Subscribe to Updates

    Get the latest creative news from FooBar about art, design and business.

    What's Hot

    ‘ಯಕ್ಷಮಂಜರಿ’ ಮಹಿಳಾ ಯಕ್ಷಗಾನ ತಾಳಮದ್ದಳೆ ಅಷ್ಟಾಹ ಸಂಭ್ರಮ | ಮಾರ್ಚ್ 01ರಿಂದ 08

    February 25, 2026

    ನಂದಿನಿ ನದಿಯ ಕುದ್ರುವಿನಲ್ಲಿ ಮೂಲ್ಕಿ ತಾಲೂಕು ಮೂರನೆಯ ಕನ್ನಡ ಸಾಹಿತ್ಯ ಸಮ್ಮೇಳನ | ಮಾರ್ಚ್ 01

    February 25, 2026

    ಮೇಘಮೈತ್ರಿ ದ್ವಿತೀಯ ಯುವ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷರಾಗಿ ಡಾ. ವೆಂಕಟೇಶ ಗುಡೆಪ್ಪನವರ ಆಯ್ಕೆ

    February 25, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ‘ಡಾ. ಜೀ.ಶಂ. ಪರಮಶಿವಯ್ಯ ಪ್ರಶಸ್ತಿ’ಗೆ ಜಾನಪದ ವಿದ್ವಾಂಸ ಪ್ರೊ. ಕೆ. ಚಿನ್ನಪ್ಪ ಗೌಡ ಆಯ್ಕೆ
    Awards

    ‘ಡಾ. ಜೀ.ಶಂ. ಪರಮಶಿವಯ್ಯ ಪ್ರಶಸ್ತಿ’ಗೆ ಜಾನಪದ ವಿದ್ವಾಂಸ ಪ್ರೊ. ಕೆ. ಚಿನ್ನಪ್ಪ ಗೌಡ ಆಯ್ಕೆ

    February 5, 2026No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email



    ಬೆಂಗಳೂರು : ಕರ್ನಾಟಕ ಜಾನಪದ ಪರಿಷತ್ತು ಬೆಂಗಳೂರು ಇವರು ಕೊಡಮಾಡುವ 2026ನೇ ಸಾಲಿನ ‘ಡಾ. ಜಿ.ಶಂ. ಪರಮಶಿವಯ್ಯ ಪ್ರಶಸ್ತಿ’ಗೆ ಜಾನಪದ ವಿದ್ವಾಂಸರಾದ ಡಾ. ಕೆ. ಚಿನ್ನಪ್ಪ ಗೌಡ ಇವರು ಆಯ್ಕೆಯಾಗಿದ್ದಾರೆ. ರಾಮ ನಗರದ ಜಾನಪದ ಲೋಕದಲ್ಲಿ ದಿನಾಂಕ 7 ಮತ್ತು 8 ಫೆಬ್ರವರಿ 2026ರಂದು ಕರ್ನಾಟಕ ಜಾನಪದ ಪರಿಷತ್ತು ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ನಡೆಯಲಿರುವ ‘ವಿದ್ಯಾರ್ಥಿ ಲೋಕೋತ್ಸವ’ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿ ಪ್ರದಾನ ನಡೆಯಲಿದೆ.

