ಕುಂದಾಪುರ : ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲೆ ವತಿಯಿಂದ ಶ್ರೀಮತಿ ಜಿ. ಸರೋಜಮ್ಮ ಪ್ರಾಯೋಜಿತ ‘ಪುಂಡಲೀಕ ಹಾಲಂಬಿ ದತ್ತಿ ಕಾರ್ಯಕ್ರಮ, ಪುಂಡಲೀಕ ಹಾಲಂಬಿ ಪ್ರಶಸ್ತಿ ಪ್ರದಾನ ಸಮಾರಂಭವು ಕುಂದಾಪುರದ ಸರಕಾರಿ ಪದವಿ ಪೂರ್ವ ಕಾಲೇಜಿನ ಕಲಾ ಮಂದಿರದಲ್ಲಿ ದಿನಾಂಕ 14 ಫೆಬ್ರವರಿ 2026ರಂದು ಸಂಜೆ 5-00 ಗಂಟೆಗೆ ನಡೆಯಲಿದೆ.
ಯಕ್ಷಗಾನ ಕಲಾವಿದ ಹಳ್ಳಾಡಿ ಜಯರಾಮ್ ಶೆಟ್ಟಿ ಇವರಿಗೆ ಈ ಬಾರಿಯ ಪುಂಡಲೀಕ ಹಾಲಂಬಿ ಪ್ರಶಸ್ತಿ ಹಾಗೂ 25 ಸಾವಿರ ರೂ. ನಗದನ್ನು ನೀಡಿ ಗೌರವಿಸಲಾಗುತ್ತಿದೆ. ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಕ.ಸಾ.ಪ. ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಅಧ್ಯಕ್ಷತೆ ವಹಿಸಲಿದ್ದು, ಶಾಸಕರಾದ ಕಿರಣ್ ಕುಮಾರ್ ಕೊಡ್ಗಿ ಉದ್ಘಾಟಿಸಲಿದ್ದಾರೆ. ಡಾ. ಉಮೇಶ ಪುತ್ರನ್ ಆಶಯ ನುಡಿಗಳನ್ನಾಡಲಿದ್ದು, ಎ.ಎಸ್.ಎನ್. ಹೆಬ್ಬಾರ್ ಅಭಿನಂದನಾ ನುಡಿಗಳನ್ನಾಡಲಿದ್ದಾರೆ. ಶ್ರೀಮತಿ ಜಿ. ಸರೋಜಮ್ಮ ಪುಂಡಲೀಕ ಹಾಲಂಬಿ, ನರೇಂದ್ರ ಕುಮಾರ್ ಕೋಟಿ, ಕೆ. ಸೀತಾರಾಮ ನಕ್ಕತ್ತಾಯ, ಪ್ರಾಂಶುಪಾಲ ಜಿ. ರಾಮಕೃಷ್ಣ ಉಪಸ್ಥಿತರಿರುವರು.

