Subscribe to Updates

    Get the latest creative news from FooBar about art, design and business.

    What's Hot

    ‘ದಾಸವಾಣಿ’ ಹವಲ್ದಾರ್ ತಂಡದವರಿಂದ ದಾಸರ ಕೃತಿಗಳ ಅಮೋಘ ಗಾಯನ ಕಾರ್ಯಕ್ರಮ | ಜೂನ್ 01

    May 31, 2025

    ನಟನ ರಂಗಶಾಲೆಯಲ್ಲಿ ಮಕ್ಕಳ ‘ಅಭಿನಯ ಮತ್ತು ರಂಗ ತರಬೇತಿ’ | ಜೂನ್ 08

    May 31, 2025

    ಶಿರಸಿಯ ರಂಗಧಾಮದಲ್ಲಿ ಸನ್ಮಾನ, ಪ್ರತಿಭಾ ಪುರಸ್ಕಾರ ಮತ್ತು ಯಕ್ಷಗಾನ ಪ್ರದರ್ಶನ | ಜೂನ್ 01

    May 31, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಬಂಟ್ವಾಳದಲ್ಲಿ ಕಲಾಕೃತಿಗಳನ್ನೊಳಗೊಂಡ ‘ಒರಿಗಾಮಿ ಬಸ್’
    Exhibition

    ಬಂಟ್ವಾಳದಲ್ಲಿ ಕಲಾಕೃತಿಗಳನ್ನೊಳಗೊಂಡ ‘ಒರಿಗಾಮಿ ಬಸ್’

    June 24, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬಂಟ್ವಾಳ : ಬಂಟ್ವಾಳ ತಾಲೂಕು ಆಡಳಿತ, ಶಿಕ್ಷಣ ಇಲಾಖೆ, ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ, ವಿವಿಧ ರೋಟರಿ ಕ್ಲಬ್‌ಗಳ ಸಹಕಾರದೊಂದಿಗೆ ಸಂಸಾರ ಜೋಡುಮಾರ್ಗ ಆಯೋಜನೆಯಲ್ಲಿ ದಿನಾಂಕ 14-06-2024ರಂದು ಮುಂಬೈ ಛತ್ರಪತಿ ಶಿವಾಜಿ ಮಹರಾಜ್ ವಸ್ತು ಸಂಗ್ರಹಾಲಯದ ‘ಮ್ಯೂಸಿಯಂ ಆನ್ ವೀಲ್ಸ್’ ಕಾರ್ಯಕ್ರಮದಲ್ಲಿ ಒರಿಗಾಮಿ ಕಲಾಕೃತಿಗಳನ್ನೊಳಗೊಂಡ ‘ಒರಿಗಾಮಿ ಬಸ್’ ಬಂಟ್ವಾಳಕ್ಕೆ ಆಗಮಿಸಿದ್ದು, ಬಿ.ಸಿ. ರೋಡಿನ ಮಿನಿವಿಧಾನ ಸೌಧದ ಮುಂಭಾಗದಲ್ಲಿ ಶಾಲಾಮಕ್ಕಳು, ಸಾರ್ವಜನಿಕರ ವೀಕ್ಷಣೆಗೆ ಚಾಲನೆ ನೀಡಲಾಯಿತು.

    ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಕಾಗದದ ರಾಕೆಟ್ ಹಾರಿಬಿಡುವ ಮೂಲಕ ವೀಕ್ಷಣೆಗೆ ಚಾಲನೆ ನೀಡಿದರು. ಈ ಸಂದರ್ಭ ಮಾತನಾಡಿದ ಶಾಸಕರು “ಮುಂಬಯಿನ ಮ್ಯೂಸಿಯಂ ಸಂಸ್ಥೆಯೊಂದು ಈ ರೀತಿ ಹಳ್ಳಿ ಪ್ರದೇಶಕ್ಕೆ ತೆರಳಿ ಉತ್ತಮ ದರ್ಜೆಯ ಕಲೆಯನ್ನು ಸಾಮಾನ್ಯರಿಗೆ ತಿಳಿಸುವ ಪ್ರಯತ್ನ ಮಾಡಿರುವುದು ಶ್ಲಾಘನೀಯ. ಒರಿಗಾಮಿ ಕಾಗದದ ಕಲೆಯಾಗಿದ್ದು, ಕಾಗದವನ್ನು ವಿಧವಿಧ ರೀತಿಯಲ್ಲಿ ಮಡಚಿ ಅದರಲ್ಲಿ ವಿಶಿಷ್ಟವಾದ ಆಕಾರಗಳು ಮತ್ತು ಶಿಲ್ಪಗಳನ್ನು ರಚಿಸುವುದು ಒರಿಗಾಮಿ ಕಲೆಯ ವೈಶಿಷ್ಟ್ಯತೆ. ಶಾಲಾ ಮಕ್ಕಳು ಇದರ ಸದುಪಯೋಗ ಪಡೆಯುವಂತೆ ಕರೆ ನೀಡಿದರು.”

