Subscribe to Updates

    Get the latest creative news from FooBar about art, design and business.

    What's Hot

    ಮಂಗಳೂರಿನಲ್ಲಿ ‘ಪ್ರೇರಣಾ 5’ ಸಂಗೀತ ಕಛೇರಿ ಮತ್ತು ಭರತನಾಟ್ಯ ಪ್ರದರ್ಶನ | ಫೆಬ್ರವರಿ 28

    February 27, 2026

    ಐವರು ಸಾಹಿತಿಗಳಿಗೆ ಬ್ಯಾರಿವಾರ್ತೆ ಗೌರವ ಪ್ರಶಸ್ತಿ

    February 27, 2026

    ತಮಿಳುನಾಡಿನ ಪ್ರಸಿದ್ಧ ದೇವಾಲಯಗಳಲ್ಲಿ ‘ನಾಟ್ಯಾಂಜಲಿ ಉತ್ಸವ’

    February 27, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ಯಕ್ಷಧ್ರುವ ಪಟ್ಲ ಫೌಂಡೇಶನ್‌ ಟ್ರಸ್ಟಿನ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿಯವರಿಗೆ ಪ್ರೆಸ್‌ಕ್ಲಬ್ ಗೌರವ
    Awards

    ಯಕ್ಷಧ್ರುವ ಪಟ್ಲ ಫೌಂಡೇಶನ್‌ ಟ್ರಸ್ಟಿನ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿಯವರಿಗೆ ಪ್ರೆಸ್‌ಕ್ಲಬ್ ಗೌರವ

    May 3, 2024No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಮಂಗಳೂರು ಪ್ರೆಸ್‌ಕ್ಲಬ್ ವತಿಯಿಂದ ಹಮ್ಮಿಕೊಳ್ಳಲಾದ ‘ಮಂಗಳೂರು ಪ್ರೆಸ್‌ಕ್ಲಬ್ ಗೌರವ ಅತಿಥಿ’ ಕಾರ್ಯಕ್ರಮವು ಪತ್ರಿಕಾ ಭವನದಲ್ಲಿ ದಿನಾಂಕ 30-04-2024ರಂದು ನಡೆಯಿತು. ಈ ಕಾರ್ಯಕ್ರಮದಲ್ಲಿ ಗೌರವ ಸ್ವೀಕರಿಸಿದ ಯಕ್ಷಧ್ರುವ ಪಟ್ಲ ಫೌಂಡೇಶನ್‌ ಟ್ರಸ್ಟಿನ ಸ್ಥಾಪಕಾಧ್ಯಕ್ಷ, ಪ್ರಸಿದ್ಧ ಭಾಗವತ ಪಟ್ಲ ಸತೀಶ್ ಶೆಟ್ಟಿ ಮಾತನಾಡಿ “ಸಾಂಸ್ಕೃತಿಕ ಲೋಕಕ್ಕೆ ಅದ್ವಿತೀಯ ಕೊಡುಗೆ ನೀಡಿರುವ ಕರಾವಳಿಯ ಹೆಮ್ಮೆಯ ಯಕ್ಷಗಾನ ಕಲೆಯನ್ನು ಉಳಿಸಿ, ಬೆಳೆಸುವ ಮಹತ್ವದ ಜವಾಬ್ದಾರಿ ನಮ್ಮ ಮೇಲಿದೆ. ಈ ನಿಟ್ಟಿನಲ್ಲಿ ಸರ್ಕಾರಿ ಶಾಲೆಯ ಮಕ್ಕಳಿಗೆ ಯಕ್ಷ ಶಿಕ್ಷಣ ನೀಡಲು ಯಕ್ಷಧ್ರುವ ಪಟ್ಲ ಫೌಂಡೇಶನ್‌ ಟ್ರಸ್ಟ್ ಮುಂದಾಗಿದೆ. ಈಗಾಗಲೇ 4 ಸಾವಿರಕ್ಕೂ ಅಧಿಕ ಮಕ್ಕಳಿಗೆ ತರಬೇತಿ ನೀಡಲಾಗಿದೆ. ಮುಂದಿನ ದಿನಗಳಲ್ಲಿ ಅವರಿಗೆ ವೇದಿಕೆ ಒದಗಿಸುವ ಪ್ರಯತ್ನವೂ ನಡೆಯಲಿದೆ. ಈಗಾಗಲೇ ಆಳ್ವಾಸ್ ಶಿಕ್ಷಣ ಫೌಂಡೇಶನ್ ಸಹಯೋಗದಲ್ಲಿ ಯಕ್ಷಧ್ರುವ ವಿದ್ಯಾರ್ಥಿ ಸಮ್ಮಿಲನ ಯಶಸ್ವಿಯಾಗಿದೆ. ಸರ್ಕಾರಿ ಶಾಲೆಯ ಮಕ್ಕಳಿಗೆ ಹೆಚ್ಚಿನ ಸೌಲಭ್ಯಗಳು ಇರುವುದಿಲ್ಲ. ಅವರಿಗೆ ಬಾಲ್ಯದಲ್ಲೇ ಯಕ್ಷಗಾನದ ಬಗ್ಗೆ ಜ್ಞಾನ ಹಾಗೂ ಅಭಿರುಚಿ ಮೂಡಿಸುವುದು ಟ್ರಸ್ಟಿನ ಉದ್ದೇಶವಾಗಿದೆ. ಹಿರಿಯ ಕಲಾವಿದರ ಪೈಕಿ ಕೆಲವರು ಶಾಲಾ ಶಿಕ್ಷಣ ಪಡೆಯದಿದ್ದರೂ ರಂಗದಲ್ಲಿ ಅದ್ಭುತ ಭಾಷಾ ಪಾಂಡಿತ್ಯ, ವಾಕ್ ಚಾತುರ್ಯದ ಮೂಲಕ ಪ್ರಸಿದ್ಧಿ ಸಂಪಾದಿಸಿದ್ದಾರೆ. ಅದುವೇ ಯಕ್ಷಗಾನದ ಕಲೆಗೆ ಇರುವ ಶಕ್ತಿ. ದಶಕಗಳ ಹಿಂದೆ ಯಕ್ಷಗಾನ ಕಲಾವಿದರು ಕನಿಷ್ಠ ಸಂಬಳ ಪಡೆದು ಮೇಳದಲ್ಲಿ ಕೆಲಸ ಮಾಡುತ್ತಿದ್ದರು. ಆದರೂ ತಮ್ಮ ಕುಟುಂಬದ ನಿರ್ವಹಣೆಯ ಜತೆ ಕಲೆಯನ್ನು ಬೆಳೆಸಿಕೊಂಡು ಬಂದಿದ್ದಾರೆ. ಕಲಾವಿದರು ಯಾವುದೇ ತೊಂದರೆಗೊಳಗಾದರೆ ಬದುಕು ಸಾಗಿಸುವುದೇ ಕಷ್ಟಕರವಾಗಿತ್ತು ಇಂತಹ ಸ್ಥಿತಿಯನ್ನು ಕಂಡು ಕಲಾವಿದರಿಗೆ ಯಾವುದಾದರೂ ರೀತಿಯಲ್ಲಿ ಸಹಾಯ ಮಾಡಬೇಕೆನ್ನುವ ಆಶಯ ಉಂಟಾಯಿತು. ದೇವರ ದಯೆಯಿಂದ ನನ್ನನ್ನು ಪ್ರೀತಿಸುವ ಯಕ್ಷಗಾನ ಕಲೆಯನ್ನು ಗೌರವಿಸುವ ದೊಡ್ಡ ಜನ ಸಮೂಹದ ಬೆಂಬಲ ನನಗೆ ದೊರೆಯಿತು. ಇದರಿಂದ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಸ್ಥಾಪನೆ ಮಾಡಲಾಯಿತು” ಎಂದು ಹೇಳಿದರು.

