Subscribe to Updates

    Get the latest creative news from FooBar about art, design and business.

    What's Hot

    ಉಡುಪಿಯ ಕೊಡವೂರು ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ ‘ಕಲಾಯತನ’ ಸಾಹಿತ್ಯ ಯಕ್ಷ ಸಂಭ್ರಮ

    May 20, 2025

    ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘದಿಂದ ತಾಳಮದ್ದಳೆ ಕಾರ್ಯಕ್ರಮ

    May 20, 2025

    ಕಟಪಾಡಿ ವೇಣುಗಿರಿಯಲ್ಲಿ ‘ಭಜನಾ ವೈಭವ 2025’ ಸಾಂಪ್ರದಾಯಿಕ ಭಜನಾ ಸ್ಪರ್ಧೆ | ಜೂನ್ 22

    May 20, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಅಂತರಾಷ್ಟ್ರೀಯ ಖ್ಯಾತಿಯ ಜಾದೂಗಾರ ಕುದ್ರೋಳಿ ಗಣೇಶ್ ರಿಗೆ ಮಂಗಳೂರು ಪ್ರೆಸ್ ಕ್ಲಬ್ ಗೌರವ ಸನ್ಮಾನ 
    Awards

    ಅಂತರಾಷ್ಟ್ರೀಯ ಖ್ಯಾತಿಯ ಜಾದೂಗಾರ ಕುದ್ರೋಳಿ ಗಣೇಶ್ ರಿಗೆ ಮಂಗಳೂರು ಪ್ರೆಸ್ ಕ್ಲಬ್ ಗೌರವ ಸನ್ಮಾನ 

