Subscribe to Updates

    Get the latest creative news from FooBar about art, design and business.

    What's Hot

    ಬೆಳಗಾವಿಯ ಲೋಕಮಾನ್ಯ ರಂಗಮಂದಿರದಲ್ಲಿ ಪ್ರೇಕ್ಷಕರನ್ನು ರಂಜಿಸಿದ ‘ಶ್ರೀ ಕೃಷ್ಣ ಸಂಧಾನ’ ನಾಟಕ

    May 20, 2025

    ಸಹೋದಯ ಸಭಾಂಗಣದಲ್ಲಿ ಹಂಝ ಮಲಾರ್‌ರ ಬ್ಯಾರಿ ಪುಸ್ತಕಗಳು ಲೋಕಾರ್ಪಣೆ

    May 20, 2025

    ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ದತ್ತಿ ಉಪನ್ಯಾಸ ಮತ್ತು ದತ್ತಿ ಪುರಸ್ಕಾರ ಪ್ರದಾನ | ಮೇ 21

    May 20, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಗುಂಡ್ಮಿ ಸಾಲಿಗ್ರಾಮದ ಯಕ್ಷಗಾನ ಕಲಾಕೇಂದ್ರದಲ್ಲಿ ‘ಪುಂಡಲೀಕ ಹಾಲಂಬಿ ಪ್ರಶಸ್ತಿ’ ಪ್ರದಾನ
    Awards

    ಗುಂಡ್ಮಿ ಸಾಲಿಗ್ರಾಮದ ಯಕ್ಷಗಾನ ಕಲಾಕೇಂದ್ರದಲ್ಲಿ ‘ಪುಂಡಲೀಕ ಹಾಲಂಬಿ ಪ್ರಶಸ್ತಿ’ ಪ್ರದಾನ

    September 17, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಗುಂಡ್ಮಿ : ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲಾ ಘಟಕ, ಹಂಗಾರಕಟ್ಟೆ ಯಕ್ಷಗಾನ ಕಲಾಕೇಂದ್ರ, ಸಾಸ್ತಾನ ರೋಟರಿ ಕ್ಲಬ್ ಸಹಕಾರದಲ್ಲಿ ಗುಂಡ್ಮಿ ಸಾಲಿಗ್ರಾಮದ ಯಕ್ಷಗಾನ ಕಲಾಕೇಂದ್ರದ ಸದಾನಂದ ರಂಗಮಂಟಪದಲ್ಲಿ ದಿನಾಂಕ 15 ಸೆಪ್ಟೆಂಬರ್ 2024ರಂದು ಜಿ. ಸರೋಜಮ್ಮ ಪ್ರಾಯೋಜಿತ ಪುಂಡಲೀಕ ಹಾಲಂಬಿ ದತ್ತಿ ಕಾರ್ಯಕ್ರಮದಲ್ಲಿ ಯಕ್ಷಗಾನ ಕಲಾವಿದ ಐರೋಡಿ ಗೋವಿಂದಪ್ಪ ಇವರಿಗೆ ‘ಪುಂಡಲೀಕ ಹಾಲಂಬಿ ಪ್ರಶಸ್ತಿ’ ಪ್ರದಾನ ಮಾಡಲಾಯಿತು.

    ಪತ್ರಕರ್ತ ಎಸ್. ಜನಾರ್ದನ ಮರವಂತೆ ಪ್ರಶಸ್ತಿ ಪ್ರದಾನ ಮಾಡಿದರು. ಹಂಗಾರಕಟ್ಟೆ ಯಕ್ಷಗಾನ ಕಲಾಕೇಂದ್ರದ ಅಧ್ಯಕ್ಷ ಆನಂದ ಸಿ. ಕುಂದರ್ ಇವರು ಈ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕ.ಸಾ.ಪ. ಜಿಲ್ಲಾ ಘಟಕದ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಅಧ್ಯಕ್ಷತೆ ವಹಿಸಿದ್ದರು. ಗೌರವ ಕಾರ್ಯದರ್ಶಿ ಸುಬ್ರಹ್ಮಣ್ಯ ಶೆಟ್ಟಿ ಆಶಯ ಭಾಷಣ ಮಾಡಿದರು. ಶಿಕ್ಷಕ ನರೇಂದ್ರ ಕುಮಾರ ಪ್ರಶಸ್ತಿ ಪುರಸ್ಕೃತರ ಪರಿಚಯ ಮಾಡಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಉಪನಿರ್ದೇಶಕಿ ಪೂರ್ಣಿಮಾ, ಹಾಲಂಬಿ ಅವರ ಪತ್ನಿ ಜಿ. ಸರೋಜಮ್ಮ, ಕಲಾಕೇಂದ್ರದ ಕಾರ್ಯದರ್ಶಿ ರಾಜಶೇಖರ ಹೆಬ್ಬಾರ್, ಗೋಳಿಗರಡಿ ಮೇಳದ ಯಜಮಾನ ವಿಠಲ ಪೂಜಾರಿ, ಯಕ್ಷಗಾನ ಚಿಂತಕ ಸುರೇಂದ್ರ ಫಣಿಯೂರು, ಕ.ಸಾ.ಪ. ಗೌರವಾಧ್ಯಕ್ಷ ಮನೋಹರ್, ರೋಟರಿ ಕ್ಲಬ್‌ನ ಅಧ್ಯಕ್ಷೆ ಲೀಲಾವತಿ ಗಂಗಾಧರ ಪೂಜಾರಿ, ಕಾಪು ತಾಲೂಕು ಕ.ಸಾ.ಪ. ಅಧ್ಯಕ್ಷ ಪುಂಡಲೀಕ ಮರಾಠೆ, ಬ್ರಹ್ಮಾವರದ ರಾಮಚಂದ್ರ ಐತಾಳ ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr WhatsApp Email
    Previous Articleಕಣಿಪುರ ಕ್ಷೇತ್ರದಲ್ಲಿ ‘ಭಕ್ತಿರಸ’ ಭಕ್ತಿ ಭಾವಗೀತೆಗಳ ಕಲಿಕಾ ಕಾರ್ಯಾಗಾರ | ಸೆಪ್ಟೆಂಬರ್ 29
    Next Article ಡಾ. ಎಸ್.ಎಲ್. ಭೈರಪ್ಪರವರ ‘ಪರ್ವ’ ಕಾದಂಬರಿಯ ಒಂದು ವಿಶ್ಲೇಷಣೆ | ಸೆಪ್ಟೆಂಬರ್ 19
    roovari

    Comments are closed.

    Related Posts

    ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ದತ್ತಿ ಉಪನ್ಯಾಸ ಮತ್ತು ದತ್ತಿ ಪುರಸ್ಕಾರ ಪ್ರದಾನ | ಮೇ 21

    May 20, 2025

    ಮಂಗಳೂರು ಉರ್ವಸ್ಟೋರಿನಲ್ಲಿ ಕನ್ನಡ ಭವನ ದಕ್ಷಿಣ ಕನ್ನಡ ಜಿಲ್ಲಾ ಘಟಕ ಉದ್ಘಾಟನೆ | ಮೇ 25

    May 20, 2025

    ಉಡುಪಿಯ ಕೊಡವೂರು ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ ‘ಕಲಾಯತನ’ ಸಾಹಿತ್ಯ ಯಕ್ಷ ಸಂಭ್ರಮ

    May 20, 2025

    ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘದಿಂದ ತಾಳಮದ್ದಳೆ ಕಾರ್ಯಕ್ರಮ

    May 20, 2025

    Comments are closed.

    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.