    ಕಾರ್ಯಕ್ರಮದಲ್ಲಿ ಬಂಟ್ವಾಳ ತಹಶೀಲ್ದಾರ್ ಡಿ. ಅರ್ಚನಾ ಭಟ್, ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥನ್ ಎಂ.ಜಿ., ರೋಟರಿ ಜಿಲ್ಲೆ 3181ರ ಇಂಟರ್ಯಾಕ್ಟ್ ಚೇರ್‌ಮೆನ್ ರೊ. ಮಂಜುನಾಥ ಆಚಾರ್ಯ, ಬಂಟ್ವಾಳ ರೋಟರಿ ಕ್ಲಬ್ ಅಧ್ಯಕ್ಷ ಪ್ರಕಾಶ್ ಬಾಳಿಗಾ, ಬಂಟ್ವಾಳ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಪ್ರಶಾಂತ್ ಪುಂಜಾಲಕಟ್ಟೆ, ಕ್ಷೇತ್ರ ಸಂಪನ್ಮೂಲ ವ್ಯಕ್ತಿ ರಾಘವೇಂದ್ರ ಬಲ್ಲಾಳ್, ಫರಂಗಿಪೇಟೆ ಸೇವಾಂಜಲಿ ಪ್ರತಿಷ್ಠಾನದ ಆಡಳಿತ ಟ್ರಸ್ಟಿ ಕೃಷ್ಣ ಕುಮಾರ್ ಪೂಂಜಾ, ಮ್ಯೂಸಿಯಂನ ಚಿನ್ಮಯಿ ಮೊದಲಾದವರು ಉಪಸ್ಥಿತರಿದ್ದರು.

    ಬಂಟ್ವಾಳ ಶಿಕ್ಷಣ ಇಲಾಖೆಯ ಸೂಚನೆಯಂತೆ ಸುಮಾರು 25ಕ್ಕೂ ಅಧಿಕ ಶಾಲೆಗಳ 1500ಕ್ಕೂ ಮಿಕ್ಕಿ ವಿದ್ಯಾರ್ಥಿಗಳು, ಮಧ್ಯಾಹ್ನದ ಬಳಿಕ ಸುಮಾರು ಒಂದು ಸಾವಿರಕ್ಕೂ ಅಧಿಕ ಸಾರ್ವಜನಿಕರು ಒರಿಗಾಮಿ ಕಲಾಕೃತಿಗಳನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ಬಿ.ಸಿ.ರೋಡಿನ ಸ್ತ್ರೀಶಕ್ತಿ ಭವನದಲ್ಲಿ ವಿದ್ಯಾರ್ಥಿಗಳಿಗೆ ಒರಿಗಾಮಿ ಕಲಾಕೃತಿಗಳ ತಯಾರಿಕಾ ಕಾರ್ಯಾಗಾರವನ್ನೂ ಆಯೋಜಿಸಲಾಗಿತ್ತು. ಮ್ಯೂಸಿಯಂನ ಕಶ್ಯಪಿ ಅವರು ಪ್ರಸ್ತಾವನೆಗೈದರು. ಶಿಕ್ಷಕ ಅರವಿಂದ ಕುಡ್ಲ ಸ್ವಾಗತಿಸಿ, ಸಂಸಾರ ಜೋಡುಮಾರ್ಗ ತಂಡದ ನಿರ್ದೇಶಕ ಮೌನೇಶ ವಿಶ್ವಕರ್ಮ ಕಾರ್ಯಕ್ರಮ ನಿರ್ವಹಿಸಿ, ವಂದಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Articleಉಡುಪಿಯ ಯಕ್ಷಗಾನ ಕಲಾರಂಗದಿಂದ ಪ್ರಶಸ್ತಿ ಪ್ರದಾನ ಮತ್ತು ತಾಳಮದ್ದಲೆ
    Next Article ಎಸ್.ಎಂ.ಎಸ್. ಶಾಲಾ ಸಭಾಂಗಣದಲ್ಲಿ ದತ್ತಿ ಉಪನ್ಯಾಸ ಕಾರ್ಯಕ್ರಮ | ಜೂನ್ 27
    roovari

    Add Comment Cancel Reply


    Related Posts

    ವಿಶೇಷ ಲೇಖನ – ಜೈನ ಸಾಹಿತ್ಯದ ಖ್ಯಾತ ವಿದ್ವಾಂಸ ಡಾ. ಎಸ್. ಪಿ. ಪಾಟೀಲ್

    May 31, 2025

    ಉಪ್ಪಳದ ಶ್ರೀ ನಿತ್ಯಾನಂದ ಯೋಗಾಶ್ರಮದಲ್ಲಿ ತುಲುವೆರೆ ಕಲ ವರ್ಸೊಚ್ಚಯ | ಜೂನ್ 01

    May 30, 2025

    ಕೀನ್ಯಾದ ಪ್ರಸಿದ್ಧ ಲೇಖಕ ಗೂಗಿ ವಾ ಥಿಯಾಂಗೋ ವಿಧಿವಶ

    May 30, 2025

    ಖ್ಯಾತ ಸಾಹಿತಿ ಎಚ್. ಎಸ್. ವೆಂಕಟೇಶಮೂರ್ತಿ ನಿಧನ

    May 30, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.