Subscribe to Updates

    Get the latest creative news from FooBar about art, design and business.

    What's Hot

    ಮಂಗಳೂರಿನ ಸಂತ ಆಲೋಶಿಯಸ್ ಕಾಲೇಜಿನಲ್ಲಿ ಶಾಸ್ತ್ರೀಯ ಸಂಗೀತ ಕಾರ್ಯಕ್ರಮ | ಫೆಬ್ರವರಿ 19

    February 18, 2026

    ಸಮ್ಮೇಳನದಲ್ಲಿ ಕೃತಿ ಬಿಡುಗಡೆಗೆ ಆಹ್ವಾನ | ಕೊನೆಯ ದಿನಾಂಕ ಫೆಬ್ರವರಿ 25

    February 18, 2026

    ಮುಂಬಯಿ ವಿಶ್ವವಿದ್ಯಾಲಯದಲ್ಲಿ ‘ಕಾಗೆ ಬಣ್ಣದ ಕವಿತೆ’ ಕವನ ಸಂಕಲನ ಬಿಡುಗಡೆ

    February 18, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ‘ಪಾತಾಳ ಕಲಾ ಮಂಗಳ ಪ್ರಶಸ್ತಿ’ ಪ್ರದಾನ 
    Awards

    ‘ಪಾತಾಳ ಕಲಾ ಮಂಗಳ ಪ್ರಶಸ್ತಿ’ ಪ್ರದಾನ 

    May 8, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಉಪ್ಪಿನಂಗಡಿ : ತೆಂಕುತಿಟ್ಟು ಯಕ್ಷಗಾನ ರಂಗದ ಹಿರಿಯ ಸ್ತ್ರೀ ಪಾತ್ರಧಾರಿ ಪಾತಾಳ ವೆಂಕಟರಮಣ ಭಟ್ ಅವರು ಕೊಡಮಾಡುವ ‘ಪಾತಾಳ ಕಲಾ ಮಂಗಳಾ’ ಪ್ರಶಸ್ತಿ ಪ್ರದಾನ ಸಮಾರಂಭ ಕೀರ್ತಿಶೇಷ ಶ್ರೀ ನಿರಂಜನ ಸ್ವಾಮಿ ಸಂಸ್ಥಾಪಿತ ಸುಂಕದಕಟ್ಟೆ ಮೇಳದ ರಂಗ ವೇದಿಕೆಯಲ್ಲಿ ದಿನಾಂಕ 26-04-2024ರಂದು ನಡೆಯತು. ಕನ್ನಡ ಸಾಹಿತ್ಯ ಪರಿಷತ್ ಮಾಜಿ ರಾಜ್ಯಾಧ್ಯಕ್ಷ ಡಾ. ಹರಿಕೃಷ್ಣ ಪುನರೂರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

    ಮುಖ್ಯ ಅತಿಥಿಗಳಾಗಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ನಿಕಟಪೂರ್ವ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ, ಕಲಾಪೋಷಕ ಶ್ರೀಪತಿ ಭಟ್ ಮೂಡುಬಿದಿರೆ, ಭುಜಬಲಿ ಧರ್ಮಸ್ಥಳ, ಜನಾರ್ದನ ಹಂದೆ, ಅಂಬಾಪ್ರಸಾದ್ ಪಾತಾಳ, ರಾಮ ಭಟ್ ಭಾಗವಹಿಸಿದ್ದರು. ಪ್ರಬುದ್ಧ ಸ್ತ್ರೀ ಪಾತ್ರಧಾರಿಗಳಾದ ಸಂಜಯ ಕುಮಾ‌ರ್, ಸರವು ರಮೇಶ ಭಟ್, ರಮೇಶ ಕುಲಶೇಖರ ಇವರಿಗೆ ರೂ.10,000/- ಗೌರವ ನಿಧಿಯೊಂದಿಗೆ ‘ಪಾತಾಳ ಕಲಾ ಮಂಗಳ’ ಪ್ರಶಸ್ತಿ ಪ್ರದಾನಿಸಲಾಯಿತು.

