ಕಾಸರಗೋಡು : ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಕರ್ನಾಟಕ ಸರಕಾರ, ಪುವೆಂಪು ಪ್ರತಿಷ್ಠಾನ ಕಾಸರಗೋಡು, ಕೇರಳ ತುಳು ಅಕಾಡೆಮಿ ಮಂಜೇಶ್ವರ ಇವರು ಸಂಯುಕ್ತವಾಗಿ ‘ಪುವೆಂಪು ನೆನಪು 2025’ ಕಾರ್ಯಕ್ರಮವನ್ನು ದಿನಾಂಕ 15 ಅಕ್ಟೋಬರ್ 2025ರಂದು ಬೆಳಗ್ಗೆ 9-00 ಗಂಟೆಗೆ ಮಂಜೇಶ್ವರದ ಹೊಸಂಗಡಿ ದುರ್ಗಿಪಳ್ಳದಲ್ಲಿರುವ ಕೇರಳ ತುಳು ಅಕಾಡೆಮಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದಾರೆ.
ಬೆಳಿಗ್ಗೆ 9-00 ಗಂಟೆಗೆ ಭಾವ ಗಾಯನ, ನೃತ್ಯ ವೈಭವ ನಡೆಯಲಿದೆ. ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸೋಮಣ್ಣ ಬೇವಿನ ಮರದ ಇವರ ವಹಿಸಲಿದ್ದು, ಮಾನ್ಯ ಸಭಾಪತಿಗಳಾದ ಬಸವರಾಜ ಎಸ್. ಹೊರಟ್ಟಿ ಇವರು ಉದ್ಘಾಟನೆ ಮಾಡಲಿದ್ದಾರೆ. ಡಾ. ಮೀನಾಕ್ಷಿ ರಾಮಚಂದ್ರ ಇವರು ನುಡಿ ನಮನಗಳನ್ನಾಡಲಿದ್ದು, ಹಿರಿಯ ಸಹಿತ ಪ್ರೊ. ಎಸ್.ಜಿ. ಸಿದ್ಧರಾಮಯ್ಯ ಇವರಿಗೆ ‘ಪುವೆಂಪು ಪ್ರಶಸ್ತಿ’ಯನ್ನು ಮಾಜಿ ಸಚಿವರಾದ ಹೆಚ್.ಎಂ. ರೇವಣ್ಣ ಇವರು ಪ್ರದಾನ ಮಾಡಲಿದ್ದಾರೆ. ಸಭಾ ಕಾರ್ಯಕ್ರಮದ ಬಳಿಕ ಪುರುಷೋತ್ತಮ ಭಟ್ ಕೆ. ಮಟ್ಟಿ ರಾಮಪ್ಪ ಮಂಜೇಶ್ವರ ಇವರ ನಿರ್ವಹಣೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ‘ಪುವೆಂಪು ಚತುರ್ಭಾಷಾ ಕಾವ್ಯ ಸಂವಾದ’ದಲ್ಲಿ ಹಿರಿಯ ಕವಿ ರಾಧಾಕೃಷ್ಣ ಕೆ. ಉಳಿಯತ್ತಡ್ಕ ಇವರು ಸಮನ್ವಯಕಾರರಾಗಿ ಭಾಗವಹಿಸಲಿದ್ದಾರೆ.