Subscribe to Updates

    Get the latest creative news from FooBar about art, design and business.

    What's Hot

    ಸಾಗರ ತಾಲೂಕಿನಲ್ಲಿ ಯಕ್ಷಗಾನ ತರಬೇತಿ ಉದ್ಘಾಟನೆ | ಜೂನ್ 09

    June 3, 2025

    ಬೆಂಗಳೂರಿನ ಶ್ರೀ ಸಿ. ಅಶ್ವಥ್ ಕಲಾ ಭವನದಲ್ಲಿ ‘ಕಾವ್ಯ ಕಾಮಧೇನು ಎಚ್.ಎಸ್.ವಿ.’ | ಜೂನ್ 08

    June 3, 2025

    ಸಮಾರೋಪಗೊಂಡ ಯಕ್ಷಪಕ್ಷ – ರಜತ ಸರಯೂ ಕಾರ್ಯಕ್ರಮ

    June 3, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಪ್ರತಿಷ್ಠಿತ ‘ಕನಕ ಗೌರವ ಪ್ರಶಸ್ತಿ’ ಸ್ವೀಕರಿಸಿದ ಡಾ. ತಾಳ್ತಜೆ ವಸಂತ ಕುಮಾರ
    Awards

    ಪ್ರತಿಷ್ಠಿತ ‘ಕನಕ ಗೌರವ ಪ್ರಶಸ್ತಿ’ ಸ್ವೀಕರಿಸಿದ ಡಾ. ತಾಳ್ತಜೆ ವಸಂತ ಕುಮಾರ

    November 23, 2024Updated:January 7, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬೆಂಗಳೂರು : ಪ್ರತಿಷ್ಠಿತ ‘ಕನಕ ಗೌರವ ಪ್ರಶಸ್ತಿ’ಯನ್ನು ಬೆಂಗಳೂರಿನಲ್ಲಿ ಮಾನ್ಯ ಮುಖ್ಯಮಂತ್ರಿಗಳು ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ದಿನಾಂಕ 18 ನವೆಂಬರ್ 2024ರಂದು ಡಾ. ತಾಳ್ತಜೆ ವಸಂತ ಕುಮಾರ ಪುತ್ತೂರು ಇವರಿಗೆ ನೀಡಿ ಗೌರವಿಸಿದರು.

    ದಿವಂಗತ ಕೃಷ್ಣ ಭಟ್ಟ ಹಾಗೂ ಲಕ್ಷ್ಮಿ ಇವರ ಸುಪುತ್ರನಾದ ಡಾ. ತಾಳ್ತಜೆ ವಸಂತ ಕುಮಾರ ಇವರು ‘ಕರ್ನಾಟಕದಲ್ಲಿ ಬೌದ್ಧ ಸಂಸ್ಕೃತಿ’ ಎಂಬ ವಿಷಯದಲ್ಲಿ ಪಿ.ಎಚ್.ಡಿ. ಪದವಿಯನ್ನು ಪಡೆದಿರುತ್ತಾರೆ. ಸುದೀರ್ಘ 37 ವರ್ಷಗಳ ಕಾಲ ಉಪನ್ಯಾಸಕ ವೃತ್ತಿಯನ್ನು ಮಾಡಿರುವ ಇವರು ಪುತ್ತೂರಿನ ವಿವೇಕಾನಂದ ಕಾಲೇಜಿನಲ್ಲಿ ಹಾಗೂ ಮುಂಬೈ ವಿಶ್ವವಿದ್ಯಾನಿಲಯದ ಮುಖ್ಯಸ್ಥರಾಗಿ ಸೇವೆಯನ್ನು ಸಲ್ಲಿಸಿರುತ್ತಾರೆ. ಇವರ ಮಾರ್ಗದರ್ಶನದಲ್ಲಿ 17 ಮಂದಿ ಪಿ.ಎಚ್‌.ಡಿ. ಹಾಗೂ 18 ಮಂದಿ ಎಂ.ಫಿಲ್. ಪಡೆದಿರುತ್ತಾರೆ.

    ಸಾಹಿತ್ಯ ಕ್ಷೇತ್ರದಲ್ಲಿ 55 ವರ್ಷಗಳ ಸುದೀರ್ಘ ಸೇವೆಯನ್ನು ನೀಡಿದ ಇವರು ಈವರೆಗೆ ಒಟ್ಟು 24 ಕೃತಿಗಳನ್ನು ರಚಿಸಿದ್ದು, ಇವರು ರಚಿಸಿದ ಅನೇಕ ಲೇಖನಗಳು ಪ್ರತಿಷ್ಠಿತ ಪತ್ರಿಕೆಗಳಲ್ಲಿ ಪ್ರಕಟವಾಗಿವೆ. 1993ರಲ್ಲಿ ಭಾರತ ಜರ್ಮನಿ ಸಾಂಸ್ಕೃತಿಕ ವಿನಿಮಯ ಯೋಜನೆಯ ಅನ್ವಯ ಜರ್ಮನ್ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಹಾಗೂ ಕರ್ನಾಟಕದ ವಿಷಯದಲ್ಲಿ ಉಪನ್ಯಾಸ ನೀಡಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ತು ಮಹಾರಾಷ್ಟ್ರ ರಾಜ್ಯ ಘಟಕದ ಸ್ಥಾಪಕ ಅಧ್ಯಕ್ಷರಾಗಿಯೂ ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿಯೂ ಸೇವೆಯನ್ನು ಸಲ್ಲಿಸಿದ್ದಾರೆ.

    Share. Facebook Twitter Pinterest LinkedIn Tumblr WhatsApp Email
    Previous Articleಶ್ರೀಕ್ಷೇತ್ರ ಕೈವಾರದಲ್ಲಿ ‘ಪುರಸ್ಕಾರ ಪ್ರದಾನ ಸಮಾರಂಭ’ | ನವೆಂಬರ್ 24
    Next Article ಬೆಂಗಳೂರಿನಲ್ಲಿ ‘ಕಾವಿ ಕಲೆ’ಯ ಕರಿತು ಸಂವಾದ | ನವೆಂಬರ್ 24   
    roovari

    Add Comment Cancel Reply


    Related Posts

    ಬೆಂಗಳೂರಿನ ಶ್ರೀ ಸಿ. ಅಶ್ವಥ್ ಕಲಾ ಭವನದಲ್ಲಿ ‘ಕಾವ್ಯ ಕಾಮಧೇನು ಎಚ್.ಎಸ್.ವಿ.’ | ಜೂನ್ 08

    June 3, 2025

    ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ‘ಶತ ಸಂಭ್ರಮ’ ಮತ್ತು ‘ನುಡಿ ನಮನ’ ಕಾರ್ಯಕ್ರಮ | ಜೂನ್ 08

    June 3, 2025

    ಶ್ರೀಮತಿ ಬಾನು ಮುಷ್ತಾಕ್ ಹಾಗೂ ಶ್ರೀಮತಿ ದೀಪಾ ಭಾಸ್ತಿ ಇವರುಗಳಿಗೆ ಗೌರವ ಸನ್ಮಾನ | ಜೂನ್ 04

    June 3, 2025

    ಶಿವಮೊಗ್ಗದ ಕ.ಸಾ.ಪ. ಜಿಲ್ಲಾ ಸಮಿತಿ ವತಿಯಿಂದ ‘ಶ್ರೀ ಕೃಷ್ಣರಾಜ ಒಡೆಯರ್ ಜನ್ಮದಿನಾಚರಣೆ’ | ಜೂನ್ 04

    June 3, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.