ನಾಪೋಕ್ಲು : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಪಾಜೆ ಸ್ಥಳೀಯ ಸಂಸ್ಥೆ ವತಿಯಿಂದ ದೇಶಭಕ್ತಿ ಗೀತೆ ಗಾಯನ ಸ್ಪರ್ಧೆ ದಿನಾಂಕ 14-09-2023ರಂದು ನಾಪೋಕ್ಲುವಿನ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ನಡೆಯಿತು.
ಸ್ಪರ್ಧಾ ಕಾರ್ಯಕ್ರಮವನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಕ್ಷೇತ್ರ ಶಿಕ್ಷಣಾಧಿಕಾರಿ ಡಾ.ಬಿ.ಸಿ ದೊಡ್ಡಗೌಡ ಉದ್ಘಾಟಿಸಿದರು. ದೇಶಭಕ್ತಿ ಗೀತೆ ಗಾಯನ ಸ್ಪರ್ಧೆಯಲ್ಲಿ ಸಂಪಾಜೆ ಸ್ಥಳೀಯ ಸಂಸ್ಥೆಗೊಳಪಟ್ಟ ಒಂಭತ್ತು ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ಈ ಕಾರ್ಯಕ್ರಮದಲ್ಲಿ ನಾಪೋಕ್ಲು ಗ್ರಾಪಂ.ಅಧ್ಯಕ್ಷೆ ವನಜಾಕ್ಷಿ ರೇಣುಕೇಶ್, ಉಪಾಧ್ಯಕ್ಷೆ ಕುಲ್ಲೇಟಿರ ಹೇಮಾವತಿ ಅರುಣ್, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಅಧ್ಯಕ್ಷ ಧನಂಜಯ.ಎಂ, ಸಂಸ್ಥೆಯ ಎ.ಡಿ.ಸಿ ಹ್ಯಾರಿಸ್ ಕೆ.ಎ, ಅಂಕುರ್ ಪಬ್ಲಿಕ್ ಶಾಲೆಯ ಕಾರ್ಯದರ್ಶಿ ರತ್ನ ಚರ್ಮಣ, ಕೆ.ಪಿ.ಎಸ್ ಉಪಪ್ರಾಂಶುಪಾಲರಾದ ಎಂ.ಎಸ್.ಶಿವಣ್ಣ, ಕಾರ್ಯಕಾರಿ ಸಮಿತಿಯ ಕಾರ್ಯದರ್ಶಿ ಉಷಾರಾಣಿ, ಖಜಾಂಜಿ ಗಂಗಮ್ಮ, ರಂಜಿತ್, ಶಿಕ್ಷಣ ಸಂಯೋಜಕ ಹರೀಶ್ ಇನ್ನಿತರರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಸಂಸ್ಥೆ ವತಿಯಿಂದ ಕ್ಷೇತ್ರ ಶಿಕ್ಷಣಾಧಿಕಾರಿ ಡಾ.ಬಿ.ಸಿ.ದೊಡ್ಡಗೌಡ ಅವರನ್ನು ಸನ್ಮಾನಿಸಲಾಯಿತು.
ಸ್ಪರ್ಧಾ ವಿಜೇತರು :
ದೇಶಭಕ್ತಿ ಗೀತೆ ಗಾಯನ ಸ್ಪರ್ಧೆಯಲ್ಲಿ ಸ್ಕೌಟ್ ವಿಭಾಗದಲ್ಲಿ ಅಂಕುರ್ ಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನವನ್ನು, ಕೆ.ಪಿ.ಎಸ್ ಶಾಲಾ ವಿದ್ಯಾರ್ಥಿಗಳು ದ್ವಿತೀಯ ಸ್ಥಾನವನ್ನು ಹಾಗೂ ಚೆರಿಯಪರಂಬು ಶಾಲಾ ವಿದ್ಯಾರ್ಥಿಗಳು ತೃತೀಯ ಸ್ಥಾನಗಳಿಸಿದರು. ಗೈಡ್ಸ್ ವಿಭಾಗದಲ್ಲಿ ಕೆ.ಪಿ.ಎಸ್ ಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನವನ್ನು, ಎಕ್ಸೆಲ್ ಸ್ಕೂಲ್ ಆಫ್ ಎಜುಕೇಶನ್‌ನ ವಿದ್ಯಾರ್ಥಿಗಳು ದ್ವಿತೀಯ ಸ್ಥಾನವನ್ನು ಹಾಗೂ ಶ್ರೀರಾಮ ಟ್ರಸ್ಟ್ ಶಾಲೆಯ ವಿದ್ಯಾರ್ಥಿಗಳು ತೃತೀಯ ಸ್ಥಾನವನ್ನು ಗಳಿಸಿದರು.