Subscribe to Updates

    Get the latest creative news from FooBar about art, design and business.

    What's Hot

    ಬೆಂಗಳೂರಿನಲ್ಲಿ ಕ್ಲೇ ಮಾಡೆಲಿಂಗ್ ಪ್ರದರ್ಶನ | ಮೇ 24

    May 21, 2025

    ಬಾನು ಮುಷ್ತಾಕ್‌ ಕೃತಿಗೆ ಪ್ರತಿಷ್ಠಿತ ಅಂತರರಾಷ್ಚ್ರೀಯ ‘ಬೂಕರ್ ಪ್ರಶಸ್ತಿ’

    May 21, 2025

    ಹರಿಹರಪುರದಲ್ಲಿ ‘ಭಾಗವತರ ಸಂಸ್ಮರಣೆ ಗಾನಾರಾಧನೆ’ | ಮೇ 25

    May 21, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಪ್ರೊ. ಎ.ವಿ. ನಾವಡರಿಗೆ ‘ಸೇಡಿಯಾಪು ಪ್ರಶಸ್ತಿ’
    Awards

    ಪ್ರೊ. ಎ.ವಿ. ನಾವಡರಿಗೆ ‘ಸೇಡಿಯಾಪು ಪ್ರಶಸ್ತಿ’

    June 15, 2023Updated:August 19, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಉಡುಪಿ : ಹಿರಿಯ ಸಾಹಿತಿ, ಸಂಶೋಧಕ ಪ್ರೊ. ಎ.ವಿ. ನಾವಡ ಅವರು ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರ ನೀಡುವ 2023ನೇ ಸಾಲಿನ ‘ಸೇಡಿಯಾಪು ಕೃಷ್ಣ ಭಟ್ಟ ಪ್ರಶಸ್ತಿ’ ಪುರಸ್ಕಾರಕ್ಕೆ ಆಯ್ಕೆಯಾಗಿದ್ದಾರೆ.

    ಕನ್ನಡ ಭಾಷೆ, ಸಾಹಿತ್ಯ, ವ್ಯಾಕರಣ, ಭಾಷಾ ಶಾಸ್ತ್ರ ಕಥನ ಕಾವ್ಯ ಮತ್ತು ಸಂಶೋಧನಾ ಕ್ಷೇತ್ರಗಳಲ್ಲಿ ಮಹತ್ವದ ಕೊಡುಗೆ ನೀಡಿರುವ ಸೇಡಿಯಾಪು ಕೃಷ್ಣ ಭಟ್ಟರ ನೆನಪಿನಲ್ಲಿ ಈ ಪ್ರಶಸ್ತಿ ನೀಡಲಾಗುವುದು. ಪ್ರಶಸ್ತಿ 10,000/- ರೂ. ನಗದು ಹಾಗೂ ಪ್ರಶಸ್ತಿ ಫಲಕವನ್ನೊಳಗೊಂಡಿದೆ ಎಂದು ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರದ ಆಡಳಿತಾಧಿಕಾರಿ ಡಾ. ಬಿ. ಜಗದೀಶ್ ಶೆಟ್ಟಿ ತಿಳಿಸಿರುತ್ತಾರೆ.

    1980ರಿಂದ ವಿವಿಧ ಸಂಶೋಧನಾ ಯೋಜನೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡು ಅಪಾರ ಸಂಶೋಧನ ಅನುಭವ ಹೊಂದಿರುವ ಪ್ರೊಫೆಸರ್ ನಾವಡರು ಕುಂದಾಪುರದ ಭಂಡಾರ್‌ಕಾರ್ಸ್‌ ಕಾಲೇಜು ಮತ್ತು ಹಂಪಿ ಕನ್ನಡ ವಿ.ವಿ.ಯಲ್ಲಿ ಒಟ್ಟು 38 ವರ್ಷಗಳ ಬೋಧನಾನುಭವ ಹೊಂದಿದ್ದಾರೆ. ಹಂಪಿ ಕನ್ನಡ ವಿ.ವಿ.ಯ ವಿಶ್ರಾಂತ ಪ್ರಾಧ್ಯಾಪಕ, ಪ್ರಸಾರಾಂಗ ನಿರ್ದೇಶಕ, ಡೀನ್, ಸಿಂಡಿಕೇಟ್‌ ಸದಸ್ಯರಾಗಿ ಹಾಗೂ ಸೆನೆಟ್ ಸದಸ್ಯರಾಗಿ ವಿವಿಧ ವಿಶ್ವವಿದ್ಯಾಲಯಗಳಲ್ಲಿ ಕಾರ್ಯನಿರ್ವಹಿಸಿದ್ದಾರೆ.

