Subscribe to Updates

    Get the latest creative news from FooBar about art, design and business.

    What's Hot

    ‘ಕುದ್ಕ ಬಚ್ಚಿರೆ’ ಪುಸ್ತಕ ಬಿಡುಗಡೆ ಮತ್ತು ‘ಕಂಗುಲು-ಕರಂಗೋಲು’ ಸಾಕ್ಷ್ಯಚಿತ್ರ ಪ್ರದರ್ಶನ

    July 20, 2026

    ತುಳು ಸಾಹಿತ್ಯ ಅಕಾಡೆಮಿ ವತಿಯಿಂದ ಕವಿಗೋಷ್ಠಿ ಹಾಗೂ ಪುಸ್ತಕ ಬಿಡುಗಡೆ ಕಾರ್ಯಕ್ರಮ

    July 20, 2026

    ಪದ್ಮಾ ರಾಮಚಂದ್ರ ಶರ್ಮ ಇವರಿಗೆ ಸಾಹಿತ್ಯ ಅಕಾಡೆಮಿ ದತ್ತಿ ಪ್ರಶಸ್ತಿ

    July 20, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ಪದವು ಫ್ರೆಂಡ್ಸ್ ಅವರಿಂದ ಬಯಲಾಟ – ಕಲಾವಿದ ಸಮ್ಮಾನ
    News

    ಪದವು ಫ್ರೆಂಡ್ಸ್ ಅವರಿಂದ ಬಯಲಾಟ – ಕಲಾವಿದ ಸಮ್ಮಾನ

    March 18, 2023Updated:August 19, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    18-03-2023,ಮಂಗಳೂರು: ‘ಸಮಾಜದ ವಿವಿಧ ಬಗೆಯ ಸೇವಾ ಸಂಸ್ಥೆಗಳು ಕ್ರಿಯಾಶೀಲವಾಗಿ ತೊಡಗಿಕೊಂಡಿರುವುದು ಎಲ್ಲರೂ ಹೆಮ್ಮೆಪಡುವ ಸಂಗತಿ. ಇದರೊಂದಿಗೆ ನೃತ್ಯ,ನಾಟಕ, ಯಕ್ಷಗಾನ ಮುಂತಾದ ರಂಗಕಲೆಗಳಿಗೂ ಅವು ಪ್ರೋತ್ಸಾಹ ನೀಡುತ್ತಿರುವುದು ಸ್ತುತ್ಯರ್ಹ. ಏಕೆಂದರೆ ಕಲೆ ಮತ್ತು ಕಲಾವಿದರ ಪೋಷಣೆ ಸಾಮಾಜಿಕ ಜವಾಬ್ದಾರಿಯ ಒಂದು ಭಾಗವೇ ಆಗಿದೆ’ ಎಂದು ವೀರರಾಣಿ ಅಬ್ಬಕ್ಕ ರಾಷ್ಟ್ರೀಯ ಪ್ರತಿಷ್ಠಾನದ ಅಧ್ಯಕ್ಷ, ಯಕ್ಷಗಾನ ವಿದ್ವಾಂಸ ಪ್ರೊ.ಭಾಸ್ಕರ ರೈ ಕುಕ್ಕುವಳ್ಳಿ ಹೇಳಿದ್ದಾರೆ.
    ಪದವು ಫ್ರೆಂಡ್ಸ್ ಕ್ಲಬ್ (ರಿ.) ವತಿಯಿಂದ ಶಕ್ತಿನಗರ ಸರಕಾರಿ ಶಾಲಾ ಮೈದಾನದಲ್ಲಿ ದಿನಾಂಕ 16-03-2023 ರಂದು ಜರಗಿದ ಕಳವಾರು ಶ್ರೀ ಬೆಂಕಿನಾಥೇಶ್ವರ ಕೃಪಾಪೋಷಿತ ದಶಾವತಾರ ಯಕ್ಷಗಾನ ಮಂಡಳಿಯವರ ಯಕ್ಷಗಾನ ಬಯಲಾಟ ಸಂದರ್ಭ ಏರ್ಪಡಿಸಲಾದ ಸನ್ಮಾನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಅವರು ಮಾತನಾಡಿದರು. ‘ಇಂದು ಯಕ್ಷಗಾನ ಈ ಮಟ್ಟಕ್ಕೆ ಬೆಳೆಯಲು ಅನೇಕ ಹಿರಿಯ ಕಲಾವಿದರ ಕೊಡುಗೆ ಕಾರಣ. ಅಂಥವರನ್ನು ಕರೆದು ಪುರಸ್ಕರಿಸುವುದು ಕಲಾ ಸೇವೆಯ ಶೇಷ್ಠ ಮಾದರಿ’ ಎಂದವರು ನುಡಿದರು.

