Subscribe to Updates

    Get the latest creative news from FooBar about art, design and business.

    What's Hot

    ಮಂಗಳೂರಿನಲ್ಲಿ ‘ಪ್ರೇರಣಾ 5’ ಸಂಗೀತ ಕಛೇರಿ ಮತ್ತು ಭರತನಾಟ್ಯ ಪ್ರದರ್ಶನ | ಫೆಬ್ರವರಿ 28

    February 27, 2026

    ಐವರು ಸಾಹಿತಿಗಳಿಗೆ ಬ್ಯಾರಿವಾರ್ತೆ ಗೌರವ ಪ್ರಶಸ್ತಿ

    February 27, 2026

    ತಮಿಳುನಾಡಿನ ಪ್ರಸಿದ್ಧ ದೇವಾಲಯಗಳಲ್ಲಿ ‘ನಾಟ್ಯಾಂಜಲಿ ಉತ್ಸವ’

    February 27, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ಬಹುಮಾನ ವಿತರಣೆ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ವೆಬ್‌ಸೈಟ್‌ನ ಮೊಬೈಲ್ ಆವೃತ್ತಿ ಅನಾವರಣ
    Drawing

    ಬಹುಮಾನ ವಿತರಣೆ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ವೆಬ್‌ಸೈಟ್‌ನ ಮೊಬೈಲ್ ಆವೃತ್ತಿ ಅನಾವರಣ

    February 20, 2024No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಪುತ್ತೂರು : ರಾಷ್ಟ್ರೀಯ ಹಬ್ಬಗಳ ಅಚರಣಾ ಸಮಿತಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಪುತ್ತೂರು ತಾಲೂಕು ಘಟಕ, ಬಾಲವನ ಅಭಿವೃದ್ಧಿ ಸಮಿತಿ ಪುತ್ತೂರು ಸಹಯೋಗದಲ್ಲಿ ಗಣರಾಜ್ಯೋತ್ಸವದ ಕುರಿತು ಪ್ರಬಂಧ, ಚಿತ್ರಕಲೆ, ಭಾಷಣ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಣೆ ಹಾಗೂ ಕನ್ನಡ ಸಾಹಿತ್ಯ ಪರಿಷತ್ತು ಪುತ್ತೂರು ಇದರ ವೆಬ್‌ಸೈಟ್‌ನ ಮೊಬೈಲ್ ಆವೃತ್ತಿ ಅನಾವರಣ ಕಾರ್ಯಕ್ರಮವು ದಿನಾಂಕ 14-02-2024ರಂದು ಪರ್ಲಡ್ಕ ಡಾ. ಶಿವರಾಮ ಕಾರಂತ ಬಾಲವನದಲ್ಲಿ ನಡೆಯಿತು.

    ಕಾರ್ಯಕ್ರಮವನ್ನು ಉದ್ಘಾಟಿಸಿ, ಕನ್ನಡ ಸಾಹಿತ್ಯ ಪರಿಷತ್ತಿನ ವೆಬ್‌ಸೈಟ್ ಮೊಬೈಲ್ ಆವೃತ್ತಿ ಅನಾವರಣಗೊಳಿಸಿದ ಸಹಾಯಕ ಆಯುಕ್ತ ಜುಬಿನ್ ಮೊಹಾಪಾತ್ರ ಮಾತನಾಡಿ, “ಬಾಲವನದಲ್ಲಿ ತೆರೆದ ರಂಗ ಮಂದಿರವಿದೆ. ಇಲ್ಲಿ ಮಕ್ಕಳಲ್ಲಿರುವ ಪ್ರತಿಭೆಗಳ ಬೆಳವಣಿಗೆಗೆ ಮತ್ತು ಅನಾವರಣಕ್ಕೆ ಅವಕಾಶ ಕಲ್ಪಿಸಬಹುದು. ಇದಕ್ಕಾಗಿ ಯೋಜನೆ ರೂಪಿಸಲಾಗುವುದು. ಬಾಲವನದ ಅಭಿವೃದ್ಧಿಗೆ ಆದ್ಯತೆ ನೀಡುವಂತೆ ಜಿಲ್ಲಾಧಿಕಾರಿಗಳು ಸೂಚಿಸಿದ್ದಾರೆ. ಹೀಗಾಗಿ ಮಕ್ಕಳಿಗೆ ವೇದಿಕೆ ಕಲ್ಪಿಸುವ ನಿಟ್ಟಿನಲ್ಲಿ ಬಾಲವನದ ತೆರೆದ ರಂಗ ಮಂದಿರವನ್ನು ಆದ್ಯತೆಯಲ್ಲಿ ಅಭಿವೃದ್ಧಿ ಪಡಿಸಲಾಗುವುದು. ನಂತರ ವಾರಾಂತ್ಯಕ್ಕೆ ವಿವಿಧ ಸ್ಪರ್ಧೆಗಳನ್ನು ನಡೆಸಲು ಕ್ರಮಕೈಗೊಳ್ಳಲಾಗುವುದು. ಸಾಹಿತ್ಯ ಪರಿಷತ್ತಿನವರು ಉತ್ತಮ ಸೇವೆ ನೀಡುತ್ತಿದ್ದು ಬಾಲವನದ ಕಾರ್ಯಕ್ರಮದಲ್ಲಿಯೂ ಕನ್ನಡ ಸಾಹಿತ್ಯ ಪರಿಷತ್ ಹಾಗೂ ಶಿಕ್ಷಣ ಇಲಾಖೆ ಕೈ ಜೋಡಿಸುವಂತೆ ತಿಳಿಸಿದರು. ವಿದ್ಯಾರ್ಥಿಗಳೆಲ್ಲರೂ ಪ್ರತಿಭಾವಂತರಾಗಿದ್ದೀರಿ. ನಿಮ್ಮಲ್ಲಿ ಗುರಿ ಮುಖ್ಯವಾಗಿರಬೇಕು. ಮುಂದೆ ಐ.ಎ.ಎಸ್., ಐ.ಪಿ.ಎಸ್., ವೈದ್ಯ ಮತ್ತು ಶಾಸಕರಾಗುವ ಗುರಿಯಿರಬೇಕು. ಆ ಗುರಿ ತಲುಪುವ ತನಕ ಸಾಧನೆ ಮಾಡಬೇಕು. ಗುರಿ ತಲುಪಲು ಪ್ರಯತ್ನ ಮಾಡಬೇಕು” ಎಂದವರು ಕರೆ ನೀಡಿದರು.

