ಉಡುಪಿ : ಭೂಮಿಕಾ (ರಿ.) ಹಾರಾಡಿ, ಕರ್ನಾಟಕ ಜಾನಪದ ಪರಿಷತ್ತು (ರಿ.) ಬೆಂಗಳೂರು, ತಲ್ಲೂರ್ಸ್ ಫ್ಯಾಮಿಲಿ ಟ್ರಸ್ಟ್ (ರಿ.) ಉಡುಪಿ ಮತ್ತು ಜಾನಪದ ಸಾಹಿತ್ಯ ಸಾಂಸ್ಕೃತಿಕ ಪ್ರತಿಷ್ಠಾನ (ರಿ.) ಉಡುಪಿ ಇದರ ವತಿಯಿಂದ ‘ಪಂಚದಿನ ನಾಟಕೋತ್ಸವ’ ಬಣ್ಣ -11 ದಿನಾಂಕ 13 ಏಪ್ರಿಲ್ 2025ರಂದು ಸಂಜೆ ಗಂಟೆ 6-30ಕ್ಕೆ ಬ್ರಹ್ಮಾವರದ ಎಸ್.ಎಂ.ಎಸ್. ಕಾಲೇಜಿನ ಮಕ್ಕಳ ಮಂಟಪದಲ್ಲಿ ಆಯೋಜಿಸಲಾಗಿದೆ.
ಅಂಬಲಪಾಡಿ ಶ್ರೀ ಜನಾರ್ದನ ಮಹಾಕಾಳಿ ದೇವಸ್ಥಾನದ ಧರ್ಮದರ್ಶಿಗಳಾದ ಡಾ. ನಿ. ಬೀ. ವಿಜಯ ಬಲ್ಲಾಳ್ ಇವರು ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಹಂಪಿ ಕನ್ನಡ ವಿಶ್ವವಿದ್ಯಾಲಯ ವಿಶ್ರಾಂತ ಕುಲಪತಿಗಳಾದ ಪ್ರೊ. ಹಿ. ಚಿ. ಬೋರಲಿಂಗಯ್ಯ ಇವರಿಗೆ ‘ಜಾನಪದ ಪ್ರಶಸ್ತಿ’ ಪ್ರದಾನ ಮಾಡಲಾಗುವುದು. ಸಭಾ ಕಾರ್ಯಕ್ರಮದ ಬಳಿಕ ವಿದ್ದು ಉಚ್ಚಿಲ್ ಇವರ ನಿರ್ದೇಶನದಲ್ಲಿ ಸುಮನಸಾ ಕೊಡವೂರು ತಂಡದವರಿಂದ ‘ಈದಿ’ ತುಳು ನಾಟಕಗಳು ಪ್ರದರ್ಶನಗೊಳ್ಳಲಿದೆ.