    ಡಿ.ಮನೋಹರ್ ಅವರಿಗೆ ಸನ್ಮಾನ:
    ಕಾರ್ಯಕ್ರಮದಲ್ಲಿ ಬಯಲಾಟ ಮೇಳದ ಹಿರಿಯ ಕಲಾವಿದ ತುಳು ಕನ್ನಡ ಪ್ರಸಂಗಗಳ ಪ್ರಬುದ್ಧ ವೇಷಧಾರಿ ಡಿ.ಮನೋಹರ್ ಕುಮಾರ್ ಅವರನ್ನು ಸನ್ಮಾನಿಸಲಾಯಿತು. ಸನ್ಮಾನಕ್ಕೆ ಉತ್ತರಿಸಿ ಮಾತನಾಡಿದ ಅವರು ‘ಯಕ್ಷಗಾನ ಸೇವೆಯೊಂದಿಗೆ ಎಲೆಮರೆಯ ಕಲಾವಿದರ ಬದುಕಿಗೆ ಆಸರೆಯಾಗಿರುವ ಕೆಲವು ಬಯಲಾಟದ ಮೇಳಗಳು ಹಣವಂತರ ಬೆಂಬಲವಿಲ್ಲದೆ ತುಂಬಾ ಪ್ರಯಾಸದಿಂದ ತಿರುಗಾಟ ನಡೆಸುತ್ತಿವೆ. ಸೇವಾದಾರರು ಮತ್ತು ಸಂಘ ಸಂಸ್ಥೆಗಳು ಅವುಗಳನ್ನು ವಿಶೇಷವಾಗಿ ಪ್ರೋತ್ಸಾಹಿಸಬೇಕು’ ಎಂದರು.
    ಪದವು ಫ್ರೆಂಡ್ಸ್ ಕ್ಲಬ್ ಅಧ್ಯಕ್ಷ ಕುಶಲ್ ಕುಮಾರ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷ ಹರೀಶ್ ಕೆ.ಶಕ್ತಿನಗರ ಉಪಸ್ಥಿತರಿದ್ದರು. ಸದಸ್ಯರಾದ ರವೀಂದ್ರ ರೈ ಸ್ವಾಗತಿಸಿ, ಪ್ರಸ್ತಾವನೆಗೈದರು. ಹರೀಶ್ ಜೋಗಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು. ಬಳಿಕ ಶ್ರೀ ಬೆಂಕಿನಾಥೇಶ್ವರ ಕೃಪಾಪೋಷಿತ ದಶಾವತಾರ ಯಕ್ಷಗಾನ ಮಂಡಳಿ ಬಾಳ, ಕಳವಾರು ಇವರಿಂದ ಗುರುಪುರ ಸುರೇಂದ್ರ ಮಲ್ಲಿ ನೇತೃತ್ವದಲ್ಲಿ ‘ಶ್ರೀ ಕೃಷ್ಣ ದೇವರೆ ಲೀಲೆ’ ತುಳು ಪೌರಾಣಿಕ ಯಕ್ಷಗಾನ ಬಯಲಾಟ ಜರಗಿತು.

    Share. Facebook Twitter Pinterest LinkedIn Tumblr WhatsApp Email
    Previous Articleಸಂತ ಅಲೋಶಿಯಸ್ ಕಾಲೇಜಿನಲ್ಲಿ ’ನಿರುತ್ತರಾಯಣ’ ಯಕ್ಷರೂಪಕ- ಕೆಲವು ಅನಿಸಿಕೆಗಳು: ಪ್ರೊ ಎಂ ಎಲ್ ಸಾಮಗ, ಉಡುಪಿ
    Next Article ಮೈಸೂರು ಜಿಲ್ಲಾ ಹವ್ಯಾಸಿ ರಂಗಕರ್ಮಿಗಳ ವೇದಿಕೆ ವತಿಯಿಂದ “ಮೈಸೂರು ರಂಗಹಬ್ಬ”
    roovari

    Add Comment Cancel Reply


    Related Posts

    ಪು. ಶ್ರೀ. ಭಟ್ ಸ್ಮೃತಿ ದಿನದಲ್ಲಿ ಕೃತಿ ಅನಾವರಣ, ಪ್ರಶಸ್ತಿ ಪ್ರದಾನ ಮತ್ತು ಅವಲೋಕನ

    July 20, 2026

    ಅಂಬುರುಹ ಯಕ್ಷ ಕಲಾ ಕೇಂದ್ರದ ಅಷ್ಟಮ ಸಂಭ್ರಮ | ಜುಲೈ 19

    July 18, 2026

    ‘ಯಕ್ಷಾಷಾಡ’ ಯಕ್ಷಗಾನ ತಾಳಮದ್ದಲೆ ಸರಣಿ ಕಾರ್ಯಕ್ರಮದ ಪ್ರಾರಂಭೋತ್ಸವ

    July 18, 2026

    ಮಲ್ಲ ಕ್ಷೇತ್ರದಲ್ಲಿ ‘ಬಲಿಪ ಭಾಗವತ ಪ್ರಶಸ್ತಿ’ ಪ್ರದಾನ ಸಮಾರಂಭ | ಜುಲೈ 19

    July 17, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.