    ಕರ್ನಾಟಕ ಜಾನಪದ ಪರಿಷತ್ತು ಡಾ. ಕೆ. ಚಿನ್ನಪ್ಪ ಗೌಡರು ಜಾನಪದ ಕ್ಷೇತ್ರದಲ್ಲಿ ಸಲ್ಲಿಸಿರುವ ಸಾಧನೆಯನ್ನು ಗುರುತಿಸಿ ಈ ಪ್ರತಿಷ್ಠಿತ ಪ್ರಶಸ್ತಿಗೆ ಅವರನ್ನು ಆಯ್ಕೆ ಮಾಡಿದೆ. ಈ ಪ್ರಶಸ್ತಿಯು ರೂ.25,000/- ನಗದು, ಸ್ಮರಣಿಕೆ ಮತ್ತು ಪ್ರಶಸ್ತಿ ಪತ್ರವನ್ನು ಒಳಗೊಂಡಿದೆ. ಜಾನಪದ ಪರಿಷತ್ತುವಿನ ಇತರ ಪ್ರಶಸ್ತಿಗಳಾದ ‘ನಾಡೋಜ ಎಚ್.ಎಲ್. ನಾಗೇಗೌಡ ಜಾನಪದ ಲೋಕಶ್ರೀ ಪ್ರಶಸ್ತಿ’ಗೆ ಜಾನಪದ ವಿದ್ವಾಂಸ ಹಿ.ಶಿ. ರಾಮೇಚಂದ್ರೇ ಗೌಡ, ‘ನಾಡೋಜ ಡಾ. ಜಿ. ನಾರಾಯಣ ಜಾನಪದ ಲೋಕ ಪ್ರಶಸ್ತಿ’ಗೆ ವಾದನ ಕಲಾವಿದರಾದ ಚಿಕ್ಕಣ್ಣ, ‘ಲಕ್ಷ್ಮಮ್ಮ ನಾಗೇಗೌಡ ಪ್ರಶಸ್ತಿ’ಗೆ ಜನಪದ ಛಾಯಾಗ್ರಾಹಕರಾದ ಡಾ. ಸಿರಿಗಂಧ ಶ್ರೀನಿವಾಸ ಮೂರ್ತಿ ಇವರುಗಳು ಆಯ್ಕೆಯಾಗಿದ್ದು, ಹಾಗೆಯೇ ಜಾನಪದ ಕ್ಷೇತ್ರದ ಇತರ ಪ್ರಶಸ್ತಿಗಳಿಗೆ ನಾಡಿನ ಸಾಧಕರು ಆಯ್ಕೆಯಾಗಿದ್ದಾರೆ. ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಆದಿ ಚುಂಚನಗಿರಿ ಮಠದ ಶ್ರೀ ನಿರ್ಮಲಾನಂದನಾಥ ಮಹಾಸ್ವಾಮಿಗಳ ಉಪಸ್ಥಿತಿಯಲ್ಲಿ ಸಾರಿಗೆ ಸಚಿವರಾದ ರಾಮಲಿಂಗ ರೆಡ್ಡಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

    award baikady folk Literature roovari
    Share. Facebook Twitter Pinterest LinkedIn Tumblr WhatsApp Email
    Previous Articleಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ತಿಂಗಳ ಸರಣಿ ತಾಳಮದ್ದಲೆ
    Next Article ಮುಲ್ಕಿಯಲ್ಲಿ ಕವನ ಸಂಕಲನ ಬಿಡುಗಡೆ ಹಾಗೂ ಕವಿಗೋಷ್ಠಿ | ಫೆಬ್ರವರಿ 08
    roovari

    Add Comment Cancel Reply


    Related Posts

    ‘ಯಕ್ಷಮಂಜರಿ’ ಮಹಿಳಾ ಯಕ್ಷಗಾನ ತಾಳಮದ್ದಳೆ ಅಷ್ಟಾಹ ಸಂಭ್ರಮ | ಮಾರ್ಚ್ 01ರಿಂದ 08

    February 25, 2026

    ನಂದಿನಿ ನದಿಯ ಕುದ್ರುವಿನಲ್ಲಿ ಮೂಲ್ಕಿ ತಾಲೂಕು ಮೂರನೆಯ ಕನ್ನಡ ಸಾಹಿತ್ಯ ಸಮ್ಮೇಳನ | ಮಾರ್ಚ್ 01

    February 25, 2026

    ಮೇಘಮೈತ್ರಿ ದ್ವಿತೀಯ ಯುವ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷರಾಗಿ ಡಾ. ವೆಂಕಟೇಶ ಗುಡೆಪ್ಪನವರ ಆಯ್ಕೆ

    February 25, 2026

    ಬರಿಮಾರು ಶ್ರೀ ಮಹಾಮ್ಮಾಯಿ ದೇವಸ್ಥಾನದಲ್ಲಿ ತಾಳಮದ್ದಳೆ ಕೂಟ

    February 25, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.