ಕಾಸರಗೋಡು: ಕನ್ನಡ ಸಾಹಿತ್ಯ ಪರಿಷತ್ತು ಕೇರಳ ಗಡಿನಾಡ ಘಟಕದ ‘ಪರಿಷತ್ತಿನ ನಡಿಗೆ ಹಿರಿಯ ಸಾಧಕರ ಕಡೆಗೆ’ ಎಂಬ ಕಾರ್ಯಕ್ರಮದಂಗವಾಗಿ ಹಿರಿಯ ಯಕ್ಷಗಾನ ಕಲಾವಿದ ಅಡ್ಕ ಗೋಪಾಲಕೃಷ್ಣ ಭಟ್ ಇವರನ್ನು ಅಭಿನಂದಿಸುವ ಕಾರ್ಯಕ್ರಮ ದಿನಾಂಕ 01 ಮಾರ್ಚ್ 2025 ರಂದು ಅವರ ಸ್ವ ಗೃಹದಲ್ಲಿ ನಡೆಯಿತು.
ಘಟಕದ ಅಧ್ಯಕ್ಷರಾದ ಡಾ. ಜಯಪ್ರಕಾಶ ನಾರಾಯಣ ಇವರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಅಡ್ಕ ಗೋಪಾಲಕೃಷ್ಣ ಭಟ್ ಹಾಗೂ ಸುಮತಿ ಕೆ. ದಂಪತಿಯನ್ನು ಅಭಿನಂದಿಸಲಾಯಿತು. ಹಿರಿಯ ತಾಳಮದ್ದಲೆ ಅರ್ಥಧಾರಿ ಬೆಳ್ಳಿಗೆ ನಾರಾಯಣ ಮಣಿಯಾಣಿ, ನಿವೃತ್ತ ಸಹಾಯಕ ಶಿಕ್ಷಣಾಧಿಕಾರಿ ಯತೀಶ ಕುಮಾರ್ ರೈ. ಯಕ್ಷಗಾನ ಭಾಗವತ ತಲ್ಪನಾಜಿ ವೆಂಕಟ್ರಮಣ ಭಟ್, ನಿವೃತ್ತ ಮುಖ್ಯ ಶಿಕ್ಷಕ ಕೃಷ್ಣ ಭಟ್, ಪ್ರೇಮಲತಾ ಕೆ., ಕೃಷ್ಣ ಕುಮಾರ್, ಕನ್ನಡ ಸಾಹಿತ್ಯ ಪರಿಷತ್ತಿನ ಸಂಘಟನ ಕಾರ್ಯದರ್ಶಿ ವಿಶಾಲಾಕ್ಷ ಪುತ್ರಕಳ, ಗೌರವ ಕಾರ್ಯದರ್ಶಿ ಶೇಖರ ಶೆಟ್ಟಿ ಬಾಯಾರು ಉಪಸ್ಥಿತರಿದ್ದರು.