ಪುತ್ತೂರು : ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಪುತ್ತೂರು ತಾಲೂಕು ಘಟಕವು ಬಪ್ಪಳಿಗೆಯ ಅಂಬಿಕಾ ಕೇಂದ್ರೀಯ ವಿದ್ಯಾಲಯದ ಸಹಯೋಗದೊಂದಿಗೆ ಆಯೋಜಿಸುವ ಪುತ್ತೂರು ತಾಲೂಕು ಮಕ್ಕಳ ಸಾಹಿತ್ಯ ಸಮ್ಮೇಳನವು ದಿನಾಂಕ 20-12-2023ರ ಬುಧವಾರದಂದು ನಡೆಯಲಿದೆ.
ಯುವ ಜನತೆಯನ್ನು ಸಾಹಿತ್ಯ ಲೋಕಕ್ಕೆ ಬರಮಾಡಿಕೊಂಡು ಅವರಿಗೆ ಸೂಕ್ತ ವೇದಿಕೆಯನ್ನು ಕಲ್ಪಿಸುವ ನಿಟ್ಟಿನಲ್ಲಿ ಕವಿಗೋಷ್ಠಿ ಮಾತ್ರವಲ್ಲದೆ ಸಾಹಿತ್ಯ ಸಮ್ಮೇಳನದಲ್ಲಿ ಪ್ರಸ್ತುತ ಶಿಕ್ಷಣ ವ್ಯವಸ್ಥೆ, ಆಧುನಿಕ ತಂತ್ರಜ್ಞಾನದ ಬಳಕೆ, ನಾನು ಮೆಚ್ಚುವ ಶಿಕ್ಷಕ, ರಾಷ್ಟ್ರ ನಿರ್ಮಾಣದಲ್ಲಿ ವಿದ್ಯಾರ್ಥಿಗಳ ಪಾತ್ರ ಇತ್ಯಾದಿ ವಿಷಯಗಳಲ್ಲಿ ವಿಚಾರಗೋಷ್ಠಿ ಹಾಗೂ ಚರ್ಚಾ ಕೂಟಗಳು ನಡೆಯಲಿವೆ.
ವಿವಿಧ ಗೋಷ್ಠಿಗಳಲ್ಲಿ ಭಾಗವಹಿಸಲು ಅರ್ಜಿ ಆಹ್ವಾನ
ಸಾಹಿತ್ಯ ಲೋಕಕ್ಕೆ ಉತ್ತಮ ಸಾಹಿತಿಗಳನ್ನು ಹಾಗೂ ವಾಗ್ಮಿಗಳನ್ನು ಕೊಡುಗೆಯಾಗಿ ನೀಡುವ ನಿಟ್ಟಿನಲ್ಲಿ ಈ ಮಕ್ಕಳ ಸಾಹಿತ್ಯ ಸಮ್ಮೇಳನದ ಎಲ್ಲಾ ಪ್ರಮುಖ ಸ್ಥಾನಗಳನ್ನು ವಿದ್ಯಾರ್ಥಿಗಳಿಗೆ ನೀಡುವ ಯೋಜನೆಯನ್ನು ಪ್ರಸ್ತಾಪಿಸಲಾಗಿ ಈ ಕೆಳಗಿನ ವಿವಿಧ ಗೋಷ್ಠಿಗಳಿಗೆ ಪುತ್ತೂರು ತಾಲೂಕಿನಲ್ಲಿ ಅಧ್ಯಯನ ಮಾಡುತ್ತಿರುವ ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜು ಸಾಹಿತ್ಯಾಸಕ್ತ ವಿದ್ಯಾರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.
1. ಮಕ್ಕಳ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ಸ್ಥಾನ-1
2. ಮಕ್ಕಳ ಸಾಹಿತ್ಯ ಸಮ್ಮೇಳನದ ಸಮಾರೋಪ ಭಾಷಣ-1
3. ಕವಿಗೋಷ್ಠಿಯ ಅಧ್ಯಕ್ಷತೆ-1
4. ವಿಚಾರಗೋಷ್ಠಿಯ ಅಧ್ಯಕ್ಷತೆ-1
5. ಕವಿ ಗೋಷ್ಠಿಯಲ್ಲಿ ಭಾಗವಹಿಸುವ ಯುವ ಕವಿಗಳು (10 ವಿದ್ಯಾರ್ಥಿಗಳಿಗೆ ಅವಕಾಶ)
6. ವಿಚಾರಗೋಷ್ಠಿಯಲ್ಲಿ ಭಾಗವಹಿಸುವ ವಿದ್ಯಾರ್ಥಿಗಳು (8 ವಿದ್ಯಾರ್ಥಿಗಳಿಗೆ ಅವಕಾಶ)
7. ಸಾಂಸ್ಕೃತಿಕ ಕಾರ್ಯಕ್ರಮ ನೀಡಲು (3 ತಂಡಗಳಿಗೆ ಅವಕಾಶ )
ಆಸಕ್ತ ವಿದ್ಯಾರ್ಥಿಗಳು ತಮ್ಮ ಹೆಸರು, ಶಾಲೆಯ ಹೆಸರು ಮತ್ತು ಊರು, ಆಸಕ್ತ ಸ್ಥಾನದ ವಿವರವನ್ನು 30 ಸೆಕೆಂಡುಗಳ ವೀಡಿಯೋ ಮಾಡಿ ತಮ್ಮ ಶಾಲಾ ಮುಖ್ಯಸ್ಥರ ಮೂಲಕ ಶ್ರೀಮತಿ ಮಲ್ಲಿಕಾ ಇವರ 9482760480 ಈ ವಾಟ್ಸಪ್ಪ್ ಸಂಖ್ಯೆಗೆ ದಿನಾಂಕ 30-11-2023 ರ ಮೊದಲು ಕಳುಹಿಸಬೇಕಾಗಿ ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಪುತ್ತೂರು ಉಮೇಶ್ ನಾಯಕ್ ಅವರು ತಿಳಿಸಿದ್ದಾರೆ