ಮಂಗಳೂರು : ಮಣಿ ಕೃಷ್ಣಸ್ವಾಮಿ ಅಕಾಡೆಮಿ ವತಿಯಿಂದ ಪ್ರಸ್ತುತ ಪಡಿಸುವ ಗಾಯನ ಸಂಗೀತ ಕಾರ್ಯಾಗಾರವು ದಿನಾಂಕ 24, 25, 31 ಜನವರಿ ಮತ್ತು 01 ಫೆಬ್ರುವರಿ 2026ರಂದು (ಶನಿವಾರ ಮತ್ತು ಭಾನುವಾರ) ಸಂಜೆ 8-00 ಗಂಟೆಯಿಂದ 9-15ರವೆರೆಗೆ ಆನ್ ಲೈನ್ ನಲ್ಲಿ ನಡೆಯಲಿದೆ. ಸಂಗೀತ ಕಲಾ ಆಚಾರ್ಯ ವಿದುಷಿ ಪ್ರಾರ್ಥನಾ ಸಾಯಿ ನರಸಿಂಹನ್ ಇವರು ಕಾರ್ಯಾಗಾರವನ್ನು ನಡೆಸಿಕೊಡಲಿದ್ದು, ವಿವಿಧ ಸಂಯೋಜಕರ ತಮಿಳು ಕೃತಿಗಳನ್ನು ಕಲಿಸಲಾಗುವುದು. ನೋಂದಾವಣೆ ಮತ್ತು ಹೆಚ್ಚಿನ ಮಾಹಿತಿಗಾಗಿ 74119 16098 ಸಂಖ್ಯೆಯನ್ನು ಸಂಪರ್ಕಿಸಿರಿ.