    ಪ್ರೊ. ನಾವಡ ದಾಸಸಾಹಿತ್ಯ ಸಂಸ್ಕೃತಿ ವಿಶ್ವಕೋಶ, ದ್ರಾವಿಡ ಜ್ಞಾತಿ ಪದಕೋಶ, ಕನ್ನಡ ಇಂಗ್ಲಿಷ್ ಶಬ್ದಕೋಶ, ಕನಕ ವಿಶಿಷ್ಟ ಪದಕೋಶ, ಬ್ಯಾರಿ ನಿಘಂಟು ಮುಂತಾದವುಗಳಲ್ಲಿ ತೊಡಗಿಸಿಕೊಂಡಿದ್ದರು. ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ‘ಗ್ರಾಮ ಚರಿತ್ರ ಕೋಶ’ ಯೋಜನೆಯಲ್ಲಿ ಉಡುಪಿ ಜಿಲ್ಲಾ ಕೋಶದ ಪ್ರಧಾನ ಸಂಪಾದಕರಾಗಿದ್ದಾರೆ.

    ಪ್ರೊ. ನಾವಡ 30 ಪುಸ್ತಕಗಳನ್ನು ಪ್ರಕಟಿಸಿದ್ದಾರೆ. 29 ಗ್ರಂಥಗಳನ್ನು ಸಂಪಾದಿಸಿದ್ದಾರೆ. ಅಲ್ಲದೆ ಜಾನಪದ, ದಾಸ ಸಾಹಿತ್ಯ, ಹಸ್ತಪ್ರತಿ ಶಾಸ್ತ್ರಕ್ಕೆ ಸಂಬಂಧಿಸಿ ನೂರಾರು ಪ್ರೌಢಪ್ರಬಂಧ ಮಂಡಿಸಿದ್ದಾರೆ. ಫಿನ್‌ಲ್ಯಾಂಡಿನ ಫೋಕ್ಲೋರ್ ಸೊಸ್ಯಾಟಿಯ ಫೆಲೋ ಗೌರವ, ಕು.ಶಿ. ಜಾನಪದ ಪ್ರಶಸ್ತಿ, ಕರ್ನಾಟಕ ತುಳು ಅಕಾಡೆಮಿ ಗೌರವ ಪ್ರಶಸ್ತಿ, ವರ್ಧಮಾನ ಸಾಹಿತ್ಯ ಪ್ರಶಸ್ತಿ, ಕರ್ನಾಟಕ ಸಾಹಿತ್ಯ ಅಕಾಡೆಮಿ ಪುಸ್ತಕ ಬಹುಮಾನ, ಕನಕಶ್ರೀ ಪ್ರಶಸ್ತಿ ಮುಂತಾದ ಹಲವು ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ.

    Share. Facebook Twitter Pinterest LinkedIn Tumblr WhatsApp Email
    Previous Articleಬದಿಯಡ್ಕದಲ್ಲಿ ಯಕ್ಷಗಾನ ತರಗತಿ ಆರಂಭ
    Next Article ಮಂಡ್ಯದ ಗುಣಸಾಗರಿ ನಾಗರಾಜ್‌ ಹಾಗೂ ಚಿಕ್ಕಮಗಳೂರಿನ ಡಿ.ಎನ್‌. ಗೀತಾ ʻಮನೋಹರಿ ಪಾರ್ಥಸಾರಥಿ ಮನುಶ್ರೀ ದತ್ತಿ ಪ್ರಶಸ್ತಿಗೆʼ ಆಯ್ಕೆ
    roovari

    Add Comment Cancel Reply


    Related Posts

    ಬಾನು ಮುಷ್ತಾಕ್‌ ಕೃತಿಗೆ ಪ್ರತಿಷ್ಠಿತ ಅಂತರರಾಷ್ಚ್ರೀಯ ‘ಬೂಕರ್ ಪ್ರಶಸ್ತಿ’

    May 21, 2025

    ಡಾ. ನಳಿನಿ ಮೂರ್ತಿ ದತ್ತಿ ಪ್ರಶಸ್ತಿಗೆ ಕೃತಿಗಳ ಆಹ್ವಾನ | ಕೊನೆಯ ದಿನಾಂಕ ಮೇ 31

    May 21, 2025

    ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಹಿರಿಯ ಚೇತನ ಪ್ರೊ. ಹೇರಂಜೆ ಕೃಷ್ಣ ಭಟ್ಟರ ನುಡಿ ನಮನ

    May 21, 2025

    ಹಾಸನದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಮುದಾಯ ಭವನದಲ್ಲಿ ‘ಚಿಣ್ಣರ ಪ್ರತಿಭಾ ಕಲರವ’ ಶಿಬಿರ

    May 21, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.