ಗುಂಡ್ಮಿ : ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲಾ ಘಟಕ, ಹಂಗಾರಕಟ್ಟೆ ಯಕ್ಷಗಾನ ಕಲಾಕೇಂದ್ರ, ಸಾಸ್ತಾನ ರೋಟರಿ ಕ್ಲಬ್ ಸಹಕಾರದಲ್ಲಿ ಗುಂಡ್ಮಿ ಸಾಲಿಗ್ರಾಮದ ಯಕ್ಷಗಾನ ಕಲಾಕೇಂದ್ರದ ಸದಾನಂದ ರಂಗಮಂಟಪದಲ್ಲಿ ದಿನಾಂಕ 15 ಸೆಪ್ಟೆಂಬರ್ 2024ರಂದು ಜಿ. ಸರೋಜಮ್ಮ ಪ್ರಾಯೋಜಿತ ಪುಂಡಲೀಕ ಹಾಲಂಬಿ ದತ್ತಿ ಕಾರ್ಯಕ್ರಮದಲ್ಲಿ ಯಕ್ಷಗಾನ ಕಲಾವಿದ ಐರೋಡಿ ಗೋವಿಂದಪ್ಪ ಇವರಿಗೆ ‘ಪುಂಡಲೀಕ ಹಾಲಂಬಿ ಪ್ರಶಸ್ತಿ’ ಪ್ರದಾನ ಮಾಡಲಾಯಿತು.
ಪತ್ರಕರ್ತ ಎಸ್. ಜನಾರ್ದನ ಮರವಂತೆ ಪ್ರಶಸ್ತಿ ಪ್ರದಾನ ಮಾಡಿದರು. ಹಂಗಾರಕಟ್ಟೆ ಯಕ್ಷಗಾನ ಕಲಾಕೇಂದ್ರದ ಅಧ್ಯಕ್ಷ ಆನಂದ ಸಿ. ಕುಂದರ್ ಇವರು ಈ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕ.ಸಾ.ಪ. ಜಿಲ್ಲಾ ಘಟಕದ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಅಧ್ಯಕ್ಷತೆ ವಹಿಸಿದ್ದರು. ಗೌರವ ಕಾರ್ಯದರ್ಶಿ ಸುಬ್ರಹ್ಮಣ್ಯ ಶೆಟ್ಟಿ ಆಶಯ ಭಾಷಣ ಮಾಡಿದರು. ಶಿಕ್ಷಕ ನರೇಂದ್ರ ಕುಮಾರ ಪ್ರಶಸ್ತಿ ಪುರಸ್ಕೃತರ ಪರಿಚಯ ಮಾಡಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಉಪನಿರ್ದೇಶಕಿ ಪೂರ್ಣಿಮಾ, ಹಾಲಂಬಿ ಅವರ ಪತ್ನಿ ಜಿ. ಸರೋಜಮ್ಮ, ಕಲಾಕೇಂದ್ರದ ಕಾರ್ಯದರ್ಶಿ ರಾಜಶೇಖರ ಹೆಬ್ಬಾರ್, ಗೋಳಿಗರಡಿ ಮೇಳದ ಯಜಮಾನ ವಿಠಲ ಪೂಜಾರಿ, ಯಕ್ಷಗಾನ ಚಿಂತಕ ಸುರೇಂದ್ರ ಫಣಿಯೂರು, ಕ.ಸಾ.ಪ. ಗೌರವಾಧ್ಯಕ್ಷ ಮನೋಹರ್, ರೋಟರಿ ಕ್ಲಬ್‌ನ ಅಧ್ಯಕ್ಷೆ ಲೀಲಾವತಿ ಗಂಗಾಧರ ಪೂಜಾರಿ, ಕಾಪು ತಾಲೂಕು ಕ.ಸಾ.ಪ. ಅಧ್ಯಕ್ಷ ಪುಂಡಲೀಕ ಮರಾಠೆ, ಬ್ರಹ್ಮಾವರದ ರಾಮಚಂದ್ರ ಐತಾಳ ಉಪಸ್ಥಿತರಿದ್ದರು.