Subscribe to Updates

    Get the latest creative news from FooBar about art, design and business.

    What's Hot

    ಮಂಗಳೂರಿನ ಸಂಸ್ಕಾರ ಭಾರತೀ ವತಿಯಿಂದ ‘ಭರತಮುನಿ ಸ್ಮೃತಿ ದಿನ’

    February 27, 2026

    ಉದಯೋನ್ಮುಖ ನೃತ್ಯ ಕಲಾವಿದೆ ಕುಮಾರಿ ವಿಶ್ವನೇತ ಡಿ. ಇವರ ಭರತನಾಟ್ಯ ರಂಗಪ್ರವೇಶ

    February 27, 2026

    ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್‌ನ ಪ್ರಥಮ ವಾರ್ಷಿಕೋತ್ಸವ ಸಮಾರಂಭ

    February 26, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ಸುಂಟಿಕೊಪ್ಪದಲ್ಲಿ ಪುಸ್ತಕ ವಾಚನ ಹಾಗೂ ವಿಮರ್ಶೆ ಕಾರ್ಯಕ್ರಮ
    Kannada

    ಸುಂಟಿಕೊಪ್ಪದಲ್ಲಿ ಪುಸ್ತಕ ವಾಚನ ಹಾಗೂ ವಿಮರ್ಶೆ ಕಾರ್ಯಕ್ರಮ

    January 29, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಸುಂಟಿಕೊಪ್ಪ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜ್ಞಾನ ವಿಕಾಸ ಕೇಂದ್ರದ ವತಿಯಿಂದ ಸ್ವಸಹಾಯ ಸಂಘದ ಸದಸ್ಯರಿಗೆ ಪುಸ್ತಕ ಓದಿ ವಿಮರ್ಶೆ ಮಾಡುವ ಕಾರ್ಯಕ್ರಮ ದಿನಾಂಕ 28 ಜನವರಿ 2025ರಂದು ಮಂಜಿಕರ ಸಮುದಾಯ ಭವನದಲ್ಲಿ ನಡೆಯಿತು.

    ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗವಹಿಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜ್ಞಾನ ವಿಕಾಸ ಕೇಂದ್ರದ ಸಮನ್ವಯಾಧಿಕಾರಿ ಮಾಲಿನಿ ನಾತನಾಡಿ “ಪ್ರತಿಯೊಬ್ಬರೂ ಪುಸ್ತಕವನ್ನು ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಬೇಕು. ಇದು ವ್ಯಕ್ತಿಯ ವ್ಯಕ್ತಿತ್ವ ವಿಕಾಸಗೊಳಿಸುತ್ತದೆ. ಇಂದಿನ ದಿನಗಳಲ್ಲಿ ನಾವುಗಳು ಪುಸ್ತಕಗಳನ್ನು ಓದುವ ಹವ್ಯಾಸದಿಂದ ದೂರ ಉಳಿದುಕೊಳ್ಳುತ್ತಿದ್ದೇವೆ. ಇದರಿಂದ ನಮ್ಮ ಜ್ಞಾನವು ಕುಂಠಿತಗೊಳ್ಳುತ್ತಿದೆ. ನಾವು ನಿತ್ಯ, ಪುಸ್ತಕಗಳನ್ನು ಓದುವುದರಿಂದ ವೈಯಕ್ತಿಕ ಜ್ಞಾನವನ್ನು ಬೆಳೆಸಿಕೊಳ್ಳಬಹುದಾಗಿದೆ.” ಎಂದು ಕರೆ ನೀಡಿದರು.
    ಜನನಿ ತಂಡದ ಸದಸ್ಯೆಯಾದ ರತ್ನ ಇವರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸ್ವಸಹಾಯ ಸಂಘಗಳಾದ ಜನನಿ, ಭೂಮಿಕ, ಕನ್ನಿಕ, ಭಗವತಿ ಹಾಗೂ ಧೃತಿ ಸಂಘದ ಸದಸ್ಯರು ಉಪಸ್ಥಿತರಿದ್ದರು.

    ಕಾರ್ಯಕ್ರಮದಲ್ಲಿ ಸದಸ್ಯರಿಗೆ ಪುಸ್ತಕ ವಿತರಿಸಲಾಯಿತು. ನಂತರ ಪುಸ್ತಕದಲ್ಲಿ ವಾಚಿಸಿದ ವಾಕ್ಯಗಳನ್ನು ಆರಿಸಿಕೊಂಡು ವಿಮರ್ಶೆ ಮಾಡಿಸುವ ಮೂಲಕ ವಿಜೇತರಿಗೆ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಯಿತು. ಒಕ್ಕೂಟದ ಸದಸ್ಯೆಯಾದ ಅಶ್ವಿನಿ ಸ್ವಾಗತಿಸಿ, ಕಾವ್ಯ ವಂದಿಸಿದರು.

    kannada Literature
    Share. Facebook Twitter Pinterest LinkedIn Tumblr WhatsApp Email
    Previous Articleಲೇಖನ – ಒಂದು ಮೌಲಿಕ ಉಪನ್ಯಾಸ – ರಾಮಾಯಣದಲ್ಲಿ ಮೌಲ್ಯ ಸಂಘರ್ಷ
    Next Article ಮಂಗಳೂರಿನ ಎರಿಕ್ ಮಥಾಯಸ್ ಸಭಾಂಗಣದಲ್ಲಿ ‘ಗಾಂಧಿ ಸ್ಮೃತಿ’ ಕಾರ್ಯಕ್ರಮ
    roovari

    Add Comment Cancel Reply


    Related Posts

    ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್‌ನ ಪ್ರಥಮ ವಾರ್ಷಿಕೋತ್ಸವ ಸಮಾರಂಭ

    February 26, 2026

    ಉಷಾ ಕೆ.ವಿ. ಇವರ ‘ವೇದಾಂತ’ ಹಾಗೂ ‘ಸ್ಪಂದನ’ ಕೃತಿಗಳ ಲೋಕಾರ್ಪಣಾ ಸಮಾರಂಭ

    February 26, 2026

    ಸುಳ್ಯದ ನೆಹರೂ ಸ್ಮಾರಕ ಕಾಲೇಜಿನಲ್ಲಿ ಅರೆಭಾಷೆ ರಾಷ್ಟ್ರೀಯ ವಿಚಾರ ಸಂಕಿರಣ ಮತ್ತು ವಿಚಾರಗೋಷ್ಠಿ

    February 26, 2026

    ಪುಸ್ತಕ ವಿಮರ್ಶೆ | ಪೌರಾಣಿಕ ಕಥೆಗಳಲ್ಲಿ ಆಸಕ್ತಿ ಮೂಡಿಸುವ ‘ಕಿರಿಯರ ಸಚಿತ್ರ ರಾಮಾಯಣ’

    February 26, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.