Subscribe to Updates

    Get the latest creative news from FooBar about art, design and business.

    What's Hot

    ಬೆಂಗಳೂರಿನಲ್ಲಿ ಕ್ಲೇ ಮಾಡೆಲಿಂಗ್ ಪ್ರದರ್ಶನ | ಮೇ 24

    May 21, 2025

    ಬಾನು ಮುಷ್ತಾಕ್‌ ಕೃತಿಗೆ ಪ್ರತಿಷ್ಠಿತ ಅಂತರರಾಷ್ಚ್ರೀಯ ‘ಬೂಕರ್ ಪ್ರಶಸ್ತಿ’

    May 21, 2025

    ಹರಿಹರಪುರದಲ್ಲಿ ‘ಭಾಗವತರ ಸಂಸ್ಮರಣೆ ಗಾನಾರಾಧನೆ’ | ಮೇ 25

    May 21, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಅಂಕೋಲಾ ಕ. ಸಾ. ಪ. ಹಾಗೂ ಮಿತ್ರ ಸಂಗಮದಿಂದ ದೇಶಭಕ್ತಿ ಗೀತೆಗಳ ಸ್ಪರ್ಧೆ ಹಾಗೂ ಸಾಹಿತಿಗಳ ಸಂವಾದ ಕಾರ್ಯಕ್ರಮ
    Literature

    ಅಂಕೋಲಾ ಕ. ಸಾ. ಪ. ಹಾಗೂ ಮಿತ್ರ ಸಂಗಮದಿಂದ ದೇಶಭಕ್ತಿ ಗೀತೆಗಳ ಸ್ಪರ್ಧೆ ಹಾಗೂ ಸಾಹಿತಿಗಳ ಸಂವಾದ ಕಾರ್ಯಕ್ರಮ

