ಮಡಿಕೇರಿ : ಐತಿಹಾಸಿಕ ಮಡಿಕೇರಿ ದಸರಾ ಜನೋತ್ಸವದ ಭಾಗವಾಗಿರುವ ‘ಬಹುಭಾಷಾ ಕವಿಗೋಷ್ಠಿ’ಯನ್ನು 2024ನೇ ಸಾಲಿನಲ್ಲಿ ಅಕ್ಟೋಬರ್ 9ರ ಬುಧವಾರದಂದು ಮಡಿಕೇರಿಯ ಗಾಂಧಿ ಮೈದಾನದ ಕಲಾ ಸಂಭ್ರಮ ವೇದಿಕೆಯಲ್ಲಿ ಆಯೋಜಿಸಲಾಗಿದೆ. ಇದರಲ್ಲಿ ಕವನಗಳನ್ನು ವಾಚನ ಮಾಡಲು ಅಸಕ್ತರಾಗಿರುವ ಕವಿ/ಕವಿಯಿತ್ರಿಯರಿಂದ ಸ್ವರಚಿತ ಕವನಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಕವಿ/ ಕವಿಯಿತ್ರಿಯರು ಯಾವುದೇ ಒಂದು ಭಾಷೆಯ ಒಂದು ಕವನವನ್ನು ಸೆಪ್ಟೆಂಬರ್ 23ರ ಒಳಗಾಗಿ ಕಳಹಿಸಿಕೊಡಬೇಕು. ಆ ನಂತರ ಬರುವ ಕವನಗಳನ್ನು ಪರಿಗಣಿಸಲಾಗುವುದಿಲ್ಲ. ಈ ಬಾರಿಯ ಕವಿಗೋಷ್ಠಿಯಲ್ಲಿ ವರ್ಷಂಪ್ರತಿಯಂತೆ ಕನ್ನಡ, ಕೊಡವ, ಅರೆಭಾಷೆ, ತುಳು, ಕೊಂಕಣಿ, ಹವ್ಯಕ, ಬ್ಯಾರಿ, ಯರವ, ಕುಂಬಾರ, ಹಿಂದಿ, ಉರ್ದು, ತಮಿಳು, ಮಲೆಯಾಳಂ, ತೆಲುಗು, ಮರಾರಿ, ಸಂಸ್ಕೃತ ಹೀಗೆ ಯಾವುದೇ ಭಾಷೆಯ ಕವನಗಳನ್ನು ‘ಕನ್ನಡ’ ಲಿಪಿಯಲ್ಲಿ ಹಾಗೂ ಹಿಂದಿ, ಇಂಗ್ಲೀಷ್ ಕವನವನ್ನು ಅದೇ ಭಾಷೆಯಲ್ಲಿ ಕಳುಹಿಸಿಕೊಡತಕ್ಕದ್ದು. ಕನ್ನಡ ಭಾಷೆಯ ಚುಟುಕು ಕವನ (4 ಸಾಲಿನ ಗರಿಷ್ಠ 4 ಕವನಗಳಿಗೆ ಮಾತ್ರ ಅವಕಾಶ)ಗಳು, ಮಕ್ಕಳ ಕವನ (6ರಿಂದ 12 ವರ್ಷ ಒಳಪಟ್ಟವರು)ಗಳಿಗೂ ಅವಕಾಶ ಕಲ್ಪಿಸಲಾಗಿದೆ. ಕವನಗಳನ್ನು ಕಳುಹಿಸುವವರು ತಮ್ಮ ಪೂರ್ಣ ವಿಳಾಸ, ಮೊಬೈಲ್ ಸಂಖ್ಯೆ, ಭಾವಚಿತ್ರವನ್ನು ತಪ್ಪದೆ ಕಳುಹಿಸಿಕೊಡಬೇಕು. ಮಾಹಿತಿಗಳಿಲ್ಲದ ಕವನಗಳನ್ನು ಆಯ್ಕೆಗೆ ಪರಿಗಣಿಸಲಾಗುವುದಿಲ್ಲ. ಕವನಗಳನ್ನು ಮತ್ತು ಮಾಹಿತಿಯನ್ನು ವ್ಯಾಟ್ಸಾಪ್ -8867689193, ಇ-ಮೇಲ್ [email protected] ಮೂಲಕ ಕಳುಹಿಸಬಹುದು. ವಾಟ್ಸಾಪ್ ಅಥವಾ ಇ-ಮೇಲ್ ಇವೆರಡರಲ್ಲಿ ಯಾವುದಾದರು ಒಂದರ ಮೂಲಕ ಮಾತ್ರ ಕವನಗಳನ್ನು ಟೈಪ್ ಮಾಡಿ ಕಳುಹಿಸಬೇಕು.
