ಮಂಡ್ಯ : 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ನೊಂದಣಿಯನ್ನು ಈ ಬಾರಿ ವಿನೂತನವಾಗಿ ಆನ್ ಲೈನ್ ಮೂಲಕ ಮಾಡಲಾಗುತ್ತಿದ್ದು, ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಇವರು ದಿನಾಂಕ 16 ನವೆಂಬರ್ 2024ರಂದು ಕೆ.ಆರ್.ಎಸ್.ನ ರಾಯಲ್ ಆರ್ಕಿಡ್ ನಲ್ಲಿ ಚಾಲನೆ ನೀಡಿದರು.
ಈ ಬಾರಿ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಪ್ರತಿನಿಧಿಯಾಗಿ ನೊಂದಣಿಯಾಗಿ ಭಾಗವಹಿಸಲು ರೂ.600/- ನಿಗದಿಯಾಗಿರುತ್ತದೆ. ಕನ್ನಡ ಸಾಹಿತ್ಯ ಪರಿಷತ್ತಿನ ವೆಬ್ ಸೈಟ್ ನಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಸದಸ್ಯತ್ವ ಪಡೆದಿರುವವರು ನೊಂದಣಿ ಮಾಡಿಕೊಳ್ಳಲು ಇಂದಿನಿಂದ 20 ದಿನಗಳ ಕಾಲ ಅವಕಾಶ ನೀಡಲಾಗಿದೆ. ಆನ್ ಲೈನ್ ನಲ್ಲಿ ಅರ್ಜಿ ಭರ್ತಿ ಮಾಡಿದ ನಂತರ ಹಣ ಪಾವತಿ ಕೂಡ ಆನ್ಲೈನ್ ಮೂಲಕ ಮಾಡಬೇಕಿರುತ್ತದೆ.
ಜಿಲ್ಲಾಧಿಕಾರಿ ಡಾ. ಕುಮಾರ ಅವರು ಮಾತನಾಡಿ ನೊಂದಣಿಯಾಗುವವರಿಗೆ ಆನ್ ಲೈನ್ ಮೂಲಕ ವಸತಿ ಒದಗಿಸುವ ಸ್ಥಳ, ವಿಳಾಸ, ನೋಡಲ್ ಅಧಿಕಾರಿಗಳ ಮೊಬೈಲ್ ಸಂಖ್ಯೆ ಹಾಗೂ ಆನ್ ಲೈನ್ ನಲ್ಲೇ ಫೋಟೋ ಸಹಿತ ಗುರುತಿನ ಚೀಟಿ ಒದಗಿಸಲಾಗುವುದು.