ಹಾಸನ : ಸಾಹಿತ್ಯ, ಶಿಕ್ಷಣ ಮತ್ತು ಪತ್ರಿಕೋದ್ಯಮದಲ್ಲಿ ಗಣನೀಯ ಸೇವೆ ಸಲ್ಲಿಸಿದ ಅಪರೂಪದ ವ್ಯಕ್ತಿ ಡಾ. ಅರಕಲಗೂಡು ಸೂರ್ಯಪ್ರಕಾಶ್, ಹಾಸನ ಜಿಲ್ಲೆಯ ಅರಕಲಗೂಡಿನವರಾದ ಸೂರ್ಯಪ್ರಕಾಶ್ ಹೆಸರಾಂತ ಪತ್ರಕರ್ತರು. ಪ್ರಸಾರ ಭಾರತಿಯ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದವರು. ಮೈಸೂರು ವಿವಿಯಲ್ಲಿ ಸಮಾಜಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ, ತುಮಕೂರು ವಿವಿಯಲ್ಲಿ ಡಿ.ಲಿಟ್ ಪಡೆದ ಸೂರ್ಯಪ್ರಕಾಶ್ ಝೀ ನ್ಯೂಸ್, ದಿ ಪಯೋನಿರ್, ಏಷ್ಯಾ ಟೈಮ್ಸ್, ಇಂಡಿಯನ್ ಎಕ್ಸ್ ಪ್ರೆಸ್ ಮುಂತಾದ ಪತ್ರಿಕೆಗಳಲ್ಲಿ ಉನ್ನತ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿದವರು. ರಾಜಕೀಯ ವಿಶ್ಲೇಷಣೆ, ಪ್ರಚಲಿತ ವಿದ್ಯಮಾನಗಳ ಬಗ್ಗೆ ಅಪಾರ ಜ್ಞಾನವುಳ್ಳವರು. ಸಂಯುಕ್ತ ಕರ್ನಾಟಕ ಸೇರಿದಂತೆ ಹಲವು ಪತ್ರಿಕೆಗಳಲ್ಲಿ ಅಂಕಣಕಾರರಾಗಿಯೂ ಬಲು ಜನಪ್ರಿಯರು.