Subscribe to Updates

    Get the latest creative news from FooBar about art, design and business.

    What's Hot

    ಮಣಿ ಕೃಷ್ಣಸ್ವಾಮಿ ಅಕಾಡೆಮಿಯಿಂದ ಸಂಗೀತ ಕಾರ್ಯಾಗಾರ | ಮೇ 24 ಮತ್ತು 25

    May 12, 2025

    ಡಾ. ಸುಷ್ಮಾ ಎಸ್.ವಿ.ಯವರಿಗೆ ‘ಗೌರಿ ಸುಂದರ್’ ವಾರ್ಷಿಕ ಪ್ರಶಸ್ತಿ ಪ್ರದಾನ

    May 12, 2025

    ‘ಬಾಲ ಸಾಹಿತ್ಯ ಚಿಗುರು ಪುರಸ್ಕಾರ’ಕ್ಕಾಗಿ ‘ನಕ್ಷತ್ರ ಪಟಲ’ ಕೃತಿ ಆಯ್ಕೆ

    May 12, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಮಂಡ್ಯ ರಮೇಶ್ ಇವರಿಗೆ ‘ಪಂಚಮಿ ಪುರಸ್ಕಾರ -2025’
    Artist

    ಮಂಡ್ಯ ರಮೇಶ್ ಇವರಿಗೆ ‘ಪಂಚಮಿ ಪುರಸ್ಕಾರ -2025’

    October 16, 2024Updated:January 7, 2025No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಉಡುಪಿ : ಪಂಚಮಿ ಟ್ರಸ್ಟ್ (ರಿ.) ಉಡುಪಿ ಪ್ರಾಯೋಜಿತ ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ.) ಉಡುಪಿ ಕೊಡಮಾಡುವ ‘ಪಂಚಮಿ ಪುರಸ್ಕಾರ- 2025’ಕ್ಕೆ ಕನ್ನಡ ರಂಗಭೂಮಿಯ ಹಿರಿಯ ನಟ ಶ್ರೀ ಮಂಡ್ಯ ರಮೇಶ್ ಇವರನ್ನು ಆಯ್ಕೆ ಮಾಡಲಾಗಿದೆ. ಪುರಸ್ಕಾರವು ಗೌರವ ಧನ ಒಂದು ಲಕ್ಷ ರೂಪಾಯಿಯೊಂದಿಗೆ ಪ್ರಶಸ್ತಿ ಪತ್ರ, ಪದಕ ಒಳಗೊಂಡಿದ್ದು, ಜನವರಿ ತಿಂಗಳಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು.

    ಮಂಡ್ಯ ರಮೇಶ್
    ನಟ, ನಿರ್ದೇಶಕ, ರಂಗಶಿಕ್ಷಕ, ರಂಗ ಸಂಘಟಕ ಹಾಗೂ ಕಿರುತೆರೆ-ಚಲನಚಿತ್ರಗಳ ಹಿರಿಯ ಕಲಾವಿದ. ಮೈಸೂರಿನ ನಟನ ಸಂಸ್ಥೆ ಹಾಗೂ ರಂಗಶಾಲೆಯ ಸ್ಥಾಪಕ. ಹಿರಿಯ ರಂಗಕರ್ಮಿ ನೀನಾಸಂ ರಂಗ ಶಿಕ್ಷಣ ಕೇಂದ್ರದಲ್ಲಿ ಅಧ್ಯಯನ ಮತ್ತು ನೀನಾಸಂ ತಿರುಗಾಟದ ಮೊದಲ ಮೂರು ವರ್ಷಗಳ ಕಲಾವಿದ. ಮೈಸೂರಿನ ರಂಗಾಯಣದಲ್ಲಿ ಬಿ.ವಿ. ಕಾರಂತರ ಗರಡಿಯಲ್ಲಿ ರಂಗಕಾಯಕ. ಪ್ರಸನ್ನ, ಜಂಬೆ, ಕೆ.ವಿ.ಸುಬ್ಬಣ್ಣ, ಫಿಟ್ಸ್ ಬೆನೆವಿಟ್ಸ್ ಮುಂತಾದ ಗಣ್ಯ ನಿರ್ದೇಶಕರೊಂದಿಗೆ ದುಡಿದ ಅನುಭವ. ಕೇಂದ್ರ ಸಂಸ್ಕೃತಿ ಇಲಾಖೆಯ ರಂಗತಜ್ಞರ ಸಮಿತಿ ಸದಸ್ಯರಾಗಿ, ಕರ್ನಾಟಕ ನಾಟಕ ಅಕಾಡೆಮಿ ಸದಸ್ಯರಾಗಿ, ರಂಗಾಯಣದ ರಂಗಸಮಾಜದ ಸದಸ್ಯರಾಗಿ ಕಾರ್ಯನಿರ್ವಹಣೆ.