    August 26, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email
    ಅಂಕೋಲಾ : ಭಾರತದ 78 ನೇ ಸ್ವಾತಂತ್ರ್ಯೋತ್ಸವ ಸಂಭ್ರಮದ ನಿಮಿತ್ತ ಕನ್ನಡ ಸಾಹಿತ್ಯ ಪರಿಷತ್ ಅಂಕೋಲಾ ಘಟಕ ಹಾಗೂ ಸಾಹಿತಿಗಳ ಒಕ್ಕೂಟವಾದ ಮಿತ್ರ ಸಂಗಮ ಇದರ ಸಹಯೋಗದಲ್ಲಿ ವಿದ್ಯಾರ್ಥಿಗಳಿಗಾಗಿ ದೇಶಭಕ್ತಿ ಗೀತೆಗಳ ಗಾಯನ ಸ್ಪರ್ಧೆ ಹಾಗೂ ಅಂಕೋಲದ ಹಿರಿಯ ಸಾಹಿತಿಗಳೊಂದಿಗೆ ವಿದ್ಯಾರ್ಥಿಗಳ ಸಂವಾದ ಕಾರ್ಯಕ್ರಮ 23 ಆಗಸ್ಟ್ 2024ರಂದು ನಡೆಯಿತು.
    ಅಂಕೋಲ ಇಲ್ಲಿನ  ಗ್ರಾಮೀಣ ಭಾಗದ ಬೇಳಾಬಂದರಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗಾಗಿ ಏರ್ಪಡಿಸಿದ ದೇಶಭಕ್ತಿ ಗೀತೆ ಸ್ಪರ್ಧೆಯಲ್ಲಿ ವಿಜೇತರಿಗೆ ನಗದು ಹಾಗೂ ಉಪಯುಕ್ತ ಪುಸ್ತಕಗಳನ್ನು ಬಹುಮಾನವಾಗಿ ನೀಡಲಾಯಿತು. ಸಾಹಿತಿಗಳೊಂದಿಗೆ ವಿದ್ಯಾರ್ಥಿಗಳ ಸಂವಾದ ಕಾರ್ಯಕ್ರಮದಲ್ಲಿ ಹಿರಿಯ ಸಾಹಿತಿಗಳಾದ ಪ್ರೊ. ಮೋಹನ ಹಬ್ಬು, ರಾಮಕೃಷ್ಣ ಗುಂದಿ, ನಾಗೇಂದ್ರ ತೊರ್ಕೆ, ಗೋಪಾಲಕೃಷ್ಣ ನಾಯಕ ಹಾಗೂ ಮಹಾಂತೇಶ ರೇವಡಿ ವಿದ್ಯಾರ್ಥಿಗಳ ಪ್ರಶ್ನೆಗಳಿಗೆ ಉತ್ತರ ನೀಡಿ ರಂಜಿಸಿದರು.
    ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಅಂಕೋಲಾ ಕ. ಸಾ. ಪ ಘಟಕದ ಅಧ್ಯಕ್ಷರಾದ ಗೋಪಾಲಕೃಷ್ಣ ನಾಯಕ ಮಾತನಾಡಿ “ನಾಡು ನುಡಿಯ ಬಗ್ಗೆ ವಿದ್ಯಾರ್ಥಿಗಳು ಶ್ರದ್ಧೆ ಹಾಗೂ ಗೌರವ ಹೊಂದಿರಬೇಕು. ವ್ಯಕ್ತಿತ್ವ ವೃದ್ಧಿಸಿಕೊಳ್ಳಲು ಉತ್ತಮ ಪುಸ್ತಕಗಳ ಓದು ಸಹಕಾರಿಯಾಗುವುದು.” ಎಂದರು. ಹಿರಿಯ ಸಾಹಿತಿ ಹಬ್ಬು ಇವರು ಕಾರ್ಯಕ್ರಮದಲ್ಲಿ ಭಾವಗೀತೆ ಹಾಡಿದರು. ರಾಮಕೃಷ್ಣ ಗುಂದಿ ಇವರು ಶಾಲಾ ವಿದ್ಯಾರ್ಥಿಗಳ ಪ್ರತಿಭೆಯನ್ನು ಮುಕ್ತ ಕಂಠದಿಂದ ಶ್ಲಾಘಿಸಿದರು.
    ಸಾಹಿತಿಗಳಾದ ನಾಗೇಂದ್ರ ತೊರ್ಕೆ, ಮಹಾಂತೇಶ ರೇವಡಿ ಹಾಗೂ ನಿವೃತ್ತ ಮುಖ್ಯೋಪಾಧ್ಯಾಯ ಮಾದೇವ ಆಗೇರ ಸಾಂದರ್ಭಿಕವಾಗಿ ಮಾತನಾಡಿದರು. ಮುಖ್ಯೋಪಾಧ್ಯಾಯ ವಾಮನ ಆಗೇರ ಸ್ವಾಗತಿಸಿ, ಶಿಕ್ಷಕಿ ಸುಮನಾ ನಾಯಕ ನಿರೂಪಿಸಿ, ಸುವರ್ಣ ನಾಯಕ ಸಹಕರಿಸಿ, ಶಿಕ್ಷಕಿ ವಿನುತಾ ನಾಯಕ ವಂದಿಸಿದರು. ಎಸ್‌. ಡಿ. ಎಂ. ಸಿ. ಅಧ್ಯಕ್ಷ ರತ್ನಾಕರ ನಾಯ್ಕ ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr WhatsApp Email
    Previous Articleಬಪ್ಪಳಿಗೆ ಅಂಬಿಕಾ ಕಾಲೇಜಿನಲ್ಲಿ ವಿಶ್ವ ಸಂಸ್ಕೃತ ದಿನಾಚರಣೆ ಮತ್ತು ರಕ್ಷಾ ಬಂಧನ ಕಾರ್ಯಕ್ರಮ
    Next Article ಹನ್ನೆರಡನೇ ವರ್ಷದ ಮಂಜುನಾಥ್ ಉದ್ಯಾವರ ಸಂಸ್ಮರಣಾ ಕಾರ್ಯಕ್ರಮ | ಆಗಸ್ಟ್ 29
    roovari

    Comments are closed.

    Related Posts

    ಬಾನು ಮುಷ್ತಾಕ್‌ ಕೃತಿಗೆ ಪ್ರತಿಷ್ಠಿತ ಅಂತರರಾಷ್ಚ್ರೀಯ ‘ಬೂಕರ್ ಪ್ರಶಸ್ತಿ’

    May 21, 2025

    ಹರಿಹರಪುರದಲ್ಲಿ ‘ಭಾಗವತರ ಸಂಸ್ಮರಣೆ ಗಾನಾರಾಧನೆ’ | ಮೇ 25

    May 21, 2025

    ಡಾ. ನಳಿನಿ ಮೂರ್ತಿ ದತ್ತಿ ಪ್ರಶಸ್ತಿಗೆ ಕೃತಿಗಳ ಆಹ್ವಾನ | ಕೊನೆಯ ದಿನಾಂಕ ಮೇ 31

    May 21, 2025

    ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಹಿರಿಯ ಚೇತನ ಪ್ರೊ. ಹೇರಂಜೆ ಕೃಷ್ಣ ಭಟ್ಟರ ನುಡಿ ನಮನ

    May 21, 2025

    Comments are closed.

    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.