ಕಾಂತಾವರ : ಕಳೆದ ನಲುವತ್ತೇಳು ವರುಷಗಳಿಂದ ಮುದ್ದಣ ಕಾವ್ಯ ಪ್ರಶಸ್ತಿಯನ್ನು ನೀಡುತ್ತಾ ಬಂದಿರುವ ಕಾಂತಾವರ ಕನ್ನಡ ಸಂಘವು 2025ರ ಸಾಲಿನ ‘ಮುದ್ದಣ ಕಾವ್ಯ ಪ್ರಶಸ್ತಿ’ಗೆ ಮುದ್ರಣಕ್ಕೆ ಸಿದ್ಧವಾಗಿರುವ ಕವನ ಸಂಗ್ರಹದ ಹಸ್ತಪ್ರತಿಗಳನ್ನು ಆಹ್ವಾನಿಸುತ್ತಿದೆ. ಪ್ರಶಸ್ತಿಯು ರೂಪಾಯಿ 10,000 ನಗದು, ಪ್ರಶಸ್ತಿ ಪತ್ರ ಮತ್ತು ಸನ್ಮಾನವನ್ನು ಒಳಗೊಂಡಿದೆ.
ಆಸಕ್ತರು ಹೆಚ್ಚಿನ ಮಾಹಿತಿಯನ್ನು ಕನ್ನಡ ಸಂಘ [email protected] ಎನ್ನುವ ಮೈಲ್ ಐಡಿ ಮೂಲಕ ಪಡೆದುಕೊಳ್ಳಬಹುದು. ಇಲ್ಲವೇ ಅಧ್ಯಕ್ಷರನ್ನು (9900701666) ಅಥವಾ ಪ್ರಧಾನ ಕಾರ್ಯದರ್ಶಿ ಅವರನ್ನು (9008978366) ಮೇಲಿನ ದೂರವಾಣಿಯಲ್ಲಿ ಸಂಪರ್ಕಿಸಬಹುದು. ಹಸ್ತಪ್ರತಿಗಳ ಸ್ವೀಕಾರಕ್ಕೆ ಕೊನೆಯ ದಿನಾಂಕ 15 ಸಪ್ಟಂಬರ್ 2025 ಆಗಿದ್ದು, ಪ್ರಶಸ್ತಿಯನ್ನು 01 ನವೆಂಬರ್ 2025ರಂದು ಘೋಷಣೆ ಮಾಡಲಾಗುವುದು ಎಂದು ಕನ್ನಡ ಸಂಘ ತಿಳಿಸಿದೆ.