    ಮುಖ್ಯ ಅತಿಥಿಯಾಗಿದ್ದ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಸುಂದರ ಗೌಡ ಮಾತನಾಡಿ, “ಸಾಹಿತ್ಯ ಪರಿಷತ್ ಬಹಳಷ್ಟು ಕೆಲಸ ಮಾಡುತ್ತಿದೆ. ಉಮೇಶ್ ನಾಯಕ್ ಅಧ್ಯಕ್ಷರಾದ ಬಳಿಕ ಹೊಸ ಹುರುಪಿನಲ್ಲಿ ಕೆಲಸ ಮಾಡುತ್ತಿದ್ದು, ಗ್ರಾಮ ಮಟ್ಟದಲ್ಲೂ ಸಾಹಿತ್ಯದ ಕಾರ್ಯಕ್ರಮಗಳನ್ನು ಆಯೋಜಿಸಿಕೊಂಡು ಮಕ್ಕಳಲ್ಲಿಯೂ ಸಾಹಿತ್ಯದ ಅಭಿರುಚಿ ಮೂಡುವಂತೆ ಮಾಡಿರುವುದಕ್ಕೆ ಅಭಿನಂದನೆ ಸಲ್ಲಿಸುವುದಾಗಿ ಹೇಳಿದರು. ಕನ್ನಡ ಸಾಹಿತ್ಯ ಪರಿಷತ್ ರಾಷ್ಟ್ರೀಯ ಹಬ್ಬಗಳ ಜೊತೆಗೆ ಬೆರೆತುಕೊಂಡಿದೆ. ಮಕ್ಕಳ ಶೈಕ್ಷಣಿಕ ಬೆಳವಣಿಗೆಗೆ ಪೂರಕವಾಗಿ ಸಾಹಿತ್ಯ ಪರಿಷತ್ ಕೆಲಸ ಮಾಡುತ್ತಿದೆ. ಸಂವಿಧಾನದ ಮಹತ್ವದ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವ ನಿಟ್ಟಿನಲ್ಲಿ ಸ್ಪರ್ಧೆ ಆಯೋಜಿಸಿರುವುದು ಶ್ಲಾಘನೀಯ” ಎಂದು ಹೇಳಿದರು.

    ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಘಟಕದ ಅಧ್ಯಕ್ಷ ಉಮೇಶ್ ನಾಯಕ್ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿ, “ವಿದ್ಯಾರ್ಥಿಗಳಿಗೆ ಗಣರಾಜ್ಯೋತ್ಸವದ ಮಹತ್ವ ತಿಳಿಸುವ ನಿಟ್ಟಿನಲ್ಲಿ ಸಹಾಯಕ ಆಯುಕ್ತರ ಮಾರ್ಗದರ್ಶನದಲ್ಲಿ ಪ್ರಬಂಧ, ಚಿತ್ರಕಲೆ ಹಾಗೂ ಭಾಷಣ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು.ಇದರಲ್ಲಿ ತಾಲೂಕಿನ 80 ಶಾಲೆಗಳ 700 ವಿದ್ಯಾರ್ಥಿಗಳು ಭಾಗವಹಿಸಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷನಾಗಿ ತಾನು ಅಧಿಕಾರ ಸ್ವೀಕರಿಸಿದ ನಂತರದ ಎರಡು ವರ್ಷಗಳಲ್ಲಿ ಸುಮಾರು 150ಕ್ಕೂ ಅಧಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಗ್ರಾಮ, ಗ್ರಾಮಗಳಲ್ಲಿ ಸಾಹಿತ್ಯದ ಕಾರ್ಯಕ್ರಮ, ಐ.ಎ.ಎಸ್., ಐ.ಪಿ.ಎಸ್. ತರಬೇತಿ ಅಭಿಯಾನ, ಇನ್ನೂರಕ್ಕೂ ಅಧಿಕ ಸಾಧಕರನ್ನು ಸನ್ಮಾನಿಸಲಾಗಿದೆ. ಕನ್ನಡ ಸಾಹಿತ್ಯ ಪರಿಷತ್‌ಗೆ ಒಂಭತ್ತು ಸೆಂಟ್ಸ್ ಜಾಗವೂ ಮಂಜೂರಾಗಿದೆ” ಎಂದರು.