    ಭಾರತದ ಪುಟ್ಟ ಹಳ್ಳಿ – ಮಹಾನಗರಗಳಾದಿಯಾಗಿ ಅಮೇರಿಕಾದ ನ್ಯೂಯಾರ್ಕ್, ಕ್ಯಾಲಿಫೋರ್ನಿಯ, ವಾಷಿಂಗ್ಟನ್ ಡಿ.ಸಿ., ಆಸ್ಟೇಲಿಯಾ, ಜರ್ಮನಿ, ಆಸ್ಟ್ರಿಯಾ, ಲಂಡನ್, ದುಬೈ, ನೇಪಾಳ, ಥೈಲ್ಯಾಂಡ್, ಸಿಂಗಾಪುರ್, ಶ್ರೀಲಂಕಾ, ಜಪಾನ್ ಮುಂತಾದ ಅನೇಕ ರಾಷ್ಟ್ರಗಳಲ್ಲಿ ನಾಟಕ ಪ್ರದರ್ಶನ, ಶಿಬಿರಗಳನ್ನು ನಡೆಸಿದ ಅನುಭವ. 2018ರ ನವೆಂಬರ್ ತಿಂಗಳಲ್ಲಿ ಜಪಾನ್‌ನಲ್ಲಿ ನಡೆದ ಕನ್ನಡ ಹಬ್ಬದಲ್ಲಿ ಪಾಲ್ಗೊಂಡು ರಂಗಭೂಮಿ ಮತ್ತು ಕನ್ನಡದ ಕುರಿತಾಗಿ ಉಪನ್ಯಾಸ ನೀಡಿದ್ದಾರೆ.

    ಸಂಕ್ರಾಂತಿ, ಮಹಿಮಾಪುರ, ಮಾರನಾಯಕ, ಊರುಭಂಗ, ಯುಯುತ್ಸು, ಚೋರ ಚರಣದಾಸ, ಮಣ್ಣಿನಗಾಡಿ, ನಾಗಮಂಡಲ, ಅಗ್ನಿ ಮತ್ತು ಮಳೆ, ಚಾಮ ಚಲುವೆ, ಸುಭದ್ರಾ ಕಲ್ಯಾಣ, ಈ ಕೆಳಗಿನವರು, ಸಾಯೋ ಆಟ, ಅಲೀಬಾಬಾ ನಾಯಿತಿಪ್ಪ, ರತ್ನಪಕ್ಸಿ, ರಾಮ ರಹೀಮ, ಮೃಚ್ಛಕಟಿಕ, ಬೆತ್ತಲೆ ಅರಸನ ರಾಜರಹಸ್ಯ, ಕೃಷ್ಣೇಗೌಡರ ಆನೆ, ಸ್ಥಾವರವೂ ಜಂಗಮ ಮುಂತಾದ ಅಸಂಖ್ಯಾತ ನಾಟಕಗಳ ನಿರ್ದೇಶನ. ಜನುಮದ ಜೋಡಿ, ನಾಗಮಂಡಲ, ಕನಸುಗಾರ, ಅಮೃತಧಾರೆ, ಮಠ, ರನ್ನ, ಒಗ್ಗರಣೆ, ಕಿರಗೂರಿನ ಗಯ್ಯಾಳಿಗಳು, ದಿ ವಿಲನ್, ಯಜಮಾನ, ಡೇರ್ ಡೆವಿಲ್ ಮುಸ್ತಾಫ, ತಲೆದ಼ಂಡ, ಫಿಸಿಕ್ಸ್ ಟೀಚರ್, ಕ್ರಾಂತಿ… ಮುಂತಾದ 310ಕ್ಕೂ ಹೆಚ್ಚಿನ ಚಲನಚಿತ್ರಗಳಲ್ಲಿ ಮತ್ತು ಕಿರುತೆರೆಯಲ್ಲಿ ಅಸಂಖ್ಯ ಧಾರಾವಾಹಿಗಳು, ಮಜಾ ಟಾಕೀಸ್ ಇತ್ಯಾದಿ ಕಿರುತೆರೆಯ ಕಾಮೆಡಿ ಶೋಗಳಲ್ಲಿ ಅಭಿನಯಿಸಿದ್ದಾರೆ.