    February 24, 2024No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email
    ಮಂಗಳೂರು : ಮಂಗಳೂರು ಪ್ರೆಸ್ ಕ್ಲಬ್ ಗೌರವ ಅತಿಥಿ ಹಾಗೂ ಸನ್ಮಾನ ಕಾರ್ಯಕ್ರಮವು ದಿನಾಂಕ 21-02-2024ರ ಬುಧವಾರದಂದು ಮಂಗಳೂರಿನ ಉರ್ವದಲ್ಲಿರುವ ಪ್ರೆಸ್ ಕ್ಲಬ್ ನಲ್ಲಿ ನಡೆಯಿತು.
    ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಅಂತರಾಷ್ಟ್ರೀಯ ಖ್ಯಾತಿಯ ಜಾದೂಗಾರ ಕುದ್ರೋಳಿ ಗಣೇಶ್  “ಮನರಂಜನೆ ಜತೆಗೆ ವಿಸ್ಮಯ ಮೂಡಿಸುವ ಜಾದೂ ಕೂಡಾ ಸಾಂಸ್ಕೃತಿಕ ಕಲೆಯಾಗಿದೆ. ಕೇಂದ್ರದ ನಾಟಕ ಅಕಾಡೆಮಿ ಪಟ್ಟಿಯಲ್ಲಿ ಜಾದೂವಿಗೆ ಸ್ಥಾನ ನೀಡಿದ್ದು, ರಾಜ್ಯದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಪಟ್ಟಿಯಲ್ಲಿಯೂ ಜಾದೂ ಸೇರ್ಪಡೆಯಾಗಬೇಕು. ಅಧಿಕಾರಿಗಳು ಈ ಬಗ್ಗೆ ಪರಿಶೀಲನೆ ನಡೆಸಿ ಕ್ರಮ ವಹಿಸಬೇಕು. ಸಂಗೀತ, ನೃತ್ಯ, ಯಕ್ಷಗಾನದಂತೆ ಜಾದೂ ಕೂಡಾ ಸಾಂಸ್ಕೃತಿಕ ಕಲೆಯಾಗಿದೆ. ನಶಿಸಿ ಹೋಗುತ್ತಿರುವ ಈ ಕಲೆಯನ್ನು ಸಂರಕ್ಷಿಸುವ ನಿಟ್ಟಿನಲ್ಲಿ ನೀನಾಸಂ, ರಂಗಾಯಣ ಮಾದರಿಯ ತರಬೇತಿ ವ್ಯವಸ್ಥೆ ಕಲ್ಪಿಸಬೇಕಾಗಿದೆ. ಇತರ ಕಲೆಗಳಂತೆ ಜಾದೂವನ್ನು ತರಗತಿಯಲ್ಲಿ ವಿದ್ಯಾರ್ಥಿಗಳಿಗೆ ಒಟ್ಟಾಗಿ ಕಲಿಸಲು ಸಾಧ್ಯವಿಲ್ಲ. ಜಾದೂ ಕಲಿಯುವ ವಿದ್ಯಾರ್ಥಿಯಲ್ಲಿ ಮೆದುಳು ಮತ್ತು ಕೈಚಳಕದ ಜತೆಗೆ ಸಮರ್ಪಣಾ ಮನೋಭಾವ ಅಗತ್ಯ. ಜಾದೂ ಕಲೆ ಸಿದ್ಧಿಸಿಕೊಳ್ಳಬೇಕೆಂದರೆ ಕನಿಷ್ಠ ಆರೇಳು ವರ್ಷಗಳ ಅಭ್ಯಾಸದ ಅಗತ್ಯವಿದೆ. ಈ ನಿಟ್ಟಿನಲ್ಲಿ ತರಬೇತಿ ನೀಡುವ ಹಾಗೂ ಕಾಲೇಜು ತೆರೆಯುವ ಆಶಯವೂ ಇದೆ. ವೃತ್ತಿಪರತೆಗಿಂತಲೂ ಹವ್ಯಾಸಿ ಕಲೆಯಾಗಿ ಉಳಿದಿರುವ ಜಾದೂವನ್ನು ನವರಸ ಪೂರ್ಣ ಭಾವದೊಂದಿಗೆ ರಂಗಭೂಮಿಯ ಕಲೆಯಾಗಿ ಬೆಳೆಸಬೇಕಾಗಿದೆ. 1998ರಿಂದ ತುಳುನಾಡಿನ ದೈವರಾಧಾನೆಯನ್ನು ಬಿಂಬಿಸುವ ಜಾದೂವನ್ನು ಪ್ರಸ್ತುತ ಪಡಿಸಿದ ಪರಿಣಾಮ ನಮ್ಮ ‘ವಿಸ್ಮಯ ತಂಡ’ ಇಂದು ವಿಶ್ವವಿಖ್ಯಾತಿಯಾಗಲು ಸಾಧ್ಯವಾಗಿದೆ. ನಮ್ಮ ಮಣ್ಣಿನ ಜನಪದ ಸ್ಪರ್ಶವನ್ನು ಜಾದೂವಿನ ತಂತ್ರಗಾರಿಕೆಯ ಜತೆ ಬೆಸೆದಾಗ ವೀಕ್ಷಕನ ಭಾವನೆಗಳನ್ನು ತಟ್ಟಲು ಸಾಧ್ಯವಾಗುತ್ತದೆ. ಜಾದೂ ಕೂಡಾ ಸಾಮಾಜಿಕ ಕಳಕಳಿಯೊಂದಿಗೆ ಬೆರೆತಾಗ ಹೃದಯವನ್ನು ತಲುಪಲು ಸಾಧ್ಯವಾಗುತ್ತದೆ.
