ಮಡಿಕೇರಿ : ಕರ್ನಾಟಕ ಸುವರ್ಣ ಸಂಭ್ರಮ 50 ಕಾರ್ಯಕ್ರಮದ ಅಂಗವಾಗಿ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಎ.ಎಲ್.ಜಿ .ಕ್ರೆಸೆಂಟ್ ಶಾಲೆ, ಕೊಡಗು ಜಿಲ್ಲಾ ಬ್ಯಾರಿ ವೆಲ್ಫೇರ್ ಟ್ರಸ್ಟ್( ರಿ ), ಕೊಡಗು ಜಿಲ್ಲಾ ಮಹಿಳಾ ಬರಹಗಾರರ ಸಂಘ (ರಿ), ಮಡಿಕೇರಿ.ಇವರ ಸಂಯುಕ್ತ ಆಶ್ರಯದಲ್ಲಿ, 69ನೇ ಕನ್ನಡ ರಾಜ್ಯೋತ್ಸವ, ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದ ರಸಪ್ರಶ್ನೆ ಮತ್ತು ಗೀತಗಾಯನ ಕಾರ್ಯಕ್ರಮವು ಮಡಿಕೇರಿಯ ಮಹದೇವಪೇಟೆ ಎ. ಎಲ್. ಜಿ. ಕ್ರೆಸೆಂಟ್ ಶಾಲೆಯ ಸಭಾಂಗಣದಲ್ಲಿ ದಿನಾಂಕ 23 ನವೆಂಬರ್ 2024ರ ಬೆಳಿಗ್ಗೆ 10.30 ಗಂಟೆಗೆ ನಡೆಯಲಿದೆ.
ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಎಂ.ಪಿ. ಕೇಶವ ಕಾಮತ್ ಇವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಕಾರ್ಯಕ್ರಮವನ್ನು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ. ಮಂಥರ್ ಗೌಡ ಉದ್ಘಾಟಿಸಿಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಎ. ಎಲ್. ಜಿ. ಕ್ರೆಸೆಂಟ್ ಶಾಲೆಯ ಅಧ್ಯಕ್ಷರಾದ ನಿಜಾಮುದ್ದಿನ್ ಸಿದ್ದೀಖ್ , ಕೊಡಗು ಜಿಲ್ಲಾ ಬ್ಯಾರಿ ವೆಲ್ಫೇರ್ ಟ್ರಸ್ಟ್( ರಿ.) ಇದರ ಅಧ್ಯಕ್ಷ ಹಾಗೂ ಕೊಡಗು ಜಿಲ್ಲಾ ಕ. ಸಾ. ಪ. ಇದರ ಗೌರವ ಕಾರ್ಯದರ್ಶಿಗಳಾದ ಎಸ್. ಐ. ಮುನೀರ್ ಅಹ್ಮದ್, ಕೊಡಗು ಜಿಲ್ಲಾ ಬ್ಯಾರಿ ವೆಲ್ಫೇರ್ ಟ್ರಸ್ಟ್( ರಿ.) ಇದರ ಉಪಾಧ್ಯಕ್ಷರಾದ ಎಂ. ಬಿ. ನಾಸಿರ್ ಅಹಮದ್, ಕೊಡಗು ಜಿಲ್ಲಾ ಮಹಿಳಾ ಬರಹಗಾರರ ಸಂಘದ ಅಧ್ಯಕ್ಷ್ಯೆ ಹಾಗೂ ಕೊಡಗು ಜಿಲ್ಲಾ ಕ. ಸಾ. ಪ. ಇದರ ಗೌರವ ಕಾರ್ಯದರ್ಶಿಗಳಾದ ಶ್ರೀಮತಿ ಪುದಿಯನೆರವನ ರೇವತಿ ರಮೇಶ್, ಕೊಡಗು ಜಿಲ್ಲಾ ಕ. ಸಾ. ಪ. ಇದರ ಗೌರವ ಕೋಶಾಧಿಕಾರಿಯಾದ ಎಸ್. ಎಸ್. ಸಂಪತ್ ಕುಮಾರ್, ಮಡಿಕೇರಿ ತಾಲೂಕು ಕ. ಸಾ. ಪ. ಇದರ ಅಧ್ಯಕ್ಷರಾದ ಶ್ರೀಮತಿ ಕಡ್ಲೇರ ತುಳಸಿ ಮೋಹನ್ ಭಾಗವಹಿಸಲಿದ್ದಾರೆ
ಕಾರ್ಯಕ್ರಮದಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ನಡೆಯುವ ರಸಪ್ರಶ್ನೆ ಕಾರ್ಯಕ್ರಮವನ್ನು ಜಿಲ್ಲೆಯ ಹಿರಿಯ ಸಾಹಿತಿ ಬಿ. ಎ. ಶಂಶುದ್ದೀನ್ ನಡೆಸಿಕೊಡಲಿದ್ದಾರೆ.
Subscribe to Updates
Get the latest creative news from FooBar about art, design and business.
ಮಡಿಕೇರಿಯಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದ ರಸಪ್ರಶ್ನೆ ಮತ್ತು ಗೀತಗಾಯನ ಸ್ಪರ್ಧೆ | ನವೆಂಬರ್ 23
Previous Articleಪುಸ್ತಕ ವಿಮರ್ಶೆ | ಸಾತ್ವಿಕ ಚಿಂತನೆಗಳ ‘ಅವಕಾಶವೆಂಬ ಅಮೃತ ಘಳಿಗೆ’