದಕ್ಷಿಣ ಕನ್ನಡ ಜಿಲ್ಲಾ ಪದವಿ ಪೂರ್ವ ಪ್ರಾಂಶುಪಾಲರ ಸಂಘ ಹಾಗೂ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜುಗಳ ಸಂಯುಕ್ತ ಆಶ್ರಯದಲ್ಲಿ ಮೂಡುಬಿದಿರೆಯ ಎಕ್ಸಲೆಂಟ್ ರಾಜ ಸಭಾಂಗಣದಲ್ಲಿ ದಿನಾಂಕ 20 ಆಗಸ್ಟ್ 2025ರಂದು ‘ಸಂಸ್ಕೃತ ಭಾಷಾ ಪಠ್ಯ ಪ್ರಶಿಕ್ಷಣ ಕಾರ್ಯಶಾಲಾ’ ಸಂಸ್ಕೃತ ಭಾಷಾ ಉಪನ್ಯಾಸಕರ ಒಂದು ದಿನದ ಕಾರ್ಯಾಗಾರ ನಡೆಯಿತು.

    ಈ ಕಾರ್ಯಾಗಾರವನ್ನು ಉದ್ಘಾಟಿಸಿದ ಎಕ್ಸಲೆಂಟ್ ಸಮೂಹ ಸಂಸ್ಥೆಗಳ ಅಧ್ಯಕ್ಷರಾದ ಶ್ರೀ ಯುವರಾಜ ಜೈನ್ “ನಮ್ಮ ಭಾರತೀಯ ಸಂಸ್ಕೃತಿಯ ಗಾಢವಾದ ಬೇರು ಸಂಸ್ಕೃತ ಭಾಷೆಯಲ್ಲಿ ಅಡಕವಾಗಿದೆ. ಸಂಸ್ಕೃತವು ಕೇವಲ ಒಂದು ಭಾಷೆಯಲ್ಲ, ಅದು ನಾಡಿನ ಸಂಸ್ಕೃತಿ, ತತ್ತ್ವ, ಧರ್ಮ, ಸಾಹಿತ್ಯ, ಕಲೆ ಮತ್ತು ಜ್ಞಾನದ ನಿರಂತರ ಪ್ರಕಾಶ. ಇಂದು ನಾವು ಕಾಣುತ್ತಿರುವ ಜೀವನಮೌಲ್ಯಗಳು, ಶಿಷ್ಟಾಚಾರಗಳು, ಶ್ರೀಮಂತ ಕಲೆಗಳು, ಜ್ಞಾನದ ಹರವುಗಳೆಲ್ಲ ಸಂಸ್ಕೃತ ಸಾಹಿತ್ಯದಲ್ಲಿ ನೆಲೆ ನಿಂತಿವೆ. ಸಂಸ್ಕೃತ ಅಧ್ಯಯನ ಮಾಡಿದರೆ ನಾವೇ ನಮ್ಮ ಮೂಲಗಳಿಗೆ ಹತ್ತಿರವಾಗುತ್ತೇವೆ, ಜಗತ್ತಿನೊಂದಿಗೆ ನಿಂತು ಮಾತನಾಡುವ ಶಕ್ತಿಯನ್ನು ಪಡೆಯುತ್ತೇವೆ” ಎಂದು ಅಭಿಪ್ರಾಯಪಟ್ಟರು.

    ಕಾರ್ಯಾಗಾರದ ಅಧ್ಯಕ್ಷತೆಯನ್ನು ವಹಿಸಿದ್ದ ಹಿರಿಯ ವಿದ್ವಾಂಸರು ಮಂಗಳೂರಿನ ವಾಸುದೇವ ಕಾರಂತರು ಮಾತನಾಡುತ್ತಾ “ಗುರು ಎಂದರೆ ಕೇವಲ ಪಾಠ ಹೇಳುವವನು ಮಾತ್ರವಲ್ಲ. ಆತನು ವಿಷಯದಲ್ಲಿ ಆಳವಾದ ಜ್ಞಾನವನ್ನು ಹೊಂದಿರಬೇಕು. ಜ್ಞಾನವು ಕೇವಲ ಪುಸ್ತಕಗಳಲ್ಲಿ ಸೀಮಿತವಾಗದೆ, ಜೀವನದ ವಿವಿಧ ಕ್ಷೇತ್ರಗಳಲ್ಲಿ ಆಳವಾಗಿ ಅರ್ಥೈಸಿದಾಗ ಮಾತ್ರ ಅದು ಶಿಷ್ಯನಿಗೆ ಮಾರ್ಗದರ್ಶಕವಾಗುತ್ತದೆ. ನಿಜವಾದ ಗುರುವು ಸದಾ ಶಿಷ್ಯನ ಹಿತವನ್ನು ಮನಸ್ಸಿನಲ್ಲಿಟ್ಟುಕೊಂಡು ಕಾರ್ಯನಿರ್ವಹಿಸುತ್ತಾನೆ. ವಿದ್ಯಾರ್ಥಿಯ ಮನಸ್ಸು ಅನೇಕ ವಿಚಾರಗಳಲ್ಲಿ ಅಲೆದಾಡುವುದು ಸಹಜ. ಇಂತಹ ಸಂದರ್ಭದಲ್ಲಿ ಶಿಷ್ಯನ ವಿಕ್ಷಿಪ್ತ ಮನಸ್ಸನ್ನು ನಿರ್ದಿಷ್ಟ ವಿಷಯದಲ್ಲಿ ನೆಲೆಗೊಳಿಸಿ, ಅಧ್ಯಯನದಲ್ಲಿ ಏಕಾಗ್ರತೆಯನ್ನು ಹುಟ್ಟಿಸುವುದು ಗುರುವಿನ ದೊಡ್ಡ ಹೊಣೆಗಾರಿಕೆ. ಇಂತಹ ಕಾರ್ಯವನ್ನು ನೆರವೇರಿಸಲು ಗುರುವು ಶಾಂತಿ, ಸಹನೆ ಮತ್ತು ತಾಳ್ಮೆಯನ್ನು ಹೊಂದಿರಬೇಕು” ಎಂದು ಹಿತವಚನ ನುಡಿದರು.

