ಉಡುಪಿ : ಶ್ರೀ ಜನಾರ್ದನ ಮತ್ತು ಮಹಾಕಾಳಿ ದೇವಸ್ಥಾನ ಅಂಬಲಪಾಡಿ ಆಶ್ರಯದಲ್ಲಿ ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ.) ಉಡುಪಿ ಮತ್ತು ವಿಶ್ವಭಾರತಿ ಕರ್ನಾಟಕ ಪ್ರತಿಷ್ಠಾನ ಬೆನಗಲ್, ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕ ಇವರ ಸಹಯೋಗದೊಂದಿಗೆ ಕವಿ ಕುರಾಡಿ ಸೀತಾರಾಮ ಅಡಿಗ ‘ಕಾವ್ಯ ಪ್ರಶಸ್ತಿ -2026’ ಪ್ರದಾನ ಮತ್ತು ‘ಡುಂಡಿ 70’ ಅಭಿನಂದನಾ ಸಮಾರಂಭ ಮತ್ತು ಪುಸ್ತಕ ಲೋಕಾರ್ಪಣೆಯನ್ನು ದಿನಾಂಕ 06 ಸೆಪ್ಟೆಂಬರ್ 2026ರಂದು ಸಂಜೆ 4-00 ಗಂಟೆಗೆ ಉಡುಪಿಯ ಅಂಬಲಪಾಡಿ ಭವಾನಿ ಮಂಟಪದಲ್ಲಿ ಆಯೋಜಿಸಲಾಗಿದೆ.
ಸಂಜೆ 4-00 ಗಂಟೆಗೆ ಡಾ. ಬೇಲೂರು ರಘುನಂದನ್ ಇವರ ರಚನೆ, ವಿನ್ಯಾಸ ಮತ್ತು ನಿರ್ದೇಶನದಲ್ಲಿ ಡಾ. ಮೀರಾ ಹೆಚ್.ಎನ್. ಅಭಿನಯಿಸುವ ‘ಪಂಚವರ್ಣೆ’ ಏಕವ್ಯಕ್ತಿ ರಂಗ ಪ್ರಯೋಗ. ಗಂಟೆ 5-15ಕ್ಕೆ ಪ್ರಸಿದ್ಧ ಸಾಹಿತಿಗಳಾದ ಎಚ್. ಡುಂಡಿರಾಜ್ ಇವರು ಡಾ. ಲಕ್ಷ್ಮಣ ವಿ.ಎ. ಇವರಿಗೆ ಕವಿ ಕುರಾಡಿ ಸೀತಾರಾಮ ಅಡಿಗ ‘ಕಾವ್ಯ ಪ್ರಶಸ್ತಿ -2026’ ಪ್ರದಾನ ಮಾಡಲಿದ್ದಾರೆ. 6-00 ಗಂಟೆಗೆ ‘ಡುಂಡಿ 70’ ಅಭಿನಂದನಾ ಸಮಾರಂಭ ಮತ್ತು ಪುಸ್ತಕ ಬಿಡುಗಡೆ ನಡೆಯಲಿದ್ದು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಶ್ರೀಮತಿ ಪೂರ್ಣಿಮಾ ಇವರು ಪುಸ್ತಕ ಬಿಡುಗಡೆ ಮಾಡಲಿದ್ದು, ಸಾಹಿತಿ ಡಾ. ಕಾತ್ಯಾಯಿನಿ ಕುಂಜಿಬೆಟ್ಟು ಇವರು ಕೃತಿ ಪರಿಚಯ ಮಾಡಲಿದ್ದಾರೆ.

