ಬೆಳಗಾವಿ : ಕನ್ನಡ ಮಾತು ಸಂಸ್ಕೃತಿ ಇಲಾಖೆ, ಕರ್ನಾಟಕ ಸಾಹಿತ್ಯ ಅಕಾಡೆಮಿ ಬೆಂಗಳೂರು ಮತ್ತು ಕನ್ನಡ ಭವನ ಬೆಳಗಾವಿ ಇವರ ವತಿಯಿಂದ ‘ಯುವ ಕವಿಗೋಷ್ಠಿ’ಯನ್ನು ದಿನಾಂಕ 21 ಜುಲೈ 2025 ರಂದು ಬೆಳಗ್ಗೆ 10-30 ಗಂಟೆಗೆ ಬೆಳಗಾವಿಯ ಕನ್ನಡ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮದ ಉದ್ಘಾಟನೆಯನ್ನು ಕರ್ನಾಟಕ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಎಲ್.ಎನ್. ಮುಕುಂದರಾಜ್ ಇವರು ನೆರವೇರಿಸಲಿದ್ದು, ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೆಳಗಾವಿ ಕನ್ನಡ ಭವನದ ನಿರ್ದೇಶಕರಾದ ಡಾ. ಬಸವರಾಜ ಜಗಜಂಪಿ ಇವರು ವಹಿಸಲಿದ್ದಾರೆ. ಕರ್ನಾಟಕ ಸಾಹಿತ್ಯ ಅಕಾಡೆಮಿಯ ಸದಸ್ಯ ಸಂಚಾಲಕರಾದ ಡಾ. ಮೈತ್ರೇಯಿಣಿ ಗದಿಗೆಪ್ಪಗೌಡರ ಇವರು ಆಶಯ ನುಡಿಗಳನ್ನಾಡುವರು.
ಯುವ ಕವಿಗೋಷ್ಠಿಯ ಅಧ್ಯಕ್ಷತೆಯನ್ನು ಯುವಕವಿ ದೇವರಾಜ ಹುಣಸಿಕಟ್ಟಿ ಇವರು ವಹಿಸಲಿದ್ದು, ಒಟ್ಟು 23 ಯುವಕವಿಗಳು ಆಯ್ಕೆಯಾಗಿರುತ್ತಾರೆ. ಯುವ ಕವಿಗೋಷ್ಠಿಯ ನಿರ್ವಹಣೆಯನ್ನು ಕರ್ನಾಟಕ ಸಾಹಿತ್ಯ ಅಕಾಡೆಮಿಯ ಸದಸ್ಯರಾದ ಶ್ರೀ ಮಹಾದೇವ ಬಸರಕೋಡ ಇವರು ಮಾಡಲಿದ್ದಾರೆ. ಇದೇ ಕಾರ್ಯಕ್ರಮದಲ್ಲಿ ಮಧ್ಯಾಹ್ನ 2-00 ಗಂಟೆಗೆ ಡಾ. ಹೇಮಾ ಪಟ್ಟಣಶೆಟ್ಟಿ ಇವರು “ಕಾವ್ಯ – ಅನುಸಂಧಾನ” ಎನ್ನುವ ವಿಷಯದ ಬಗ್ಗೆ ವಿಶೇಷ ಉಪನ್ಯಾಸವನ್ನು ನೀಡಲಿದ್ದು, ಸಾಹಿತ್ಯ ಅಕಾಡೆಮಿಯ ಕಾರ್ಯದರ್ಶಿಗಳಾದ ಕರಿಯಪ್ಪ ಎನ್., ಕರ್ನಾಟಕ ಸಾಹಿತ್ಯ ಅಕಾಡೆಮಿಯ ಸದಸ್ಯರುಗಳಾದ ಡಾ. ಮಲ್ಲಿಕಾರ್ಜುನ ಮಾನ್ಪಡೆ ಮತ್ತು ಬೆಳಗಾವಿ ಕನ್ನಡ ಭವನದ ಕಾರ್ಯದರ್ಶಿಗಳಾದ ಶ್ರೀ ಯ.ರು. ಪಾಟೀಲ ಉಪಸ್ಥಿತರಿರಲಿದ್ದಾರೆ.