ಧಾರವಾಡ : ಚಿತ್ರಕಲಾ ಶಿಲ್ಪಿ ಶ್ರೀ ಡಿ. ವ್ಹಿ. ಹಾಲಭಾವಿ ರಾಷ್ಟ್ರೀಯ ಸ್ಮಾರಕ (ರಿ.) ಟ್ರಸ್ಟ್ ಧಾರವಾಡ ಇವರ ವತಿಯಿಂದ ಶ್ರೀ ಡಿ. ವ್ಹಿ. ಹಾಲಭಾವಿ ಪುಣ್ಯ ಸ್ಮರಣೆ ಪ್ರಯುಕ್ತ ರಾಜ್ಯ ಮಟ್ಟದ ಚಿತ್ರಕಲಾ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ 2025 ಕಾರ್ಯಕ್ರಮವನ್ನು ದಿನಾಂಕ 26 ಡಿಸೆಂಬರ್ 2025ರಂದು ಬೆಳಗ್ಗೆ 11-30 ಗಂಟೆಗೆ ಧಾರವಾಡ ಸರ್ಕಾರಿ ಆರ್ಟ್ ಗ್ಯಾಲರಿಯಲ್ಲಿ ಹಮ್ಮಿಕೊಳ್ಳಲಾಗಿದೆ.
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಚಿತ್ರಕಲಾ ಶಿಲ್ಪಿ ಶ್ರೀ ಡಿ. ವ್ಹಿ. ಹಾಲಭಾವಿ ರಾಷ್ಟ್ರೀಯ ಸ್ಮಾರಕ (ರಿ.) ಟ್ರಸ್ಟ್ ಇದರ ಅಧ್ಯಕ್ಷರಾದ ಬಿ. ಮಾರುತಿ ಇವರು ವಹಿಸಲಿದ್ದು, ಚಿತ್ರಕಲಾ ಶಿಲ್ಪಿ ಶ್ರೀ ಡಿ. ವ್ಹಿ. ಹಾಲಭಾವಿ ರಾಷ್ಟ್ರೀಯ ಸ್ಮಾರಕ (ರಿ.) ಟ್ರಸ್ಟ್ ಸದಸ್ಯರಾದ ಸುರೇಶ ಹಾಲಭಾವಿ ಇವರು ಪ್ರಾಸ್ತಾವಿಕ ನುಡಿಗಳನ್ನಾಡಲಿದ್ದಾರೆ. ಚಿತ್ರಕಲಾ ಸ್ನಾತಕ ಪದವಿಯ ವಿದ್ಯಾರ್ಥಿಗಳಿಗೆ 2025ನೇ ಸಾಲಿನ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಗುವುದು. ಇವರ ಕಲಾಕೃತಿಗಳ ಪ್ರದರ್ಶನ ಬೆಳಗ್ಗೆ 11-00 ಗಂಟೆಯಿಂದ ಸಂಜೆ 4-00 ಗಂಟೆಯವರೆಗೆ ಏರ್ಪಡಿಸಲಾಗಿದೆ.


