ಮಣಿಪಾಲ : ಹೆಜ್ಜೆ ಗೆಜ್ಜೆ ಫೌಂಡೇಶನ್ (ರಿ.) ಉಡುಪಿ-ಮಣಿಪಾಲ್ ಇದರ ವತಿಯಿಂದ ‘ಪುರಂದರ ಗಾನ ನರ್ತನ’ ಶ್ರೀ ಪುರಂದರ ದಾಸರ ರಚನೆಗಳಿಗೆ ಏಕವ್ಯಕ್ತಿ ಗಾನ ನೃತ್ಯಾರ್ಪಣೆ ಕಾರ್ಯಕ್ರಮವು ದಿನಾಂಕ 03 ಜನವರಿ 2026ರಂದು ಬೆಳಗ್ಗೆ 8-30 ಗಂಟೆಗೆ ಉಡುಪಿಯ ಎಂ.ಜಿ.ಎಂ. ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ನಡೆಯಲಿದೆ.
ಭರತನಾಟ್ಯ ಕಲಾವಿದೆ ವಿದುಷಿ ದೀಕ್ಷಾ ರಾಮಕೃಷ್ಣ ಇವರು ನೃತ್ಯ ಪ್ರಸ್ತುತಿ ನೀಡಲಿದ್ದು, ವಿದ್ವಾನ್ ಸತೀಶ್ ಭಟ್ ಹೆಗ್ಗಾರ್ ಮತ್ತು ವಿದ್ವಾನ್ ಶಶಿಕಿರಣ್ ಹಾರ್ಮೋನಿಯಂನಲ್ಲಿ ಹಾಗೂ ಉಡುಪಿಯ ವಿದ್ವಾನ್ ಮಾಧವಾಚಾರ್ ಮತ್ತು ವಿದುಷಿ ವಿಜೇತಾ ಹೆಗಡೆ ತಬಲದಲ್ಲಿ ಸಹಕರಿಸಲಿದ್ದಾರೆ. ಸಂಜೆ 5-00 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದ್ದು, 6-00 ಗಂಟೆಗೆ ವಿದುಷಿ ದೀಕ್ಷಾ ರಾಮಕೃಷ್ಣ ಮತ್ತು ಹೆಜ್ಜೆ ಗೆಜ್ಜೆ ವಿದ್ಯಾರ್ಥಿಗಳಿಂದ ನೃತ್ಯ ಕಾರ್ಯಕ್ರಮ ನಡೆಯಲಿದೆ.