    8ನೇ ತರಗತಿಯಿಂದಲೇ ಪುಸ್ತಕ ಓದುವ ಹುಚ್ಚು ಸಣ್ಣ ಪುಟ್ಟ ಮ್ಯಾಜಿಕ್‌ಗಳ ಬಗೆಗೆ ಆಸಕ್ತಿ ಬೆಳೆಸಿತು. ಬಳಿಕ ದ್ವಿತೀಯ ಪಿ. ಯು. ಸಿ. ಯಲ್ಲಿದ್ದಾಗ ‘ಮ್ಯಾಜಿಕ್ ಫೋರ್ ದಿ ಬಿಗಿನರ್ಸ್’ ಎಂಬ ಪುಸ್ತಕ ಓದಿನ ಹುಚ್ಚಿನ ಜತೆಗೆ ಜಾದೂವಿನ ಆಸಕ್ತಿಯನ್ನು ಇಮ್ಮಡಿಗೊಳಿಸಿತು. ಬಳಿಕ ವೃತ್ತಿಯಲ್ಲಿ ಬ್ಯಾಂಕರ್‌ ಹಾಗೂ ಹವ್ಯಾಸಿ ಜಾದೂಗಾರರಾಗಿದ್ದ ಪ್ರದೀಪ್ ಸೂರಿ ನನ್ನ ಗುರುವಾದರು. ಅವರು ಜಾದೂ ತಂತ್ರಗಾರಿಕೆಯನ್ನು ನನಗೆ ಹೇಳಿಕೊಟ್ಟಿದ್ದಲ್ಲದೆ, ಹಲವು ಪರಿಕರಗಳನ್ನೂ ನೀಡಿದರು. ಇದರ ಜತೆಗೆ ಪದವಿ ಬಳಿಕ ಮುಂಗಾರು ಪತ್ರಿಕೆಯಲ್ಲಿ ಸುಮಾರು 3 ವರ್ಷಗಳ ಕಾಲ ಉಪಸಂಪಾದಕನಾಗಿದ್ದ ಸಂದರ್ಭ ಓದಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡಿದ್ದರಿಂದ ಜಾದೂವಿನ ನನ್ನ ಆಸಕ್ತಿಯನ್ನು ಮತ್ತಷ್ಟು ಗಟ್ಟಿಗೊಳಿಸಲು ಸಾಧ್ಯವಾಯಿತು.” ಎಂದು ಹೇಳಿದರು.
     ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ನಮ್ಮ ಟಿ. ವಿ. ಯ ವ್ಯವಸ್ಥಾಪಕ ನಿರ್ದೇಶಕ ಶಿವಶರಣ್ ಶೆಟ್ಟಿ, ದ. ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಕಾರ್ಯಕ್ರಮ ಸಂಯೋಜಕ  ಆತ್ಮಭೂಷಣ ಭಟ್ ಉಪಸ್ಥಿತರಿದ್ದರು. ಪ್ರೆಸ್‌ ಕ್ಲಬ್ ಅಧ್ಯಕ್ಷ ಪಿ. ಬಿ. ಹರೀಶ್ ರೈ ಅಧ್ಯಕ್ಷತೆ ವಹಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಆರ್. ಸಿ. ಭಟ್ ಕಾರ್ಯಕ್ರಮ ನಿರೂಪಿಸಿ, ಪ್ರೆಸ್‌ ಕ್ಲಬ್ ಪ್ರಧಾನ ಕಾರ್ಯದರ್ಶಿ ಇಬ್ರಾಹೀಂ ಅಡ್ಡಸ್ಥಳ ವಂದಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Articleಕೊಂಕಣಿ ಲೇಖಕ್ ಸಂಘ್ ನ ಪ್ರಶಸ್ತಿ ಪ್ರದಾನ
    Next Article ಉಡುಪಿಯ ಕಾವಿ ಕಲಾವಿದನಿಗೆ ರಾಷ್ಟ್ರೀಯ ಪುರಸ್ಕಾರ
    roovari

    Add Comment Cancel Reply


    Related Posts

    ‘ಸ್ವಾಭಿಮಾನಿ ಪುಸ್ತಕ ಪ್ರಶಸ್ತಿ’ಗೆ ಎಂಟು ಕೃತಿಗಳ ಆಯ್ಕೆ

    May 19, 2025

    ಯೋಗೀಶ ಶರ್ಮಾ ಬಳ್ಳಪದವು ಇವರಿಗೆ ‘ಸಂಗೀತ ಜ್ಯೋತಿಶ್ರೀ ಪ್ರಶಸ್ತಿ’ಯ ಗೌರವ

    May 19, 2025

    ಡಾ. ಹಂಪನಾ ‘ನಾಲ್ವಡಿ ಶ್ರೀ ಕೃಷ್ಣರಾಜ ಒಡೆಯರ್ ಪ್ರಶಸ್ತಿ’ಗೆ ಆಯ್ಕೆ

    May 17, 2025

    ಡಿ.ಎಸ್. ಕರ್ಕಿ ‘ಕಾವ್ಯ ಪ್ರಶಸ್ತಿ’ಗೆ ಕವನ ಸಂಕಲನ ಆಹ್ವಾನ

    May 17, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.