ವಾಟ್ಸಾಪ್ ಅಥವಾ ಇಮೇಲ್ ನಲ್ಲಿ ಕವನದ ಛಾಯ ಪ್ರತಿಯನ್ನು ಕಳುಹಿಸಿದರೆ ಅದನ್ನು ಪರಿಗಣಿಸಲಾಗುವುದಿಲ್ಲ. ವಾಟ್ಸಾಪ್ ಅಥವಾ ಇಮೇಲ್ ಸೌಲಭ್ಯ ಇಲ್ಲದಿರುವವರು ಅಂಚೆ ಮೂಲಕ ಈ ವಿಳಾಸಕ್ಕೆ ಅಗತ್ಯ ಮಾಹಿತಿಯೊಂದಿಗೆ ಕಳುಹಿಸಿಕೊಡಬಹುದು. ವಿಳಾಸ-ಅಧ್ಯಕ್ಷರು, ಬಹುಭಾಷಾ ಕವಿಗೋಷ್ಠಿ ಸಮಿತಿ, ಕೇರಾಫ್ ‘ಶಕ್ತಿ’ ದಿನಪತ್ರಿಕೆ, ಕೈಗಾರಿಕಾ ಬಡಾವಣೆ, ಮಡಿಕೇರಿ-571201 (ಕವನಗಳನ್ನು ಅಂಚೆ ಮೂಲಕ ಕಳುಹಿಸುವವರು ಲಕೋಟೆಯ ಮೇಲೆ ದೊಡ್ಡದಾಗಿ ‘ಬಹುಭಾಷಾ ಕವಿಗೋಷ್ಠಿ ಕವನ’ ಎಂದು ನಮೂದಿಸಬೇಕು). ಕವನಗಳ ನಿಬಂಧನೆಗಳು- ಯಾವುದೇ ಭಾಷೆಯಲ್ಲಿ ಸ್ವರಚಿತ, ಸಾಮಾಜಿಕ ಜಾಲ ತಾಣ ಸೇರಿದಂತೆ ಎಲ್ಲಿಯೂ ಪ್ರಕಟವಾಗದ ಕವನಗಳನ್ನು ಮಾತ್ರ ಕಳುಹಿಸಬೇಕು. ಕವನಗಳು ಗರಿಷ್ಠ 20 ಸಾಲುಗಳನ್ನು ಮೀರಬಾರದು. ಯಾವುದೇ ಭಾಷೆಯ ಒಂದು ಕವನವನ್ನು ಮಾತ್ರ ಆಯ್ಕೆಗೆ ಕಳುಹಿಸಬೇಕು. ಎರಡೆರಡು ಭಾಷೆಗಳಲ್ಲಿ ಒಬ್ಬರೇ ಕವನಗಳನ್ನು ಕಳುಹಿಸಿದಲ್ಲಿ ಅವರ ಎಲ್ಲಾ ಕವನಗಳನ್ನು ತಿರಸ್ಕರಿಸಲಾಗುತ್ತದೆ. ಹೆಚ್ಚಿನ ಮಾಹಿತಿಗೆ ಸಮಿತಿಯ ಪ್ರಧಾನ ಕಾರ್ಯದರ್ಶಿ ಪಿ.ಎಂ. ರವಿ -9972073295, ಸದಸ್ಯರಾದ ಅಬ್ದುಲ್ ಕೌಸರ್ 7019124270, ಎಸ್.ಜಿ. ಉಮೇಶ್ -9980627920 ಇವರುಗಳನ್ನು ಸಂಪರ್ಕಿಸಬಹುದು. ಆಯ್ಕೆಯಾದ ಕವನಗಳ ವಾಚನಕ್ಕೆ ಬಹುಭಾಷಾ ಕವಿಗೋಷ್ಠಿಯಂದು ಅವಕಾಶ ಒದಗಿಸಲಾಗುತ್ತದೆ. ಗೋಷ್ಠಿಯಲ್ಲಿ ಕವಿಗಳು ಕಡ್ಡಾಯವಾಗಿ ಅಯ್ಕೆಯಾದ ಕವನವನ್ನಷ್ಟೆ ವಾಚಿಸಬೇಕು. ಕವನಗಳನ್ನು ಹಾಡುವಂತಿಲ್ಲ ಮತ್ತು ಯಾವುದೇ ಪೀರಿಕೆಗಳಿಗೆ ಅವಕಾಶವಿಲ್ಲ. ಆಯ್ಕೆ ಸಮಿತಿಯ ತೀರ್ಮಾನವೇ ಅಂತಿಮವಾಗಿರುತ್ತದೆ ಎಂದು ಬಹುಭಾಷಾ ಕವಿಗೋಷ್ಠಿ ಸಮಿತಿಯ ಅಧ್ಯಕ್ಷರಾದ ಉಜ್ವಲ್ ರಂಜಿತ್ ತಿಳಿಸಿದ್ದಾರೆ.