    ನಾಗಮಂಡಲದಲ್ಲಿನ ಅಭಿನಯಕ್ಕೆ ರಾಜ್ಯ ಸರ್ಕಾರದ ಶ್ರೇಷ್ಠ ಪೋಷಕನಟ ಪ್ರಶಸ್ತಿ, ಆರ್ಯಭಟ ಪ್ರಶಸ್ತಿ, ರಂಗಭೀಷ್ಮ, ಕರ್ನಾಟಕ ನಾಟಕ ಅಕಾಡೆಮಿಯ ಪ್ರಶಸ್ತಿ ಮುಂತಾದವುಗಳು. ಬೆಂಗಳೂರು ಅಂತರಾಷ್ಟ್ರೀಯ ಚಲನ ಚಿತ್ರೋತ್ಸವದಲ್ಲಿ ಅಂತರಾಷ್ಟ್ರೀಯ ಜ್ಯೂರಿಗಳ ವಿಶೇಷ ಮನ್ನಣೆಗೆ ಪಾತ್ರವಾದ ಉಪ್ಪಿನ ಕಾಗದ ಚಿತ್ರದ ಮುಖ್ಯ ಪಾತ್ರ. ಮೈಸೂರಿನಲ್ಲಿ ‘ನಟನ’ ರಂಗಶಾಲೆ ಜೊತೆಯಲ್ಲೇ ನಟನ ರಂಗಮಂದಿರ ಕಟ್ಟಿ, ನೂರಾರು ಕಲಾವಿದರನ್ನು ಬೆಳೆಸಿ ಮೈಸೂರಿನಲ್ಲಿ ರಂಗಕಾಯಕಕ್ಕೆ ಒಂದು ಪ್ರತಿಷ್ಠೆಯನ್ನು ತಂದುಕೊಟ್ಟಿರುವ ಅಪರೂಪದ ಸಾಂಸ್ಕೃತಿಕ ಸಾಧಕ ಇವರು. ಇಂಥ ರಂಗ ಸಾಧಕ ಶ್ರೀ ಮಂಡ್ಯ ರಮೇಶ್ ಇವರಿಗೆ 2017ರ ವಾರ್ಷಿಕ ಪ್ರಶಸ್ತಿಯನ್ನು ನೀಡಿ ಕರ್ನಾಟಕ ನಾಟಕ ಅಕಾಡೆಮಿಯು ಗೌರವಿಸಿದೆ.

