ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮಂಗಳೂರು ತಾಲೂಕು ಘಟಕ ಮತ್ತು ಮಂಗಳೂರು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾನೂನು ಮಹಾವಿದ್ಯಾಲಯ ಇದರ ಜಂಟಿ ಆಶ್ರಯದಲ್ಲಿ ಜಯಲಕ್ಷ್ಮೀ ಎಸ್. ಜೋಕಟ್ಟೆಯವರ ‘ಕವಿತೆಗಳು’ ಕವನ ಸಂಕಲನ ಬಿಡುಗಡೆ ಕಾರ್ಯಕ್ರಮವನ್ನು ದಿನಾಂಕ 03 ಜನವರಿ 2026ರಂದು ಸಂಜೆ 4-00 ಗಂಟೆಗೆ ಮಂಗಳೂರಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾನೂನು ಮಹಾವಿದ್ಯಾಲಯದಲ್ಲಿ ಹಮ್ಮಿಕೊಳ್ಳಲಾಗಿದೆ.
ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ನಿಕಟ ಪೂರ್ವ ಅಧ್ಯಕ್ಷರಾದ ಪ್ರದೀಪ್ ಕುಮಾರ ಕಲ್ಕೂರ ಇವರು ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾದ ಡಾ. ಎಂ.ಪಿ. ಶ್ರೀನಾಥ ಇವರು ಕೃತಿ ಬಿಡುಗಡೆ ಮಾಡಲಿದ್ದಾರೆ. ಹಿರಿಯ ಸಾಹಿತಿ ಡಾ. ಮೀನಾಕ್ಷಿ ರಾಮಚಂದ್ರ ಇವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದು, ಹಿರಿಯ ಪತ್ರಕರ್ತರಾದ ಶ್ರೀನಿವಾಸ ಜೋಕಟ್ಟೆ ಇವರು ಸಂಪಾದಕರ ಮಾತುಗಳನ್ನಾಡಲಿದ್ದಾರೆ.

