ಉಡುಪಿ : ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರ (ಮಾಹೆ) ಉಡುಪಿ, ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ಮತ್ತು ಚೇಳ್ಯಾರು ಗುತ್ತು ಎಸ್.ಆರ್. ಹೆಗ್ಡೆ ಚಾರಿಟೇಬಲ್ ಟ್ರಸ್ಟ್ (ರಿ.) ಇವರ ಸಹಯೋಗದಲ್ಲಿ ಪೊಳಲಿ ಶೀನಪ್ಪ ಹೆಗ್ಗಡೆ ಮತ್ತು ಎಸ್.ಆರ್. ಹೆಗ್ಡೆ ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ದಿನಾಂಕ 20 ಜೂನ್ 2026ರ ಶನಿವಾರದಂದು ಬೆಳಿಗ್ಗೆ 10-00 ಗಂಟೆಗೆ ಉಡುಪಿ ಎಂ.ಜಿ.ಎಂ. ಕಾಲೇಜಿನ ಆವರಣದಲ್ಲಿರುವ ನೂತನ ರವೀಂದ್ರ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿದೆ.
ಪ್ರಶಸ್ತಿಯನ್ನು ಹಿರಿಯ ಲೇಖಕ, ಸಂಶೋಧಕರಾದ ಡಾ. ಬಿ. ಶಿವರಾಮ ಶೆಟ್ಟಿ ಇವರಿಗೆ ಪ್ರದಾನ ಮಾಡಲಾಗುವುದು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರದ ಸಲಹಾ ಸಮಿತಿ ಅಧ್ಯಕ್ಷರಾದ ಪ್ರೊ. ಬಿ.ಎ. ವಿವೇಕ ರೈ ಇವರು ವಹಿಸಲಿದ್ದು, ಕಾಸರಗೋಡು ಕೇಂದ್ರೀಯ ವಿಶ್ವವಿದ್ಯಾನಿಲಯದ ಕನ್ನಡ ಪ್ರಾಧ್ಯಾಪಕರಾದ ಪ್ರೊ. ಚೇತನ್ ಮುಂಡಾಜೆ ಇವರು ಪ್ರಶಸ್ತಿ ಪುರಸ್ಕೃತರನ್ನು ಕುರಿತು ಅಭಿನಂದನಾ ಮಾತುಗಳನ್ನಾಡಲಿರುವರು. ಪ್ರಶಸ್ತಿ ಪುರಸ್ಕೃತರಾದ ಡಾ. ಬಿ. ಶಿವರಾಮ ಶೆಟ್ಟಿಯವರು ವಿಶೇಷ ಉಪನ್ಯಾಸ ನೀಡಲಿರುವರು. ಮುಖ್ಯ ಅತಿಥಿಗಳಾಗಿ ಎಂ.ಜಿ.ಎಂ. ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಗಾಯತ್ರಿ ಪೈ ಹಾಗೂ ಚೇಳ್ಯಾರು ಗುತ್ತು ಎಸ್.ಆರ್. ಹೆಗ್ಡೆ ಚಾರಿಟೇಬಲ್ ಟ್ರಸ್ಟ್ ಇದರ ಅಧ್ಯಕ್ಷರಾದ ಡಾ. ಇಂದಿರಾ ಹೆಗ್ಡೆ ಉಪಸ್ಥಿತರಿರುವರು.