    ಹಿರಿಯ ಪತಕರ್ತ ಯು.ಕೆ. ಕುಮಾರನಾಥ್ ಕಾರ್ಯಕ್ರಮ ಉದ್ಘಾಟಿಸಿದರು. ಮಂಗಳೂರು ಪ್ರೆಸ್‌ಕ್ಲಬ್ ಅಧ್ಯಕ್ಷ ಪಿ.ಬಿ. ಹರೀಶ್ ರೈ ಅಧ್ಯಕ್ಷತೆ ವಹಿಸಿದ್ದರು. ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಪತ್ರಿಕಾ ಭವನ ಟ್ರಸ್ಟಿನ ಅಧ್ಯಕ್ಷ ರಾಮಕೃಷ್ಣ ಆರ್. ಕಾರ್ಯಕ್ರಮ ಸಂಯೋಜಕ ದಯಾ ಕುಕ್ಕಾಜೆ, ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಜಗನ್ನಾಥ ಶೆಟ್ಟಿ ಬಾಳ ಉಪಸ್ಥಿತರಿದ್ದರು. ಪ್ರೆಸ್‌ಕ್ಲಬ್‌ನ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಡಸ್ಥಳ ವಂದಿಸಿ, ಜಿತೇಂದ್ರ ಕುಂದೇಶ್ವರ ಕಾರ್ಯಕ್ರಮ ನಿರೂಪಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Articleನಾಡೋಜ ಚೆನ್ನವೀರ ಕಣವಿ ಕಾವ್ಯ ಸ್ಪರ್ಧೆ ಮತ್ತು ಶ್ರೀಮತಿ ಶಾಂತಾದೇವಿ ಕಣವಿ ಕಥಾ ಸ್ಪರ್ಧೆ-2024
    Next Article ಶಿರ್ವದ ಸಂತ ಮೇರಿ ಕಾಲೇಜಿನಲ್ಲಿ ‘ವಿಶ್ವ ಪುಸ್ತಕ’ ದಿನಾಚರಣೆ
    roovari

    Add Comment Cancel Reply


    Related Posts

    ಐವರು ಸಾಹಿತಿಗಳಿಗೆ ಬ್ಯಾರಿವಾರ್ತೆ ಗೌರವ ಪ್ರಶಸ್ತಿ

    February 27, 2026

    ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್‌ನ ಪ್ರಥಮ ವಾರ್ಷಿಕೋತ್ಸವ ಸಮಾರಂಭ

    February 26, 2026

    ಮಂಗಳೂರು ವಿ.ವಿ.ಯ ‘ಯಕ್ಷಮಂಗಳ ಪ್ರಶಸ್ತಿ’ ಮತ್ತು ‘ಯಕ್ಷಮಂಗಳ ಕೃತಿ ಪ್ರಶಸ್ತಿ’ ಪ್ರಕಟ

    February 26, 2026

    ಬೆಳ್ತಂಗಡಿಯಲ್ಲಿ ‘ಸುವರ್ಣ ರಂಗ ಸಮ್ಮಾನ್’ ಪ್ರಶಸ್ತಿ ಪ್ರದಾನ ಹಾಗೂ ಸಾಂಸ್ಕೃತಿಕ ವೈಭವ

    February 24, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.