    ಕನ್ನಡ ಸಾಹಿತ್ಯ ಪರಿಷತ್ತಿನ ವೆಬ್‌ಸೈಟ್‌ನ ಮೊಬೈಲ್‌ ಆವೃತ್ತಿ ತಯಾರಿಸಿದ ಪ್ರಮೀತ್‌ರಾಜ್ ಕಟ್ಟತ್ತಾರ್‌ರವರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಿ, ಗೌರವಿಸಲಾಯಿತು. ಸುದ್ದಿ ಸಮೂಹ ಸಂಸ್ಥೆಗಳ ಆಡಳಿತ ನಿರ್ದೇಶಕ ಡಾ. ಯು.ಪಿ. ಶಿವಾನಂದ ಅವರು ವಿಜೇತರಿಗೆ ಬಹುಮಾನ ವಿತರಿಸಿದರು. ತಹಶೀಲ್ದಾರ್ ಪುರಂದರ ಹೆಗ್ಡೆ, ನಗರ ಸಭಾ ಸದಸ್ಯೆ ದೀಕ್ಷಾ ಪೈ, ಭಂಡಾರ್ಕರ್ ಕ್ಯಾಟರರ್ಸ್‌ನ ಮ್ಹಾಲಕ ಅವಿನಾಶ್ ಭಂಡಾರ್ಕರ್, ಶಿಕ್ಷಣ ಸಂಯೋಜಕರಾದ ಹರಿಪ್ರಸಾದ್, ಅಮೃತಕಲಾ, ಆರ್ಕಿಟೆಕ್ಟ್ ನಿರೇನ್ ಜೈನ್ ಮತ್ತು ಕನ್ನಡ ಸಾಹಿತ್ಯ ಪರಿಷತ್ತಿನ ಶಂಕರಿ ಶರ್ಮ ವೇದಿಕೆಯಲ್ಲಿ ಉಪಸ್ಥಿತರಿದ್ದರು.

    ಪಟ್ಟಾಭಿರಾಮ ಸುಳ್ಯ ಇವರಿಂದ ಹಾಸ್ಯ ಪ್ರಹಸನ ವಿಶೇಷ ಆಕರ್ಷಣೆಯಾಗಿತ್ತು. ಮಾಯಿದೇ ದೇವುಸ್ ಶಾಲಾ ವಿದ್ಯಾರ್ಥಿಗಳು ನಾಡಗೀತೆ ಹಾಡಿ, ಸಿ.ಆರ್‌.ಪಿ. ಶಶಿಕಲಾ ಬಹುಮಾನ ವಿಜೇತರ ಪಟ್ಟಿ ವಾಚಿಸಿದರು. ಕನ್ನಡ ಸಾಹಿತ್ಯ ಪರಿಷತ್ತಿನ ಕೋಶಾಧ್ಯಕ್ಷ ಡಾ. ಹರ್ಷಕುಮಾ‌ರ್ ಮಾಡಾವು ವಂದಿಸಿ, ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ಶಿಕ್ಷಕಿ ಉಮಾ ಕಾರ್ಯಕ್ರಮ ನಿರೂಪಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Articleಪುಸ್ತಕ ವಿಮರ್ಶೆ | ಮಾನವೀಯತೆಯ ಅರಿವಿನ ಬೆಳಕಿನತ್ತ ಒಯ್ಯುವ ‘ಮಹಾಬೆಳಗು’
    Next Article ಸಂದೇಶ ಸಂಸ್ಕೃತಿ ಮತ್ತು ಶಿಕ್ಷಣ ಪ್ರತಿಷ್ಠಾನದಿಂದ ‘ಸಂದೇಶ ಪ್ರಶಸ್ತಿ’ ಪ್ರದಾನ
    roovari

    Add Comment Cancel Reply


    Related Posts

    ಐವರು ಸಾಹಿತಿಗಳಿಗೆ ಬ್ಯಾರಿವಾರ್ತೆ ಗೌರವ ಪ್ರಶಸ್ತಿ

    February 27, 2026

    ಸವಿತಾ ಮಾಧವ ಶಾಸ್ತ್ರಿ ಮಹಿಳಾ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷೆ

    February 27, 2026

    ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್‌ನ ಪ್ರಥಮ ವಾರ್ಷಿಕೋತ್ಸವ ಸಮಾರಂಭ

    February 26, 2026

    ಉಷಾ ಕೆ.ವಿ. ಇವರ ‘ವೇದಾಂತ’ ಹಾಗೂ ‘ಸ್ಪಂದನ’ ಕೃತಿಗಳ ಲೋಕಾರ್ಪಣಾ ಸಮಾರಂಭ

    February 26, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.