ಸುರತ್ಕಲ್ : ಮಣಿ ಕೃಷ್ಣಸ್ವಾಮಿ ಅಕಾಡೆಮಿ (ರಿ.) ಇದರ ವತಿಯಿಂದ ಕರ್ನಾಟಕ ಸರ್ಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಕಾರದೊಂದಿಗೆ ಪ್ರಸ್ತುತ ಪಡಿಸುವ ‘ರಾಗ ಸುಧಾರಸ -2025’ ಸಂಗೀತ ನೃತ್ಯೋತ್ಸವದ ಉದ್ಘಾಟನೆಯು ದಿನಾಂಕ 07 ಡಿಸೆಂಬರ್ 2025ರಂದು ಬೆಳಗ್ಗೆ 5-00 ಗಂಟೆಗೆ ಸುರತ್ಕಲ್ಲಿನ ನಾಗಬನ ರೋಡ್ ಇಲ್ಲಿರುವ ಅನುಪಲ್ಲವಿಯ ಶ್ರೀ ವಿಶ್ವೇಶತೀರ್ಥ ಸಭಾಂಗಣದಲ್ಲಿ ನಡೆಯಲಿದೆ. ಶರವು ಶ್ರೀ ಮಹಾ ಗಣಪತಿ ದೇವಸ್ಥಾನದ ಶಿಲೆ ಶಿಲೆ ಆಡಳಿತ ಮೊಕ್ತೇಸರರಾದ ಪೂಜ್ಯ ಶ್ರೀ ಶರವು ರಾಘವೇಂದ್ರ ಶಾಸ್ತ್ರಿ ಇವರು ಈ ಕಾರ್ಯಕ್ರಮದ ಉದ್ಘಾಟನೆ ಮಾಡಲಿದ್ದಾರೆ.