    ಮೈಸೂರು ವಿಶ್ವವಿದ್ಯಾನಿಲಯದ ಗುಬ್ಬಿ ವೀರಣ್ಣ ರಂಗಪೀಠಕ್ಕೆ ಎರಡನೇ ಅವಧಿಗೂ ಸಂದರ್ಶಕ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸಿದ್ದಾರೆ. ಕೇಂದ್ರ ಸಂಸ್ಕೃತಿ ಇಲಾಖೆಯಲ್ಲಿ ಅವಜ್ಞಿತ ಕಲಾ ಪರಂಪರೆ ತಜ್ಞರ ಸಮಿತಿ ಸದಸ್ಯರಾಗಿ ಕೂಡ ಕಾರ್ಯನಿರ್ವಹಿಸಿದ್ದಾರೆ. ಮಂಡ್ಯ ರಮೇಶ್ ಅವರ ನೇತೃತ್ವದ ನಟನ ರಂಗಶಾಲೆಗೆ ಮೈಸೂರು ವಿಶ್ವವಿದ್ಯಾನಿಲಯದಿಂದ ಮಾನ್ಯತೆ ದೊರೆತಿದೆ. ಮೈಸೂರಿನಲ್ಲಿ ನಟನ ರಂಗಮಂದಿರ ನಿರ್ಮಿಸಿ, ನಟನ ರಂಗಶಾಲೆ, ನಟನ ಮಕ್ಕಳ ರಂಗಶಾಲೆಯನ್ನು ನಿರಂತರವಾಗಿ ಪೋಷಿಸಿಕೊಂಡು ಬರುತ್ತಿದ್ದಾರೆ. ಜೀ ಕನ್ನಡದ ಪ್ರತಿಷ್ಠಿತ ಕಾರ್ಯಕ್ರಮ ಶ್ರೀ ರಮೇಶ್ ಅರವಿಂದ್ ಅವರು ನಡೆಸಿಕೊಡುವ ‘ವೀಕೆಂಡ್ ವಿತ್ ರಮೇಶ್’ ಕಾರ್ಯಕ್ರಮದಲ್ಲಿ ತಮ್ಮ ರಂಗಭೂಮಿ ಸಾಧನೆಗಾಗಿ ಸಾಧಕರ ಕುರ್ಚಿಯನ್ನು ಅಲಂಕರಿಸಿರುತ್ತಾರೆ.

    Share. Facebook Twitter Pinterest LinkedIn Tumblr WhatsApp Email
    Previous Articleಪೊಳಲಿಯಲ್ಲಿ ‘ಶ್ರೀ ಹರಿಲೀಲಾ ಪ್ರಶಸ್ತಿ’ ಪ್ರದಾನ
    Next Article ಮಂಗಳೂರಿನ ಪುರಭವನದಲ್ಲಿ ಹಿಂದುಸ್ತಾನಿ ಸಂಗೀತ ದಿಗ್ಗಜರ ಸಮಾಗಮ | ಅಕ್ಟೋಬರ್ 27
    roovari

    Add Comment Cancel Reply


    Related Posts

    ಡಾ. ಸುಷ್ಮಾ ಎಸ್.ವಿ.ಯವರಿಗೆ ‘ಗೌರಿ ಸುಂದರ್’ ವಾರ್ಷಿಕ ಪ್ರಶಸ್ತಿ ಪ್ರದಾನ

    May 12, 2025

    ‘ಬಾಲ ಸಾಹಿತ್ಯ ಚಿಗುರು ಪುರಸ್ಕಾರ’ಕ್ಕಾಗಿ ‘ನಕ್ಷತ್ರ ಪಟಲ’ ಕೃತಿ ಆಯ್ಕೆ

    May 12, 2025

    ಡಾ. ಮಾಲತಿ ಶೆಟ್ಟಿ ಮಾಣೂರು ಇವರಿಗೆ ‘ಕರುನಾಡ ಕಾಯಕ ಯೋಗಿ ಸದ್ಭಾವನ’ ರಾಜ್ಯಪ್ರಶಸ್ತಿ ಪ್ರಧಾನ

    May 12, 2025

    ಬೆಳಗಾವಿಯ ಲೋಕಮಾನ್ಯ ರಂಗಮಂದಿರದಲ್ಲಿ ವಿಶ್ವಾವಸು ನಾಟಕ ಪ್ರಾರಂಭೋತ್ಸವ | ಮೇ 17 ಮತ್ತು 18

    May 12, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.