    ಇದೇ ಸಂದರ್ಭದಲ್ಲಿ ಕಳೆದ ವರ್ಷ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಯಲ್ಲಿ ಸಂಸ್ಕೃತದಲ್ಲಿ 100 ಅಂಕ ಗಳಿಸಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಜ್ಞಾನ, ವಾಣಿಜ್ಯ ಮತ್ತು ಕಲಾ ವಿಭಾಗಗಳಲ್ಲಿ ಅತ್ಯಧಿಕ ಅಂಕವನ್ನು ಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ವೇದಿಕೆಯಲ್ಲಿ ಎಕ್ಸಲೆಂಟ್ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಪ್ರದೀಪ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು. ಸಂಸ್ಕೃತ ಭಾಷಾ ಉಪನ್ಯಾಸಕರ ಸಂಘದ ಅಧ್ಯಕ್ಷ ರಮೇಶ ಆಚಾರ್ಯ ಸ್ವಾಗತಿಸಿ, ಉಪಾಧ್ಯಕ್ಷ ಡಾ. ಪ್ರಸನ್ನ ಕುಮಾರ್ ಐತಾಳ್ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಸಿಕೊಟ್ಟರು. ಕಾರ್ಯಕ್ರಮ ಸಂಯೋಜಕ ತೇಜಸ್ವೀ ಭಟ್ ನಿರೂಪಿಸಿ, ಸಂಘದ ಕಾರ್ಯದರ್ಶೀ ಡಾ. ಮಧುಕೇಶ್ವರ ಶಾಸ್ತ್ರೀ ವಂದಿಸಿದರು.

    baikady Literature roovari samskrita
    Share. Facebook Twitter Pinterest LinkedIn Tumblr WhatsApp Email
    Previous Articleಕುವೆಂಪು ಸಭಾಂಗಣದಲ್ಲಿ ‘ಜಾನಪದ ಕಲೆಗಳ ಕಲಾ ಪ್ರದರ್ಶನ ಮತ್ತು ಉಪನ್ಯಾಸ’ | ಆಗಸ್ಟ್ 22
    Next Article ಉಡುಪಿಯ ಯಕ್ಷಗಾನ ಕಲಾರಂಗ ಐ.ವೈ.ಸಿ. ಸಭಾಂಗಣದಲ್ಲಿ ‘ಚಿಣ್ಣರ ಉತ್ಸವ’ | ಆಗಸ್ಟ್ 22
    roovari

    Add Comment Cancel Reply


    Related Posts

    ಮಂಚಿ ಲಯನ್ಸ್ ಸೇವಾ ಮಂದಿರದಲ್ಲಿ ‘ಕಲಾಧಾರಾ 12’ ನೃತ್ಯ ಪ್ರಸ್ತುತಿ

    August 10, 2026

    ‘ಕರಾವಳಿ ಮಹಿಳಾ ಕಥಾ ಸ್ಪರ್ಧೆ’ಯ ಬಹುಮಾನ ವಿತರಣಾ ಸಮಾರಂಭ

    August 10, 2026

    ಕೋಡಿಕಲ್ ಸರಯೂ ಸಭಾಭವನದಲ್ಲಿ ಯಕ್ಷಗಾನ ಪ್ರದರ್ಶನ

    August 10, 2026

    ಖ್ಯಾತ ಯಕ್ಷಗಾನ ಪ್ರಸಂಗಕರ್ತ, ಭಾಗವತ ಬೋಳೂರು ಮಧುಕುಮಾರ್ ವಿಧಿ ವಶ

    August 10, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.