ಕಾಸರಗೋಡು : ಕನ್ನಡ ಭವನ ಗ್ರಂಥಾಲಯ, ಕನ್ನಡ ಭವನ ಪ್ರಕಾಶನದ ಸಾರಥ್ಯದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಕೇರಳ ಗಡಿನಾಡ ಘಟಕ ಮತ್ತು ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ಸಹಯೋಗದಲ್ಲಿ ಹಾಗೂ ಪ್ರದೀಪ್ ಕುಮಾರ್ ಕಲ್ಕೂರ ಸಹಕಾರದಲ್ಲಿ ಕಾಸರಗೋಡು ನುಳ್ಳಿಪ್ಪಾಡಿಯ ಸೀತಮ್ಮ ಪುರುಷ ನಾಯಕ ಸ್ಮಾರಕ ಕನ್ನಡ ಭವನ ಮತ್ತು ಗ್ರಂಥಾಲಯ ಸಭಾಂಗಣದಲ್ಲಿ ದಿನಾಂಕ 22-02-2024ರಂದು ಶ್ರೀಮಾನ್ ಪಂಜೆ ಮಂಗೇಶರಾಯರ 150ನೇ ಜನ್ಮದಿನ ಸಂಭ್ರಮದ ಕಾರ್ಯಕ್ರಮಗಳು ನಡೆಯಿತು.
ನಿವೃತ್ತ ಪ್ರಾಧ್ಯಾಪಕ ಡಾ. ಪಿ. ಶ್ರೀಕೃಷ್ಣ ಭಟ್ ಅಧ್ಯಕ್ಷತೆ ವಹಿಸಿದರು. ಕ.ಸಾ.ಪ. ದ.ಕ. ಜಿಲ್ಲಾ ಮಾಜಿ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ ಕಾರ್ಯಕ್ರಮ ಉದ್ಘಾಟಿಸಿದರು. ಡಾ. ಎಂ.ಪಿ. ಶ್ರೀನಾಥ್, ಡಾ. ಜಯಪ್ರಕಾಶ್ ನಾರಾಯಣ್, ಡಾ. ಕೆ. ಕಮಲಾಕ್ಷ, ಡಾ. ಯು. ಮಹೇಶ್ವರಿ, ಪ್ರೊ. ಪಿ.ಎನ್. ಮೂಡಿತ್ತಾಯ, ಪ್ರೊ. ಎ. ಶ್ರೀನಾಥ್, ಕವಿ ವಿ.ಬಿ. ಕುಳಮರ್ವ, ನ್ಯಾಯವಾದಿ ಥೋಮಸ್ ಡಿ’ಸೋಜಾ, ಕಥಾಬಿಂದು ಪ್ರಕಾಶನದ ರೂವಾರಿ ಸಾಹಿತಿ ಪಿ.ವಿ. ಪ್ರದೀಪ್ ಕುಮಾರ್, ಡಾ. ಪಿ. ಕೃಷ್ಣ ಭಟ್, ಡಾ. ಎಸ್.ಪಿ. ಮಹಾಲಿಂಗೇಶ್ವರ ಭಟ್, ಡಾ. ಗೋವಿಂದ ಭಟ್, ಹಾಸ್ಯ ಲೇಖಕ ವೈ. ಸತ್ಯನಾರಾಯಣ, ಡಾ. ಶೈಲಾ, ಡಾ. ಕೊಳ್ಚಪ್ಪೆ ಗೋವಿಂದ ಭಟ್, ಕವಯಿತ್ರಿ ರೇಖಾ ಸುದೇಶ್ ರಾವ್, ರಾಮರಾಜ ಕ್ಷತ್ರಿಯ ಜಿಲ್ಲಾ ಮಹಿಳಾ ಸಂಘದ ಗೌರವಾಧ್ಯಕ್ಷೆ ಕವಯಿತ್ರಿ ಆಶಾ ರಾಧಾಕೃಷ್ಣ, ನಿಕಟಪೂರ್ವ ಅಧ್ಯಕ್ಷೆ ಉಷಾ ಕಿರಣ್, ಸಂಧ್ಯಾರಾಣಿ ಟೀಚರ್ ಮುಂತಾದವರು ಪಂಜೆಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ನುಡಿನಮನ ಸಲ್ಲಿಸಿದರು.
ಡಾ. ಡಿ. ಸದಾಶಿವ ಭಟ್ ನಿಡ್ಪಳ್ಳಿ ಇವರಿಗೆ ಕಾರ್ಯಕ್ರಮದ ಉದ್ಘಾಟಕರಾದ ಪ್ರದೀಪ್ ಕುಮಾರ್ ಕಲ್ಕೂರ ಶಾಲು ಹೊದಿಸಿ, ಕನ್ನಡ ಸಾಹಿತ್ಯ ಪರಿಷತ್ತಿನ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷರಾದ ಡಾ. ಎಂ.ಪಿ. ಶ್ರೀನಾಥ್ ಹಾರಾರ್ಪಣೆಗೈದು, ಕನ್ನಡ ಸಾಹಿತ್ಯ ಪರಿಷತ್ ಗಡಿನಾಡ ಘಟಕ ಅಧ್ಯಕ್ಷರಾದ ಡಾ. ಜಯಪ್ರಕಾಶ್ ತೋಟ್ಟೆತೋಡಿ ಸ್ಮರಣಿಕೆ ನೀಡಿ, ಕನ್ನಡ ಭವನ ಕಾಸರಗೋಡು ರೂವಾರಿ ವಾಮನ್ ರಾವ್ ಬೇಕಲ್ ‘ಪಂಜೆ ಮಂಗೇಶರಾಯ ರಾಷ್ಟ್ರೀಯ ಪ್ರಶಸ್ತಿ’ ನೀಡಿ ಗೌರವಿಸಿದರು. ಪಂಜೆಯವರ ‘ಮಕ್ಕಳ ಸಾಹಿತ್ಯ ಮತ್ತು ಬದುಕು’ ಬಗ್ಗೆ ವಿಶೇಷ ಉಪನ್ಯಾಸವನ್ನು ಕೇಂದ್ರ ಸಾಹಿತ್ಯ ಅಕಾಡೆಮಿಯ ನಿವೃತ್ತ ಉಪಕಾರ್ಯದರ್ಶಿ ಡಾ. ಎಸ್.ಪಿ. ಮಹಾಲಿಂಗೇಶ್ವರ ಭಟ್ ನೀಡಿದರು. ಇದೇ ಸಂದರ್ಭದಲ್ಲಿ ಕವಯಿತ್ರಿ ಚಂಚಲಾಕ್ಷಿ ಶ್ಯಾಮ್ ಪ್ರಕಾಶ್ ಅವರ ಕವನ ಸಂಕಲನ ‘ಮತ್ತೆ ಚಿಗುರಿದ ಭಾವ’ ಕೃತಿ ಬಿಡುಗಡೆಗೊಳಿಸಲಾಯಿತು. ಕನ್ನಡ ಭವನ ಸ್ಥಾಪಕ ವಾಮನ ರಾವ್ ಬೇಕಲ್ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ರವಿ ನಾಯ್ಕಾಪು ಸ್ವಾಗತಿಸಿ, ವಿಶಾಲಾಕ್ಷ ಪುತ್ರಕಳ ನಿರೂಪಿಸಿ, ಪ್ರೊ. ಎ. ಶ್ರೀನಾಥ್ ವಂದಿಸಿದರು.