    ಇದೇ ಸಂದರ್ಭದಲ್ಲಿ ಕುರಿಯ ವಿಠಲ ಶಾಸ್ತ್ರಿ ಯಕ್ಷಗಾನ ಪ್ರತಿಷ್ಠಾನ ಉಜಿರೆ ಅವರಿಂದ ಪಾತಾಳ ವೆಂಕಟರಮಣ ಭಟ್ ಅವರಿಗೆ ‘ಕುರಿಯ ಪ್ರಶಸ್ತಿ’ ನೀಡಿ ಗೌರವಿಸಲಾಯಿತು. ಸ್ಥಳೀಯ ಸಾಧಕರಾದ ಕಂಗ್ವೆ ವಿಶ್ವನಾಥ ಶೆಟ್ಟಿ, ಚಿತ್ತೋಡಿ ಲೋಕೇಶ ಪೂಜಾರಿ, ನೂಜಿ ಪದ್ಮನಾಭ ಗೌಡ ಅವರನ್ನು ಗೌರವಿಸಲಾಯಿತು. ಮಹಾಲಿಂಗ ಭಟ್ ಬಿಲ್ಲಂಪದವು ಪ್ರಸ್ತಾವನೆಯೊಂದಿಗೆ ಸ್ವಾಗತಿಸಿದರು. ಕುರಿಯ ಪ್ರತಿಷ್ಠಾನದ ಸಂಚಾಲಕ, ಯಕ್ಷಗಾನ ವಿದ್ವಾಂಸ ಉಜಿರೆ ಅಶೋಕ ಭಟ್ ಅಭಿನಂದನಾ ನುಡಿಯನ್ನಾಡಿ, ನಿರೂಪಿಸಿದರು. ಬಳಿಕ ಸುಂಕದಕಟ್ಟೆ ಮೇಳದವರಿಂದ ‘ಶ್ರೀದೇವಿ ಮಹಾತ್ಮೆ’ ಯಕ್ಷಗಾನ ಬಯಲಾಟ ನಡೆಯಿತು.

    Share. Facebook Twitter Pinterest LinkedIn Tumblr WhatsApp Email
    Previous Articleಮಂಗಳೂರಿನಲ್ಲಿ ಸುಸಂಪನ್ನಗೊಂಡ ನಟುವಾಂಗಂ ಕಾರ್ಯಗಾರ
    Next Article ಕನ್ನಡ ತುಳು ಸಾಹಿತಿ ಸುಂದರ ಬಾರಡ್ಕ ಇವರಿಗೆ ‘ದ್ರಾವಿಡ ಭಾಷಾ ಸಾಹಿತ್ಯ ಪುರಸ್ಕಾರ’
    roovari

    Add Comment Cancel Reply


    Related Posts

    ಉಮಾಮಹೇಶ್ವರ ಯಕ್ಷಗಾನ ಅಧ್ಯಯನ ಕೇಂದ್ರದ ವಾರ್ಷಿಕೋತ್ಸವ ಸಮಾರಂಭ

    February 18, 2026

    ಬನ್ನೂರಿನ ಶ್ರೀ ಬಲಮುರಿ ವಿದ್ಯಾ ಗಣಪತಿ ದೇವಸ್ಥಾನದಲ್ಲಿ ಮಾಸಿಕ ತಾಳಮದ್ದಲೆ

    February 18, 2026

    ಅತ್ತಾವರ ಶ್ರೀ ಉಮಾಮಹೇಶ್ವರ ಕ್ಷೇತ್ರದಲ್ಲಿ ‘ಯಕ್ಷ ಗಾನಾರ್ಚನೆ’

    February 17, 2026

    ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನ ಪ್ರಕಟ

    February 16, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.